ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Chalo: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ; ಇಂದಿನಿಂದ ಜೆಡಿಎಸ್ ಪಾದಯಾತ್ರೆ

ಧರ್ಮಸ್ಥಳದ ಕೇಸ್‌ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈಗಾಗಲೇ ಅಧಿಕಾರಿಗಳು ಚೆನ್ನಯ್ಯನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಈ ಕೇಸ್‌ಗೆ ಸಂಬಂಧ ಪಟ್ಟಂತೆ ರಾಜಕೀಯದಲ್ಲಿಯೂ ಮಹತ್ವದ ಬೆಳವಣಿಗೆ ನಡೆಯುತ್ತಿವೆ. ಧರ್ಮಸ್ಥಳಕ್ಕೆ ಇಂದು ಜೆಡಿಎಸ್‌ ಪಾದಯಾತ್ರೆ ಕೈಗೊಳ್ಳಲಿದೆ.

ಇಂದಿನಿಂದ ಜೆಡಿಎಸ್ ಧರ್ಮಸ್ಥಳಕ್ಕೆ ಪಾದಯಾತ್ರೆ

-

Vishakha Bhat Vishakha Bhat Aug 31, 2025 8:39 AM

ಮಂಗಳೂರು: ಧರ್ಮಸ್ಥಳದ ಕೇಸ್‌ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈಗಾಗಲೇ ಅಧಿಕಾರಿಗಳು ಚೆನ್ನಯ್ಯನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಈ ಕೇಸ್‌ಗೆ ಸಂಬಂಧ ಪಟ್ಟಂತೆ ರಾಜಕೀಯದಲ್ಲಿಯೂ ಮಹತ್ವದ ಬೆಳವಣಿಗೆ ನಡೆಯುತ್ತಿವೆ. ಧರ್ಮಸ್ಥಳಕ್ಕೆ ಇಂದು ಜೆಡಿಎಸ್‌ ಪಾದಯಾತ್ರೆ ಕೈಗೊಳ್ಳಲಿದೆ. ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕವಾಗಿದೆ. ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ ಎಂದು ಹೇಳಿದ್ದಾರೆ.

ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಲಿದ್ದಾರೆ. ಅಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ನಂತರ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್‌‍ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ ಎಂದು ನಿಖಿಲ್‌ ತಿಳಿಸಿದ್ದಾರೆ.

ಬಿಜೆಪಿಯಿಂದ ಧರ್ಮಸ್ಥಳ ಚಲೋ

ಧರ್ಮಸ್ಥಳ ಕುರಿತ ಸಂಪೂರ್ಣ ತನಿಖೆಯನ್ನು ಕೂಡಲೇ ಎನ್‍ಐಎಗೆ ಕೊಡಿ ಎಂದು ಮಂಜುನಾಥನ ಕೋಟ್ಯಂತರ ಭಕ್ತರು ಆಶಿಸುತ್ತೇವೆ. ಇದೇ ಆಗ್ರಹ ಮುಂದಿಟ್ಟುಕೊಂಡು ಸೆಪ್ಟೆಂಬರ್​ 1ರಂದು ಧರ್ಮಸ್ಥಳ ಚಲೋಗೆ ಎಂದು ಬಿಜೆಪಿ ತಿಳಿಸಿದೆ. ಅಂದಿನ ಕಾರ್ಯಕ್ರಮಕ್ಕೆ ಬರುವ ಹಿಂದೂಗಳು ತಮ್ಮ ನಗರ, ಗ್ರಾಮಗಳಲ್ಲಿ ದೇವಸ್ಥಾನಗಳಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸ್ಥಳೀಯವಾಗಿ ದೇವರ ಮೆರವಣಿಗೆ ಮಾಡಬೇಕು. ಅಂದು ಮಧ್ಯಾಹ್ನ 2 ಗಂಟೆಗೆ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಮೂಡಿಸುವ ಮತ್ತು ಸರಕಾರಕ್ಕೆ ಎಚ್ಚರಿಕೆ ನೀಡುವ ಬೃಹತ್ ಸಮಾವೇಶ ನಡೆಯುತ್ತದೆ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Chinthamani News: ಬಿಜೆಪಿಯಿಂದ ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಹೋರಾಟ ಬೃಹತ್ ಪ್ರತಿಭಟನೆ

ಸಾಮೂಹಿಕ ಕೊಲೆ ಆರೋಪದಿಂದ ಧರ್ಮಕ್ಷೇತ್ರಕ್ಕೆ ಕಳಂಕ ಬಂದಿದೆ. ಈ ದುಷ್ಕೃತ್ಯದ ಹಿಂದೆ ಇರುವ ಸಂಘಟನೆಗಳು, ದುಷ್ಟ ಶಕ್ತಿಗಳ ಬಗ್ಗೆ ಸೂಕ್ತ ತನಿಖೆ ಆಗಬೇಕಿದೆ. ಅಪಪ್ರಚಾರ ಮಾಡುವ ದುಷ್ಟ ಶಕ್ತಿಗಳು ಇದೇ ರೀತಿ ಇನ್ನೊಂದು ಹಿಂದೂ ದೇವಾಲಯದ ವಿರುದ್ಧ ಷಡ್ಯಂತ್ರ ಮಾಡಬಹುದು. ನಮ್ಮ ಹಿಂದುತ್ವವನ್ನು ನಾವು ಉಳಿಸಬೇಕೆಂದು ಅವರು ಮನವಿ ಮಾಡಿದರು.