ಆಸ್ಪತ್ರೆ, ಶಾಲೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ಫುಡ್ ಮಾರಾಟ ನಿಷೇಧಕ್ಕೆ ಸರ್ಕಾರ ಮುಂದು; ಆರೋಗ್ಯ ಸಚಿವರಿಂದ ಸೂಚನೆ
ಇನ್ನುಮುಂದೆ ರಾಜ್ಯದ ಶಾಲೆಗಳು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶಾಲೆ ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್‌ಗೆ ಸಂಪೂರ್ಣ ನಿಷೇಧ ಹೇರಬೇಕು. ಈ ಕ್ರಮವನ್ನು ಮೊದಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ -
ಮಂಗಳೂರು: ಇನ್ನುಮುಂದೆ ರಾಜ್ಯದ ಶಾಲೆಗಳು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ (Junk Food Ban) ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ (U.T Khadar) ತಿಳಿಸಿದ್ದಾರೆ. ಮಂಗಳೂರಿನ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಜೀವನಶೈಲಿಗೆ ಸಂಬಂಧಿಸಿದ ಬಹುತೇಕ ಆರೋಗ್ಯ ಸಮಸ್ಯೆಗಳು ಜಂಕ್ ಫುಡ್ ಸೇವನೆಯಿಂದ ಉಂಟಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಶಾಲೆ ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್‌ಗೆ ಸಂಪೂರ್ಣ ನಿಷೇಧ ಹೇರಬೇಕು. ಈ ಕ್ರಮವನ್ನು ಮೊದಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗುವುದು. ಬಳಿಕ ಇದು ರಾಜ್ಯದ ಇತರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೂ ಮಾದರಿಯಾಗಲಿದೆ ಎಂದು ಹೇಳಿದರು. ಇದೇ ವೇಳೆ ಆಹಾರ ಉತ್ಪಾದನಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ ಸಚಿವರು, ಮಾರುಕಟ್ಟೆಗೆ ಆಹಾರ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಮೊದಲು ಗುಣಮಟ್ಟದ ಪರೀಕ್ಷೆ ಕಡ್ಡಾಯವಾಗಿ ನಡೆಸಬೇಕು ಎಂದು ಸೂಚಿಸಿದರು.
, "ವಿದ್ಯಾರ್ಥಿಗಳು, ಯುವ ಜನತೆ ಜಂಕ್‌ಫುಡ್‌ಗೆ ಅವಲಂಬನೆಯಾಗುತ್ತಿದ್ದಾರೆ. ಇದು ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತಿದೆ. ಮೂತ್ರಪಿಂಡ, ಕ್ಯಾನ್ಸರ್ ಮೊದಲಾದ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಹೆಚ್ಚುತ್ತಿವೆ. ಇದನ್ನು ಶಾಲೆಯ ಅಥವಾ ಆಸ್ಪತ್ರೆ ಹಂತದಲ್ಲೇ ನಿಯಂತ್ರಿಸಿದರೆ, ಕನಿಷ್ಠ ದೇಹದ ಆರೋಗ್ಯ ಕಾಪಾಡಲು ಸಾಧ್ಯವಿದೆ. ಅದಕ್ಕಾಗಿ ಆಸ್ಪತ್ರೆ ಮಾತ್ರವಲ್ಲ ಎಸ್ಎಸ್ಎಲ್‌ಸಿವರೆಗೆ ಇರುವ ಶಾಲೆಗಳ ಸುತ್ತಮುತ್ತಲೂ ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗುತ್ತಿದೆ ಎಂದು ಖಾದರ್ ಹೇಳಿದ್ದಾರೆ.
UT Khader: ಸ್ಪೀಕರ್ ಇನ್ನು ಡಾಕ್ಟರ್! ಬೆಂಗಳೂರು ವಿವಿಯಿಂದ ಯುಟಿ ಖಾದರ್‌ಗೆ ಡಾಕ್ಟರೇಟ್
ಇದಕ್ಕೆ ಪೂರಕವಾಗಿ ಆಹಾರ ಮತ್ತು ಸುರಕ್ಷತಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ತೀರ್ಮಾನಿಸಲಾಗಿದೆ". ಆಹಾರ ಸುರಕ್ಷತಾ ನಿಯಮಗಳನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯದಲ್ಲಿರುವ ಆಹಾರ ಪರೀಕ್ಷಾ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಜೊತೆಗೆ ಬೆಂಗಳೂರಿನಲ್ಲಿ ಹೊಸ ಆಹಾರ ಪರೀಕ್ಷಾ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.