ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala case: ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನಿಗೆ ಷರತ್ತುಬದ್ಧ ಜಾಮೀನು ಮಂಜೂರು

ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯಗೆ ಮಂಗಳೂರಿನ ಜಿಲ್ಲಾ ಕೋರ್ಟ್ ಜಾಮೀನು ನೀಡಿದೆ. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ. ಹೀಗಾಗಿ ಶಿವಮೊಗ್ಗ ಜೈಲಿನಿಂದ ನಾಳೆ ಆರೋಪಿ ಚಿನ್ನಯ್ಯ ಬಿಡುಗಡೆಯಾಗುವ ಸಾಧ್ಯತೆ ಇದೆ.

ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯ (ಸಂಗ್ರಹ ಚಿತ್ರ)

ಮಂಗಳೂರು, ನ.24: ಧರ್ಮಸ್ಥಳ ಪ್ರಕರಣಕ್ಕೆ (Dharmasthala case) ಸಂಬಂಧಿಸಿ ಬಂಧನವಾಗಿದ್ದ ಆರೋಪಿ ಚಿನ್ನಯ್ಯನಿಗೆ ಷರತ್ತುಬದ್ಧ ಜಾಮೀನು ದೊರೆತಿದೆ. ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿ ಪುರಸ್ಕರಿಸಿರುವ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸೋಮವಾರ ಬೇಲ್‌ ಮಂಜೂರು ಮಾಡಿದೆ. ಕೋರ್ಟ್ 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ. ಹೀಗಾಗಿ ಶಿವಮೊಗ್ಗ ಜೈಲಿನಿಂದ ನಾಳೆ ಆರೋಪಿ ಚಿನ್ನಯ್ಯ (Chinnayya) ಬಿಡುಗಡೆಯಾಗುವ ಸಾಧ್ಯತೆ ಇದೆ.

ಧರ್ಮಸ್ಥಳಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿತ್ತು. ಧರ್ಮಸ್ಥಳ ಸುತ್ತಮುತ್ತ ಕಳೇಬರ ಪತ್ತೆಗೆ ಶೋಧಕಾರ್ಯ ನಡೆದಿತ್ತು. ಹಲವು ಕಡೆ ಜೆಸಿಬಿ ಸಹಾಯದ ಮೂಲಕ ಉತ್ಖನನ ಮಾಡಲಾಗಿತ್ತು. ಆದರೆ, ಸುಳ್ಳು ದೂರು ನೀಡಿದ ಆರೋಪದಲ್ಲಿ ಚಿನ್ನಯ್ಯನನ್ನೇ ಎಸ್ಐಟಿ ಬಂಧಿಸಿತ್ತು. ಬಳಿಕ ವಿಚಾರಣೆ ತೀವ್ರಗೊಂಡಿತ್ತು. ಆಗಸ್ಟ್ 23ರಂದು ಚಿನ್ನಯ್ಯನ ಬಂಧನವಾಗಿತ್ತು. ಸೆಪ್ಟೆಂಬರ್ 6ರಂದು ಚಿನ್ನಯ್ಯನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ.

ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡ ಇತ್ತೀಚೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನಿಖೆಯ ಪ್ರಾಥಮಿಕ ವರದಿಯನ್ನು ಸಲ್ಲಿಕೆ ಮಾಡಿತ್ತು. ನ್ಯಾಯಾಧೀಶರ ಮುಂದೆ 3,923 ಪುಟಗಳ ವಿಸ್ತಾರವಾದ ವರದಿಯನ್ನು ಸಲ್ಲಿಕೆ ಮಾಡಿತ್ತು. ದೂರುದಾರ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಆರು ಮಂದಿಯ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಸುಳ್ಳು ಸಾಕ್ಷಿ ವರದಿಯನ್ನು ಸೆಕ್ಷನ್ 215 ಅಡಿಯಲ್ಲಿ ಸಲ್ಲಿಕೆ ಮಾಡಿದ್ದರು.

ಧರ್ಮಸ್ಥಳ ಲಕ್ಷ ದೀಪೋತ್ಸವ ; ಶ್ರೀ ಮಂಜುನಾಥ ಚರಿತೆ ವೈಭವ ಪ್ರದರ್ಶನ

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಗಳನ್ನಾಗಿ ಮಾಡಿ ವರದಿ ಸಲ್ಲಿಸಲಾಗಿತ್ತು. ಪ್ರಕರಣದಲ್ಲಿ ಐದು ಮಂದಿ ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಎಸ್‌ಐಟಿ ವರದಿಯಲ್ಲಿ ಉಲ್ಲೇಖಿಸಿದ್ದು, ಮುಂದಿನ ತನಿಖೆ ಬಗ್ಗೆ ನ್ಯಾಯಾಲಯ ಸೂಚನೆ ನೀಡುವಂತೆ ತಿಳಿಸಲಾಗಿತ್ತು.