Bantwal News: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ಸಾವು, ನಾಲ್ವರು ಮಕ್ಕಳಿಗೆ ಗಂಭೀರ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪ ಕಲ್ಲೆಟ್ಟಿ ಘಟನೆ ನಡೆದಿದೆ. ಸಂಜೆ ಮಕ್ಕಳನ್ನು ಬಿಡಲು ಹೋಗುತ್ತಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದ ಬಸ್ ಮೇಲೆ ಮರ ಉರುಳಿ ಬಿದ್ದು ಬಾಲಕಿ ಮೃತಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ.
-
ಬಂಟ್ವಾಳ: ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಒಬ್ಬ ಬಾಲಕಿ ಮೃತಪಟ್ಟು, ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ (Bantwal News) ಬಂಟ್ವಾಳ ತಾಲೂಕಿನ ಬರಿಮಾರು ಸಮೀಪ ಕಲ್ಲೆಟ್ಟಿ ಎಂಬಲ್ಲಿ ನಡೆದಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಬಸ್ ಮೇಲೆ ಬುಧವಾರ ಸಂಜೆ ಮರ ಉರುಳಿ ದುರಂತ ಸಂಭವಿಸಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ಚಿರನ್ವಿ (6) ಎಂಬ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿರುವುದಾಗಿ ಪೋಷಕರು ತಿಳಿಸಿದ್ದಾರೆ. ಬಿಳಿಯೂರಿನ ಚಂದ್ರಶೇಖರ ಮತ್ತು ಅನಿತಾ ಅವರ ಪುತ್ರಿ ಚಿರನ್ವಿ ಎಲ್.ಕೆ.ಜಿ. ಓದುತ್ತಿದ್ದಳು.
ಸಂಜೆ ಮಕ್ಕಳನ್ನು ಬಿಡಲು ಎಂದಿನಂತೆಯೇ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಂಗ್ಲ ಮಾಧ್ಯಮ ವಿಭಾಗದಿಂದ ಹೊರಟ ಬಸ್, ಹೆದ್ದಾರಿ ಮೂಲಕ ಸಾಗಿ ಮಾಣಿ, ಭರಣಿಕೆರೆ, ಕಲ್ಲೆಟ್ಟಿಗೆ ಹೋಗಿ ಬಳಿಕ ಪೆರ್ನೆಗೆ ಹೋಗಬೇಕಿತ್ತು. ಕೆಲ ಮಕ್ಕಳನ್ನು ಇಳಿಸಿದ ಬಳಿಕ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿನ ಶ್ರೀ ಕಾನಲ್ತಾಯ ದೈವಸ್ಥಾನದ ಬದಿಯ ಮರ, ಶಾಲಾ ಬಸ್ ಮೇಲೆ ಬಿದ್ದಿದೆ. ಇದರಿಂದ ಬಸ್ ಸಂಪೂರ್ಣ ಜಖಂಗೊಂಡಿದೆ. ಇದರಿಂದ ಒಬ್ಬ ಬಾಲಕಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ.
ತುಮಕೂರು – ಬೆಂಗಳೂರು ಹೈವೇಯಲ್ಲಿ ಕೆಮಿಕಲ್ ತುಂಬಿದ್ದ ಲಾರಿ ಪಲ್ಟಿ; ಕ್ಲೋರೈಡ್ ಸೋರಿಕೆ
ಈ ಕುರಿತು ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಪ್ರತಿಕ್ರಿಯಿಸಿ, ಗಾಳಿಯಿಂದಾಗಿ ಶಾಲಾ ಬಸ್ ಮೇಲೆ ಮರ ಬಿದ್ದಿದೆ. ಮುಂಭಾಗದಲ್ಲಿ ಕುಳಿತಿದ್ದ ಪುಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. ಗಾಯಗೊಂಡ ಒಂದು ಮಗು ತುಂಬೆಯಲ್ಲಿ ಹಾಗೂ ಮೂವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.