ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಜನವರಿ 31ರಂದು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್‌ಡಿಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಜನವರಿ 31ರಂದು ಬೆಳಗ್ಗೆ 10 ಗಂಟೆಗೆ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಕಾರ್ಯಕ್ರಮ ನೆರವೇರಲಿದೆ. ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜ. 31ರಂದು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’ ಕಾರ್ಯಕ್ರಮ

ಉಜಿರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ -

Prabhakara R
Prabhakara R Jan 29, 2026 1:59 PM

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ಜನವರಿ 31ರಂದು ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶನಿವಾರ ಬೆಳಗ್ಗೆ 10 ಗಂಟೆಗೆ ಉಜಿರೆಯ ಎಸ್‌ಡಿಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದ ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಎಸ್. ಅವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಕ್ಷ್ಯ ಚಿತ್ರದ ಬಿಡುಗಡೆಯನ್ನು ಬೆಂಗಳೂರಿನ ಕ್ಷೇಮವನ ಕಾರ್ಯನಿರ್ವಹಕ ನಿರ್ದೇಶಕಿ ಶ್ರದ್ಧಾ ಅಮಿತ್ ಅವರು ಮಾಡುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ .ಪಿ ಅವರು ವಹಿಸಲಿದ್ದಾರೆ. ಸಮಾರಂಭದಲ್ಲಿ ಉಜಿರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ಉಪಸ್ಥಿತರಿರುವರು ಎಂದು ಆಯೋಜಕರು ತಿಳಿಸಿದ್ದಾರೆ.

Infosys Recruitment: ಇನ್ಫೋಸಿಸ್‌ನಿಂದ ಗುಡ್ ನ್ಯೂಸ್; ಶೀಘ್ರದಲ್ಲೇ ನಡೆಯಲಿದೆ 20,000 ನೇಮಕಾತಿ