ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mahesh Shetty Thimarodi: ಮಹೇಶ್ ತಿಮರೋಡಿ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ; ಎಫ್‌ಐಆರ್‌ ದಾಖಲು

Dharmasthala Case: ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಬಗ್ಗೆ ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್ ಅವರು ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ತಿಮರೋಡಿ ಅವರ ವಿರುದ್ಧ ಆರ್ಮ್ಸ್ ಆಕ್ಟ್ 1959ರಡಿ ಬೆಳ್ತಂಗಡಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಹೇಶ್ ತಿಮರೋಡಿ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ; ಎಫ್‌ಐಆರ್‌ ದಾಖಲು

-

Prabhakara R Prabhakara R Sep 17, 2025 10:12 PM

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (ಆರ್ಮ್ಸ್ ಆಕ್ಟ್) ಎಫ್‌ಐಆರ್‌ ದಾಖಲಾಗಿದೆ. ಬುರುಡೆ ಚಿನ್ನಯ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಗಸ್ಟ್ 26 ರಂದು ನ್ಯಾಯಾಲಯದ ವಾರಂಟ್ ಪಡೆದು ಎಸ್‌ಐಟಿ ಅಧಿಕಾರಿಗಳು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಶೋಧ ನಡೆಸಿದ್ದರು. ಈ ವೇಳೆ ಎರಡು ತಲ್ವಾರ್‌ಗಳು ಮತ್ತು ಒಂದು ಬಂದೂಕು ಸೇರಿ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ತನಿಖಾ ತಂಡವು ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿತ್ತು.

ಅಕ್ರಮ ಶಸ್ತ್ರಾಸ್ತ್ರಗಳ ಬಗ್ಗೆ ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್ ಅವರು ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಆರ್ಮ್ಸ್ ಆಕ್ಟ್ 1959ರ ಸೆಕ್ಷನ್ 25(1), 25(1-ಎ), ಮತ್ತು 24(1-ಬಿ)(ಎ) ಅಡಿಯಲ್ಲಿ ಬೆಳ್ತಂಗಡಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.