ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Mangaluru News: ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ; ಮಂಗಳೂರಿನಲ್ಲಿ ಕಂಡಕ್ಟರ್‌ ಇರ್ಫಾನ್‌ ಅರೆಸ್ಟ್‌

ಬಸ್‌ನಲ್ಲಿ ವಿದ್ಯಾರ್ಥಿನಿಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಲ್ಲೇರಿ ಮನೆ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮಂಗಳೂರು: ಬಸ್​ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಎದುರು ಗುಪ್ತಾಂಗ ಪ್ರದರ್ಶನ ಮಾಡಿ ವಿಕೃತಿ ಮೆರೆದಿದ್ದ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಲ್ಲೇರಿ ಮನೆ ನಿವಾಸಿ, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ವಾಸವಿರುವ ಇರ್ಫಾನ್ (32) ಬಂಧಿತ (Bus conductor Irfan) ಆರೋಪಿಯಾಗಿದ್ದಾನೆ.

ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಜುಲೈ 9ರಂದು ಗುರುವಾರ ಸಂಜೆ ಬಸ್​ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರ ಎದುರು ಕಂಡಕ್ಟರ್ ಇರ್ಫಾನ್, ವಿಕೃತವಾಗಿ ವರ್ತಿಸಿದ್ದ. ವಿದ್ಯಾರ್ಥಿನಿಯರ ಮುಂಭಾಗವೇ ತನ್ನ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪಿ, ಅತ್ಯಂತ ಅಸಭ್ಯವಾಗಿ ಸನ್ನೆಗಳನ್ನು ಮಾಡಿದ್ದ. ಅಷ್ಟೇ ಅಲ್ಲದೆ, ವಿದ್ಯಾರ್ಥಿನಿಯರನ್ನು ಬಸ್​ನ ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪ ಕೇಳಿಬಂದಿದೆ.

ಕಂಡಕ್ಟರ್‌ನ ಈ ವಿಕೃತ ವರ್ತನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಆರೋಪಿ ಇರ್ಫಾನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Belagavi News: ಅಣಬೆ ತಿನ್ನೋ ಮುನ್ನ ಎಚ್ಚರ; ಮಶ್ರೂಮ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ, ಶುಕ್ರವಾರದಂದು ಆರೋಪಿ ಇರ್ಫಾನ್‌ನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ.

ಯುವತಿ ವಿಚಾರಕ್ಕೆ ಗಲಾಟೆ; ಹಾಸನದಲ್ಲಿ ಯುವಕನಿಗೆ ಚಾಕು ಇರಿದು ಹಲ್ಲೆ

ಹಾಸನ: ಯುವತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನಿಗೆ ಚಾಕು ಇರಿದಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಶರತ್ (21) ಗಾಯಾಳು ಯುವಕ. ಪ್ರಜ್ವಲ್ ಎಂಬ ಯುವಕ ಭೀಕರವಾಗಿ ಹಲ್ಲೆ ಮಾಡಿದ್ದಾನೆ.

ಶರತ್ ಹಾಗೂ ಪ್ರಜ್ವಲ್ ಇಬ್ಬರು ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ವಿಚಾರಕ್ಕೆ ಕಳೆದ ಎರಡು ದಿನಗಳಿಂದ ಇಬ್ಬರ ನಡುವೆ ಗಲಾಟೆ ಆಗಿದೆ. ಇಂದು ಬೆಳಗ್ಗೆ ಪ್ರಜ್ವಲ್‌ನ ಶರತ್ ಮಾತನಾಡಿಸಲು ಬಂದಿದ್ದ. ಈ ವೇಳೆ ಇಬ್ಬರ ನಡುವೆ ಜಗಳ ತಾರಕಕ್ಕೆ ಏರಿ ಚಾಕುವಿನಿಂದ ಇರಿದಿದ್ದಾನೆ.

ಮನೆಯಿಂದ ಹೋದ ಬಾಲಕ ಮರಳಿ ವಾಪಸ್ ಬರಲಿಲ್ಲ: ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು

ಮಾತಿಗೆ ಮಾತು ಬೆಳೆದು ಶರತ್ ಮೇಲೆ ಪ್ರಜ್ವಲ್ ದಾಳಿ ಮಾಡಿದ್ದಾನೆ. ಆರೋಪಿ ಪ್ರಜ್ವಲ್‌ನನ್ನು ಬೇಲೂರು ಠಾಣೆ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಹಲ್ಲೆಗೊಳಗಾದ ಶರತ್ ಗೆ ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.