ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಯಸ್ಸಿನ ಬಾಲಕಿ; ವಿಟ್ಲ ಠಾಣೆಯಲ್ಲಿ ಕೇರಳದ ಬಾಲಕನ ವಿರುದ್ಧ ಪೋಕ್ಸೋ ಕೇಸ್‌!

ಕೇರಳ ರಾಜ್ಯದ ನಿವಾಸಿಯಾಗಿರುವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಂದಿಗೆ ಅಪ್ರಾಪ್ತ ವಯಸ್ಸಿನ ಬಾಲಕಿ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದಳು ಎನ್ನಲಾಗಿದೆ. ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು ಬಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕೇಸ್‌ ದಾಖಲಾಗಿದೆ.

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಕೇರಳ ಮೂಲದ ಬಾಲಕನೊಬ್ಬನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ (Vitla police station) ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕೇರಳ ರಾಜ್ಯದ ನಿವಾಸಿಯಾಗಿರುವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಂದಿಗೆ ಅಪ್ರಾಪ್ತ ವಯಸ್ಸಿನ ಬಾಲಕಿ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದಳು ಎನ್ನಲಾಗಿದೆ. 2025ರ ಡಿಸೆಂಬರ್ 21ರಂದು ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು ಬಾಲಕ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪ ಕೇಳಿಬಂದಿದೆ.

ಇದಾದ ಬಳಿಕ 2026ರ ಸೆಪ್ಟೆಂಬರ್ 8ರಂದು ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೆಪ್ಟೆಂಬರ್ 9ರಂದು ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ ಅ.ಕ್ರ. 01/2026ರಂತೆ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳು ಹಾಗೂ BNS 2023ರ ಕಲಂ 64(2)(m) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಧಾರ್ಮಿಕ ಸ್ಥಳಕ್ಕೆ ಕರೆದೊಯ್ಯುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸರು!

ಘಟನೆ ನಡೆದ ಸ್ಥಳವು ಕೇರಳದ ವ್ಯಾಪ್ತಿಗೆ ಒಳಪಡುವುದರಿಂದ, ಮುಂದಿನ ಕಾನೂನು ಕ್ರಮ ಹಾಗೂ ತನಿಖೆಗಾಗಿ ಪ್ರಕರಣವನ್ನು ಘಟನಾ ಸ್ಥಳ ವ್ಯಾಪ್ತಿಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ.

ಹೆಜ್ಜೇನು ದಾಳಿ; ಚಿಕಿತ್ಸೆ ಫಲಿಸದೆ ವೃದ್ಧೆ ಸಾವು

ಬಂಟ್ವಾಳ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿಗೊಳಗಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಬಿ.ಕಸ್ಬಾ ಗ್ರಾಮದ ಕೆಮ್ಮಟ್ಟೆಗುಡ್ಡೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕಮಲ (75) ಮೃತಪಟ್ಟ ದುರ್ದೈವಿ.

ಬುಧವಾರ ಬೆಳಗ್ಗೆ ತಮ್ಮ ಮನೆಯ ಪಕ್ಕದಲ್ಲಿದ್ದ ಅಡಿಕೆ ತೋಟದಲ್ಲಿ ಕಮಲ ಅವರು ಹುಲ್ಲು ತೆಗೆಯುವ ಹಾಗೂ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಹೆಜ್ಜೇನು ಕಡಿದಿದೆ. ಸುಮಾರು 11 ಗಂಟೆಯ ವೇಳೆಗೆ ಮನೆಗೆ ಮರಳಿದ ಅವರು, ತೋಟದಲ್ಲಿ ತಮಗೆ ಹೆಜ್ಜೇನು ಕಡಿದಿರುವುದಾಗಿ ಮಗನಿಗೆ ತಿಳಿಸಿದ್ದಾರೆ. ತಕ್ಷಣವೇ ಜಾಗರೂಕರಾದ ಮಗ, ಅವರನ್ನು ಸ್ಥಳೀಯ ಕ್ಲಿನಿಕ್‌ಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮನೆಗೆ ಕರೆತಂದಿದ್ದರು. ಆದರೆ, ಮಧ್ಯಾಹ್ನ 1.30ರ ಸುಮಾರಿಗೆ ಕಮಲ ಅವರು ದಿಢೀರ್ ಅಸ್ವಸ್ಥಗೊಂಡು ಮಾತು ಬಾರದಂತಾಗಿದ್ದಾರೆ. ಕೂಡಲೇ ಅವರನ್ನು ಆಂಬ್ಯುಲೆನ್ಸ್​ ಮೂಲಕ ಹೆಚ್ಚಿನ ಚಿಕಿತ್ಸೆಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು, ಕಮಲ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದರು.

ಈ ಸಂಬಂಧ ಮೃತ ಕಮಲ ಅವರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.