ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Burude Case: ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ ಮಾಡಿ: ದೂರು

ಹೈಕೋರ್ಟ್‌ಗೆ ನೀಡಿರುವ ಹೇಳಿಕೆಗಳನ್ನು ಯಾವುದೇ ಮಾಧ್ಯಮಗಳಿಗಾಗಲಿ ಅಥವಾ ಸಾಮಾಜಿಕ ಜಾಲತಾಣಗಳಿಗಾಗಲಿ ಬಹಿರಂಗಪಡಿಸಬಾರದು ಎಂಬ ಪ್ರಮುಖ ಷರತ್ತಿನ ಮೇರೆಗೆ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿತ್ತು. ಆದರೆ ಪ್ರಸ್ತುತ ಈ ಜಾಮೀನು ಷರತ್ತು ಗಳನ್ನು ಸ್ಪಷ್ಟವಾಗಿ ಉಲ್ಲಂಘಿಸ ಲಾಗಿದೆ. ಹೀಗಾಗಿ, ಎಸ್‌ಐಟಿ ತಂಡ ತಕ್ಷಣವೇ ಕಾರ್ಯಪ್ರವೃತ್ತರಾಗಿ ಚಿನ್ನಯ್ಯನ ಜಾಮೀನನ್ನು ರದ್ದುಗೊಳಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಮಟ್ಟಣ್ಣವರ್ ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ

ಬುರುಡೆ ಪ್ರಕರಣ: ಒಂದು ಕಾಲದ ಆಪ್ತರಿಂದಲೇ ಚಿನ್ನಯ್ಯನ ವಿರುದ್ಧ ಎಸ್‌ಐಟಿಗೆ ಅರ್ಜಿ

ನನ್ನನ್ನೂ ಬ್ರೈನ್ ಮ್ಯಾಪಿಂಗ್‌ಗೆ ಒಳಪಡಿಸಿ: ಆರೋಪಿ ಗಿರೀಶ್ ಮಟ್ಟಣ್ಣವರ್ ಸವಾಲು

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಭಾರೀ ಷಡ್ಯಂತ್ರ ನಡೆದಿದೆ ಎಂದು ಉಚ್ಚ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿರುವ ಚಿನ್ನಯ್ಯನ ವಿರುದ್ಧ ಒಂದು ಕಾಲದ ಅವರ ಆಪ್ತರೇ ಇದೀಗ ತಿರುಗಿ ಬಿದ್ದಿದ್ದಾರೆ. ಗಿರೀಶ್ ಮಟ್ಟಣ್ಣವರ್ ಹಾಗೂ ಟಿ.ಜಯಂತ್ ತಂಡ ಶನಿವಾರ ಬೆಳ್ತಂಗಡಿಯ ವಿಶೇಷ ತನಿಖಾದಳ ಕಚೇರಿಗೆ ಭೇಟಿ ನೀಡಿ ಪ್ರಮುಖ ದೂರು ದಾಖಲಿಸಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯನಿಗೆ ತಕ್ಷಣವೇ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು. ಆತನನ್ನು ‘ಬ್ರೈನ್ ಮ್ಯಾಪಿಂಗ್’ ತಂತ್ರಜ್ಞಾನ ಆಧಾರಿತ ತನಿಖೆಗೆ ಒಳಪಡಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ: 'Burude' fight: ಬಿಜೆಪಿ-ಕಾಂಗ್ರೆಸ್ ನಡುವೆ 'ಬುರುಡೆ' ಜಗಳ

ಷರತ್ತು ಉಲ್ಲಂಘನೆ: ಹೈಕೋರ್ಟ್‌ಗೆ ನೀಡಿರುವ ಹೇಳಿಕೆಗಳನ್ನು ಯಾವುದೇ ಮಾಧ್ಯಮಗಳಿಗಾಗಲಿ ಅಥವಾ ಸಾಮಾಜಿಕ ಜಾಲತಾಣಗಳಿಗಾಗಲಿ ಬಹಿರಂಗಪಡಿಸಬಾರದು ಎಂಬ ಪ್ರಮುಖ ಷರತ್ತಿನ ಮೇರೆಗೆ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿತ್ತು. ಆದರೆ ಪ್ರಸ್ತುತ ಈ ಜಾಮೀನು ಷರತ್ತು ಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ಹೀಗಾಗಿ, ಎಸ್‌ಐಟಿ ತಂಡ ತಕ್ಷಣವೇ ಕಾರ್ಯಪ್ರವೃತ್ತರಾಗಿ ಚಿನ್ನಯ್ಯನ ಜಾಮೀನನ್ನು ರದ್ದುಗೊಳಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಮಟ್ಟಣ್ಣವರ್ ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಎಸ್‌ಐಟಿ ಕಚೇರಿಗೆ ನಿಯೋಗ ತೆರಳಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಯ ಅಧ್ಯಕ್ಷ ಅನಿಲ್ ಅಂತರ್, ಪ್ರಕಾಶ್ ಸಿ.ಬೆಂಗಳೂರು, ಮನೋಜ್ ಕುಂಜಪರ್, ಪ್ರದೀಪ್ ಕುಲಾಲ್, ಗಣೇಶ್ ಶೆಟ್ಟಿ, ಉದಯ ಉಜಿರೆ ಹಾಗೂ ಶ್ರೀನಿವಾಸ್ ಉಪಸ್ಥಿತರಿದ್ದರು.

ನನ್ನನ್ನೂ ಬ್ರೈನ್ ಮ್ಯಾಪಿಂಗ್‌ಗೆ ಒಳಪಡಿಸಿ: ಮಾಧ್ಯಮಗಳೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣವರ್, ಇಡೀ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ನೇರಪ್ರಸಾರದ ಮೂಲಕ ನನ್ನನ್ನೂ ಸಹ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಲು ನಾನು ಸಿದ್ಧನಿದ್ದೇನೆ ಎಂದು ಮುಕ್ತ ಸವಾಲು ಹಾಕಿದ್ದಾರೆ.