ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cyclone Montha: ಕರ್ನಾಟಕಕ್ಕೂ ಮೋಂತಾ ಚಂಡಮಾರುತ ಎಫೆಕ್ಟ್: ಎಲ್ಲಿ ಎಷ್ಟು ದಿನ ಮಳೆ?

Karnataka: ಚಂಡಮಾರುತದ ಕೇಂದ್ರಬಿಂದು ಕರ್ನಾಟಕದಿಂದ ದೂರವಿದ್ದರೂ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿ ಭಾಗಗಳಿಗೆ ಹತ್ತಿರದಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆಗಳು ದಟ್ಟವಾಗಿವೆ. ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಹೀಗೆ ಗಡಿಯಲ್ಲಿರುವ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಅ.27: ಬಂಗಾಳಕೊಲ್ಲಿಯಲ್ಲಿ (Bengal bay) ಕಾಣಿಸಿಕೊಂಡಿರುವ ಮೋಂತಾ ಚಂಡಮಾರುತ (Cyclone Montha) ರಭಸದಿಂದ ಆಂಧ್ರಪ್ರದೇಶ ಹಾಗೂ ಒರಿಸ್ಸಾ ಕರಾವಳಿ ಪ್ರದೇಶದತ್ತ ಧಾವಿಸುತ್ತಿದೆ. ಇದರ ಪರಿಣಾಮ ಬೆಂಗಳೂರು (Bengaluru) ಹಾಗೂ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಅಕ್ಟೋಬರ್ 26 ರಂದು ಬೆಳಿಗ್ಗೆ 8:30 ಕ್ಕೆ, ಈ ಹವಾಮಾನವು ಪೋರ್ಟ್ ಬ್ಲೇರ್‌ನ ಪಶ್ಚಿಮಕ್ಕೆ ಸುಮಾರು 620 ಕಿ.ಮೀ., ಚೆನ್ನೈನ ಪೂರ್ವ-ಆಗ್ನೇಯಕ್ಕೆ 780 ಕಿ.ಮೀ., ಮತ್ತು ವಿಶಾಖಪಟ್ಟಣಂನ ದಕ್ಷಿಣ-ಆಗ್ನೇಯಕ್ಕೆ 830 ಕಿ.ಮೀ. ದೂರದಲ್ಲಿತ್ತು. ಇದು ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿದೆ. ಇದು ಸೋಮವಾರ (ಅಕ್ಟೋಬರ್ 27) ರ ವೇಳೆಗೆ ಚಂಡಮಾರುತವಾಗಿ ಮತ್ತು ಮಂಗಳವಾರ (ಅಕ್ಟೋಬರ್ 28) ರ ವೇಳೆಗೆ ತೀವ್ರ ಚಂಡಮಾರುತವಾಗಿ ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ ಎಂದು ಸಂಸ್ಥೆ ತಿಳಿಸಿದೆ.

ಬೆಂಗಳೂರು ಸೇರಿ ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ?

ಚಂಡಮಾರುತದ ಕೇಂದ್ರಬಿಂದು ಕರ್ನಾಟಕದಿಂದ ದೂರವಿದ್ದರೂ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿ ಭಾಗಗಳಿಗೆ ಹತ್ತಿರದಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆಗಳು ದಟ್ಟವಾಗಿವೆ. ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಹೀಗೆ ಗಡಿಯಲ್ಲಿರುವ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather: ಇಂದು ಬೆಳಗಾವಿ, ಧಾರವಾಡ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭರ್ಜರಿ ಮಳೆ ನಿರೀಕ್ಷೆ

ಚಂಡಮಾರುತದ ಶಕ್ತಿ ವೃದ್ಧಿಯಾದರೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಬಹುದು. ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯ ಪ್ರಕಾರ, ಅ. 28-29ರವರೆಗೆ ಚಂಡಮಾರುತದ ಎಫೆಕ್ಟ್ ಇರಲಿದೆ. ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಹೊಂದಿಕೊಂಡಿರುವ ಕರ್ನಾಟಕದ ಜಿಲ್ಲೆಗಳಿಗೆ ಮಳೆ ಬೀಳುವ ಸಾಧ್ಯತೆಗಳಿವೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳಲ್ಲಿ ಮಳೆಯಾಗಬಹುದು. ಆದರೆ, ಚಂಡಮಾರುತದ ವೇಗ ಕುಗ್ಗಿದರೆ ಬೆಂಗಳೂರು ಹಾಗೂ ದಕ್ಷಿಣ ಒಳನಾಡು - ಮಲೆನಾಡಿನ ಜಿಲ್ಲೆಗಳಲ್ಲಿ ಅ. 28-29ರಂದು ಮೋಡ ಮುಸುಕಿದ ವಾತಾವರಣ ಇರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಮೋಂತಾ ಚಂಡಮಾರುತ ರೂಪುಗೊಳ್ಳುತ್ತಿದ್ದು, ಅಕ್ಟೋಬರ್ 27 ರಿಂದ ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಚಂಡಮಾರುತವು ಕರಾವಳಿಯತ್ತ ಸಾಗುತ್ತಿದ್ದು, ವಿಶಾಖಪಟ್ಟಣಂ, ಚೆನ್ನೈ, ಕಾಕಿನಾಡ, ಮತ್ತು ಗೋಪಾಲಪುರ ಮುಂತಾದ ಪ್ರದೇಶಗಳ ಮೇಲೆ ಪ್ರಭಾವ ಬೀರಲಿದೆ. ಪರಿಸ್ಥಿತಿಯನ್ನು ಎದುರಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ಸನ್ನದ್ಧಗೊಳಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಹರೀಶ್‌ ಕೇರ

View all posts by this author