Dharmasthala Chalo: ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಇತಿಶ್ರೀ ಹಾಡಲು ಧರ್ಮ ಜಾಗೃತಿ ಸಮಾವೇಶ: ವಿಜಯೇಂದ್ರ
BY Vijayendra: ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ಧರ್ಮಸ್ಥಳದಲ್ಲಿ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಳಿಕ ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದಾರೆ.

-

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರ ನಡೆಯುತ್ತಿದೆ. ಇದರಿಂದ ಮಂಜುನಾಥನ ಭಕ್ತರು ಕಣ್ಣೀರು ಹಾಕುತ್ತಿದ್ದಾರೆ. ಇದಕ್ಕೆ ಇತಿಶ್ರೀ ಹಾಡಲು ಧರ್ಮ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಂಜುನಾಥನ ಸನ್ನಿಧಿಯಲ್ಲಿ ಧರ್ಮ ಜಾಗೃತಿ ಸಮಾವೇಶ ನಡೆಯುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂಬುವುದನ್ನು ನೋಡುತ್ತಿದ್ದೇವೆ. ಇಂತಹ ದುಷ್ಟ ಶಕ್ತಿಗಳ ಸಂಹಾರ ಆಗಬೇಕು ಎಂಬುವುದು ಭಕ್ತರ ಅಪೇಕ್ಷೆ ಎಂದು ಹೇಳಿದರು.
ಇದಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಶ್ರೀದೇವರ ಆಶೀರ್ವಾದ ಪಡೆದರು.
ಈ ಸುದ್ದಿಯನ್ನೂ ಓದಿ | BJP Dharmasthala Chalo: ಧರ್ಮಸ್ಥಳ ವಿರುದ್ಧದ ಷಡ್ಯಂತ್ರದಲ್ಲಿ ವಿದೇಶಿ ಶಕ್ತಿಗಳೂ ಇವೆ, NIA ತನಿಖೆ ಆಗಬೇಕು: ಜನಾರ್ದನ ರೆಡ್ಡಿ ಆಗ್ರಹ
ಈ ಸಂದರ್ಭದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಧರ್ಮಸ್ಥಳ ಚಲೋ ಕಾರ್ಯಕ್ರಮದ ರಾಜ್ಯ ಸಂಚಾಲಕರು ಹಾಗೂ ಶಾಸಕರಾದ ಎಸ್. ಆರ್. ವಿಶ್ವನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ, ಶಾಸಕರಾದ ಹರೀಶ್ ಪೂಂಜಾ, ಪಕ್ಷದ ಶಾಸಕರು, ಮಾಜಿ ಶಾಸಕರು, ಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಮತ್ತು ಪ್ರಮುಖರು ಉಪಸ್ಥಿತರಿದ್ದರು.