ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಕಿಡ್ನ್ಯಾಪ್‌ಗೆ ಯತ್ನ; ತಪ್ಪಿಸಿಕೊಳ್ಳುವ ವೇಳೆ ಚಾಕು ಇರಿತ

Kidnap Attempt: ಬೆಳ್ತಂಗಡಿ ಪಟ್ಟಣದ ಸಮೀಪ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ನಡೆದಿದೆ. ಬಾಲಕಿ ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ನಿರ್ಜನ ಪ್ರದೇಶವೊಂದರಲ್ಲಿ ಕಾರಿನಲ್ಲಿ ಬಂದ ಮೂವರು ಅಪರಿಚಿತರು ಕಿಡ್ನ್ಯಾಪ್‌ಗೆ ಯತ್ನಿಸಿದ್ದಾರೆ. ಬೆಳ್ತಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಪಹರಣ ಯತ್ನದ ವೇಳೆ ಗಾಯಗೊಂಡ ವಿದ್ಯಾರ್ಥಿನಿ.

ಮಂಗಳೂರು: ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳ ತಂಡ ಸಿನಿಮೀಯ ಶೈಲಿಯಲ್ಲಿ ಕಿಡ್ನ್ಯಾಪ್‌ಗೆ ಯತ್ನಿಸಿದ (Kidnap attempt) ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ಯಲು ಸಾಧ್ಯವಾಗದಿದ್ದಾಗ ಆಕೆಯ ಕೈಗೆ ಚೂರಿಯಿಂದ ಇರಿದು ಖದೀಮರು ಪರಾರಿಯಾಗಿದ್ದಾರೆ.

ಬಾಲಕಿ ಎಂದಿನಂತೆ ತನ್ನ ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದಳು. ಈ ವೇಳೆ ನಿರ್ಜನ ಪ್ರದೇಶವೊಂದರಲ್ಲಿ ಇಕೋ ಕಾರಿನಲ್ಲಿ ಬಂದ ಮೂವರು ಅಪರಿಚಿತರು ಸ್ಕೂಟಿಗೆ ಅಡ್ಡಲಾಗಿ ಕಾರು ನಿಲ್ಲಿಸಿದ್ದಾರೆ. ಕಾರಿನಿಂದ ಇಳಿದು ಬಂದ ಮೂವರು ದುಷ್ಕರ್ಮಿಗಳು, ಬಾಲಕಿಗೆ ಚೂರಿ ತೋರಿಸಿ ಬೆದರಿಸಿದ್ದಾರೆ. ಅಲ್ಲದೆ, ಆಕೆಯನ್ನು ಬಲವಂತವಾಗಿ ಎತ್ತಿಕೊಂಡು ಕಾರಿನೊಳಗೆ ಕೂರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಜೋರಾಗಿ ಕಿರುಚಾಡಿದ್ದಾಳೆ. ಇದರಿಂದ ವಿಚಲಿತರಾದ ದುಷ್ಕರ್ಮಿಗಳು ಆಕೆಯ ಕೈಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ.

ವಿದ್ಯಾರ್ಥಿನಿ ಸಂಕಷ್ಟದಲ್ಲಿದ್ದಾಗಲೇ ಆ ರಸ್ತೆಯಲ್ಲಿ ಅಬ್ಬುಸಾಲಿ ಎಂಬುವರು ಆಗಮಿಸಿದ್ದಾರೆ. ಅವರನ್ನು ಕಂಡ ಮೂವರು ಆರೋಪಿಗಳು, ಕಾರು ಹತ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳು ವಿದ್ಯಾರ್ಥಿನಿಯನ್ನು ಅಬ್ಬುಸಾಲಿ ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Udupi news: ಆತ್ಮಹತ್ಯೆಗೆ ಬಾವಿಗೆ ಜಿಗಿಯುವಾಗ ರುಂಡ ಬೇರ್ಪಟ್ಟು ಸಾವು!

ವಿಷಯ ತಿಳಿದ ತಕ್ಷಣ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದ್ದು, ಹಲ್ಲೆಕೋರರು ಬಳಸಿದ ಇಕೋ ಕಾರಿನ ಪತ್ತೆಗೆ ಬಲೆ ಬೀಸಿದ್ದಾರೆ.