CM Siddaramaiah: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
CM Siddaramaiah: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಮಂಗಳೂರು, ಜ. 17, 2025: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಜಾತಿ ಗಣತಿ ವರದಿ: ವಿರೋಧ ಏಕೆ?
ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಏನಿದೆ ಎಂದು ತಿಳಿಯದೆ ವಿರೋಧ ವ್ಯಕ್ತಪಡಿಸಲಾಗುತ್ತದೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದು ಹೇಳಿದರು.
ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದು ಈ ವೇಳೆ ತಿಳಿಸಿದರು.
ಈ ಸುದ್ದಿಯನ್ನೂ ಓದಿ | Budget Session: ಜ. 31ರಿಂದ ಸಂಸತ್ ಅಧಿವೇಶನ
ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ
ಉಲ್ಲಾಳದಲ್ಲಿ ನಡೆದಿರುವ ದರೋಡೆ ಪ್ರಕರಣದ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ, ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.