ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Mangaluru Student kidnap: ಹಿಂದೂ ಯುವಕನ ಜತೆ ಪ್ರೀತಿ; ಮಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯ ಕಿಡ್ನ್ಯಾಪ್‌! Video

ಅಪಹರಣಕ್ಕೊಳಗಾದ ಯುವತಿ ಮುಸ್ಲಿಂ ಸಮುದಾಯದ ಮೆಡಿಕಲ್ ವಿದ್ಯಾರ್ಥಿನಿಯಾಗಿದ್ದಾಳೆ. ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆಕೆಯ ಕುಟುಂಬಸ್ಥರೇ ಕಾಲೇಜು ಆವರಣಕ್ಕೆ ಬಂದು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಹಾಡಹಗಲೇ ವಿದ್ಯಾರ್ಥಿನಿಯ ಕಿಡ್ನ್ಯಾಪ್‌!

-

Prabhakara R
Prabhakara R Nov 20, 2026 3:27 PM

ಮಂಗಳೂರು: ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಕಿಡ್ನ್ಯಾಪ್‌ ಮಾಡಿರುವ ಘಟನೆ ನಗರದ ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲಿ. ಯುವಕರ ಗುಂಪೊಂದು ಯುವತಿಯನ್ನು ಬಲವಂತವಾಗಿ ಥಾರ್‌ ಜೀಪ್‌ನಲ್ಲಿ ಎಳೆದೊಯ್ದಿದ್ದಾರೆ. ಅಪಹರಣದ (Mangaluru Student kidnap) ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಪಹರಣಕ್ಕೊಳಗಾದ ಯುವತಿ ಮುಸ್ಲಿಂ ಸಮುದಾಯದ ಮೆಡಿಕಲ್ ವಿದ್ಯಾರ್ಥಿನಿಯಾಗಿದ್ದಾಳೆ. ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆಕೆಯ ಕುಟುಂಬಸ್ಥರೇ ಕಾಲೇಜು ಆವರಣಕ್ಕೆ ಬಂದು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಲವು ವ್ಯಕ್ತಿಗಳು ಸೇರಿ ವಿದ್ಯಾರ್ಥಿನಿಯನ್ನು ಎಳೆದೊಯ್ದು ವಾಹನಕ್ಕೆ ಹತ್ತಿಸಿಕೊಂಡು ಪರಾರಿಯಾಗುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ.

ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿ, ಯುವತಿಯನ್ನು ಆಕೆಯ ಕುಟುಂಬಸ್ಥರೇ ಬಲವಂತವಾಗಿ ಕರೆದೊಯ್ದಿರುವ ಆರೋಪವಿದ್ದು, ಇದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಯುವತಿ ವಯಸ್ಕಳಾಗಿದ್ದು, ತಾನು ಎಲ್ಲಿ ಮತ್ತು ಯಾರೊಂದಿಗೆ ವಾಸಿಸಬೇಕು ಎಂದು ನಿರ್ಧರಿಸುವ ಸಂಪೂರ್ಣ ಕಾನೂನುಬದ್ಧ ಹಕ್ಕು ಆಕೆಗಿದೆ. ಘಟನೆ ನಡೆದ ತಕ್ಷಣವೇ ಕಾಲೇಜು ಆಡಳಿತ ಮಂಡಳಿ ಅಥವಾ ಸ್ಥಳದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರೆ, ಅಪಹರಣಕಾರರ ವಾಹನವು ನಗರದಿಂದ ದೂರ ಹೋಗುವ ಮೊದಲೇ ತಡೆದು ನಿಲ್ಲಿಸಿ ಯುವತಿಯನ್ನು ರಕ್ಷಿಸಬಹುದಿತ್ತು ಎಂದು ತಿಳಿಸಿದ್ದಾರೆ.



ಗೃಹಲಕ್ಷ್ಮಿ ಹಣ ಕೊಡಲು ನಿರಾಕರಿಸಿದ ಅಜ್ಜಿಯನ್ನು ಕೊಂದು ನದಿಗೆ ಎಸೆದ ಮೊಮ್ಮಗ; 2,300 ರೂಪಾಯಿ ಕಿತ್ತು ಪರಾರಿಯಾದ ಪಾಪಿ ಅಂದರ್‌

ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತೀವ್ರ ತನಿಖೆ ನಡೆಸಿ ಆದಷ್ಟು ಬೇಗ ಯುವತಿಯನ್ನು ಪತ್ತೆಹಚ್ಚುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.