ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಾಲಿವಾಲ್‌ ಆಡುತ್ತಿದ್ದಾಗಲೇ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು; ಸುರತ್ಕಲ್‌ನಲ್ಲಿ ಭೀಕರ ಘಟನೆ: ವಿಡಿಯೊ ವೈರಲ್‌

Heart Attack: ಇತ್ತೀಚೆಗೆ ಯುವ ಜನತೆ ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಹೆಚ್ಚಾಗುತ್ತಿದ್ದು, ಅದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದಿದೆ. ವಾಲಿಬಾಲ್‌ ಆಡುತ್ತಿದ್ದ ಲಿಖಿತ್‌ ಆಮೀನ್‌ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಸಾಂದರ್ಭಿಕ ಚಿತ್ರ

ಸುರತ್ಕಲ್‌, ಆ. 8: ಇತ್ತೀಚೆಗೆ ಯುವ ಜನತೆ ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಹೆಚ್ಚಾಗುತ್ತಿರುವುದು ಕಳವಳ ಮೂಡಿಸಿದೆ. ಕೆಲವು ದಿನಗಳ ಹಿಂದೆ 1ನೇ ತರಗತಿಯ ಬಾಲಕನೊಬ್ಬ ಶಾಲಾ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಕರುಣಾಜನಕ ಘಟನೆ ಶಿವಮೊಗ್ಗ ನಡೆದಿತ್ತು (Heart Attack). ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ ಸಮೀಪ ವಾಲಿವಾಲ್‌ ಆಡುತ್ತಿದ್ದ 15 ವರ್ಷದ ಬಾಲಕ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದು ಮೃತ ಪಟ್ಟಿದ್ದಾನೆ. ಆತನ ಕೊನೆಯ ಕ್ಷಣ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral Video) ಆಗಿದೆ.

ಸುರತ್ಕಲ್‌ನ ಸೂರಿಂಜೆಯಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು 15 ವರ್ಷದ, 10ನೇ ತರಗತಿಯ ಲಿಖಿತ್‌ ಅಮೀನ್‌ ಎಂದು ಗುರುತಿಸಲಾಗಿದೆ. ಸೂರಿಂಜೆಯ ಕೋಟೆ ಬೊಳ್ಳೂರಿನ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಯಾಗಿರುವ ಈತ ಸ್ನೇಹಿತರೊಂದಿಗೆ ವಾಲಿಬಾಲ್‌ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಅಲ್ಲೇ ಪ್ರಾಣ ಹೊರಟು ಹೋಗಿದೆ ಎಂದು ಮೂಲಗಳು ತಿಳಿಸಿವೆ.

ಬಾಲಕ ಕುಸಿದು ಬಿದ್ದ ವೈರಲ್‌ ವಿಡಿಯೊ ಇಲ್ಲಿದೆ:



ʼʼಸೂರಿಂಜೆಯ ಮೈದಾನದಲ್ಲಿ ಲಿಖಿತ್‌ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾನೆʼʼ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಬಾಲ್‌ ಸರ್ವ್‌ ಮಾಡಿ ಲಿಖಿತ್‌ ಓಡುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದ್ದು, ಕೈ ಮೇಲಕ್ಕೆತ್ತುತ್ತಿದ್ದಂತೆ ಇದ್ದಕ್ಕಿದ್ದಂತೆ ಬಿದ್ದು ಬಿಟ್ಟಿದ್ದಾನೆ.

ಕುಸಿದು ಬಿದ್ದ ಲಿಖಿತ್‌ನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಜವಾದ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವಜಾತ ಶಿಶುವಿಗೇ ಹೃದಯಾಘಾತ, ಕೊಪ್ಪಳದಲ್ಲಿ 26ರ ಯುವತಿ ಬಲಿ

5 ವರ್ಷದ ಬಾಲಕನಿಗೆ ರಸ್ತೆಯಲ್ಲಿ ಹೃದಯಾಘಾತ

ಚಿಕ್ಕಮಗಳೂರು: ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೃದಯವೈಫಲ್ಯದಿಂದ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಾಘಾತದಿಂದ 15 ವರ್ಷದ ಬಾಲಕ ಸಾವನ್ನಪ್ಪಿದ್ದ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ 15 ವರ್ಷದ ಬಾಲಕ ಪ್ರೀತಮ್ ಸಾವನ್ನಪ್ಪಿದ್ದ ಎಂದು ಮೂಲಗಳು ತಿಳಿಸಿವೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ವೈದ್ಯರು ಖಚಿತ ಪಡಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author