ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʼʼಕೌಶಲಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿʼʼ: ವಿದ್ಯಾರ್ಥಿಗಳಿಗೆ ಸಹ ಪ್ರಧ್ಯಾಪಕಿ ಕಾವ್ಯ ಕರೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ ವಿಭಾಗದ ವತಿಯಿಂದ ಸಮ್ಯಗ್ದರ್ಶನ ಸಭಾಭವನದಲ್ಲಿ ಬುಧವಾರ 'ಕಾಗ್ನಿಟೋ' ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮ ಜರುಗಿತು. ಎಸ್‌.ಡಿ.ಎಂ. ನ್ಯಾಚುರೋಪತಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕಿ ಕಾವ್ಯ ಎಂ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಜಿರೆ ಸಮ್ಯಗ್ದರ್ಶನ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಿತು

ಉಜಿರೆ, ಜು. 29: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಆತ್ಮವಿಶ್ವಾಸ ಬೆಳೆಸಿಕೊಂಡು, ವಿದ್ಯಾರ್ಥಿ ದೆಸೆಯಲ್ಲಿ ಸಿಗುವ ಪ್ರತಿಯೊಂದು ಅವಕಾಶವನ್ನು ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಮನಃಶಾಸ್ತ್ರ ವಿಭಾಗದಿಂದ ಆಯೋಜಿಸುವ ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸಿ ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಎಸ್‌.ಡಿ.ಎಂ. ನ್ಯಾಚುರೋಪತಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕಿ ಕಾವ್ಯ ಎಂ. ಹೇಳಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ ವಿಭಾಗದ ವತಿಯಿಂದ ಸಮ್ಯಗ್ದರ್ಶನ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ 'ಕಾಗ್ನಿಟೋ' ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಆಸಕ್ತ ಕ್ಷೇತ್ರದಲ್ಲಿ ನಿರಂತರವಾಗಿ ಕ್ರಿಯಾಶೀಲತೆ ಮತ್ತು ಭಿನ್ನತೆ ರೂಢಿಸಿಕೊಳ್ಳಬೇಕು. ಪ್ರಾಯೋಗಿಕ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಾ ವಿಭಾಗದ ಡೀನ್ ಡಾ. ಬೋಜಮ್ಮ ಕೆ.ಎನ್. ಮಾತನಾಡಿ, ಪ್ರಸ್ತುತ ದಿನಮಾನಗಳ ಜಂಜಾಟದ ಬದುಕಿನಲ್ಲಿ ತಮ್ಮ ಮನಸ್ಸನ್ನು ಸ್ಥಿರತೆಯಿಂದ ಇಟ್ಟುಕೊಳ್ಳುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ಮನಃಶಾಸ್ತ್ರ ವಿಭಾಗ ನಿರಂತರವಾಗಿ ಸಾಮಾಜಿಕ ಜಾಗೃತಿ ಮೂಡಿಸುತ್ತಿದೆ. ಜತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತವಾಗಿ ಹಮ್ಮಿಕೊಳ್ಳುತ್ತಾ ಬರುತ್ತಿದೆ. ವಿದ್ಯಾರ್ಥಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಿ ಎಂದು ಹೇಳಿದರು. ‌

48 ಲಕ್ಷ ಕುಟುಂಬಗಳಿಗೆ ಪಿಎಂ ಸೂರ್ಯಘರ್‌ ಪ್ರಯೋಜನ; 18.93 ಲಕ್ಷಕ್ಕೂ ಅಧಿಕ ಫಲಾನುಭವಿಗಳ ವಿದ್ಯುತ್‌ ಬಿಲ್‌ ಶೂನ್ಯ

ನೂತನವಾಗಿ ಆಯ್ಕೆಯಾದ ಕಾಗ್ನಿಟೋ ಅಸೋಸಿಯೇಷನ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಮನಃಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ವಂದನಾ ಜೈನ್ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮನಃಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸುಧೀರ್ ಕೆ ವಿ, ಸಹಾಯಕಿ ಪ್ರಧ್ಯಾಪಕಿ ಪದ್ಮಶ್ರೀ ಕೆ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರತಿನಿಧಿ ದಿವ್ಯಲಕ್ಷ್ಮಿ ಸ್ವಾಗತಿಸಿದರು, ಅಲಕಾ ನಿರೂಪಿಸಿದರು, ವಿದ್ಯಾರ್ಥಿ ಆನಂದ್ ವಂದಿಸಿದರು.