ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MD Sameer: ಎಐ ಬಳಸಿ ಸುಳ್ಳು ಮಾಹಿತಿಯ ವಿಡಿಯೋ ಪ್ರಸಾರ; ಯುಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಪ್ರಕರಣ

MD Sameer: ಎಐ ಮೂಲಕ ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿ, ಉದ್ದೇಶಪೂರ್ವಕವಾಗಿ ಸಾರ್ವಜನಿಕರು ಪ್ರಚೋದನೆಗೊಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ. ಎಂಬ ಯೂಟ್ಯೂಬರ್‌ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸುಳ್ಳು ಮಾಹಿತಿಯ ವಿಡಿಯೋ ಪ್ರಸಾರ; ಯುಟ್ಯೂಬರ್ ಸಮೀರ್ ವಿರುದ್ಧ ಕೇಸ್‌

Profile Prabhakara R Jul 13, 2025 2:18 PM

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ತನಿಖೆ ಹಂತದಲ್ಲಿ ಇರುವಾಗಲೇ ಎಐ ಸೃಷ್ಟಿತ ಕಾಲ್ಪನಿಕ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಸುಳ್ಳು ಮಾಹಿತಿ‌ ಪ್ರಸಾರದ ಮೂಲಕ ಸಾರ್ವಜನಿಕರು ಪ್ರಚೋದನೆಗೊಳ್ಳುವಂತೆ ಮಾಡಿದ ಆರೋಪದಲ್ಲಿ ಯುಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜು. 11ರಂದು ಪ್ರಕರಣ ದಾಖಲಾಗಿದ್ದು, ಎರಡು ಪ್ರತ್ಯೇಕ ವಿಚಾರಣೆಗಳನ್ನೂ ಪ್ರಾರಂಭಿಸಲಾಗಿದೆ. ಈ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಲು ಮತ್ತು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲು ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಕೆಲವು ಗುಂಪನ್ನು ಪ್ರತಿನಿಧಿಸುತ್ತಿರುವ ವ್ಯಕ್ತಿಗಳು ಒತ್ತಡ ತರುತ್ತಿದ್ದಾರೆ.

ಪ್ರಕರಣದ ಸಾಕ್ಷಿ, ದೂರುದಾರರು ತಮ್ಮ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಜು. 11ರಂದು ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಗಳನ್ನು ಒಳಗೊಂಡಿರುವ ಕಾಲ್ಪನಿಕವಾಗಿ ಎಐ ಮೂಲಕ ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿ, ಉದ್ದೇಶಪೂರ್ವಕವಾಗಿ ಸಾರ್ವಜನಿಕರು ಪ್ರಚೋದನೆಗೊಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ. ಎಂಬ ಯೂಟ್ಯೂಬರ್‌ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ದೂರುದಾರರು ನೂರಾರು ಮೃತದೇಹಗಳನ್ನು ಬಲವಂತವಾಗಿ ಹೂತು ಹಾಕಿದ್ದೇನೆಂದು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಮೀರ್ ಎಂ.ಡಿ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕರಣದ ಬಗ್ಗೆ ಕೃತಕ ಬುದ್ಧಿಮತ್ತೆ (AI) ರಚಿತ ಮತ್ತು ಸುಳ್ಳು ಮಾಹಿತಿಗಳನ್ನು ಒಳಗೊಂಡ ವಿಡಿಯೋವನ್ನು ಪ್ರಸಾರ ಮಾಡಿದ್ದು, ಸುಳ್ಳು ಮಾಹಿತಿಯೊಂದಿಗೆ ವಿಡಿಯೋ ಅಪ್‌ಲೋಡ್ ಮಾಡಿದ್ದಕ್ಕಾಗಿ ಸಮೀರ್ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 192, 240, 353(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Physical Assault: ಆಪ್ತ ಸಮಾಲೋಚಕಿ ಮೇಲೆ ರೇಪ್ ಕೇಸ್‌: ಆರೋಪಿ ಬಂಧನ