ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala: ಧರ್ಮಸ್ಥಳ ಪ್ರಕರಣ; ಯೂಟ್ಯೂಬರ್ ಸಮೀರ್, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವರಿಗೆ ಸಂಕಷ್ಟ

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬದ ಬಗ್ಗೆ ಸುಳ್ಳು ಆರೋಪ ಹೊರಿಸಿರುವ ವಿಡಿಯೊಗಳನ್ನು ಹಂಚುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಬೆಂಗಳೂರಿನ ನ್ಯಾಯಾಲಯ ಮಹತ್ತರ ಆದೇಶ ಹೊರಡಿಸಿದೆ. ಸುಳ್ಳು ಸುದ್ದಿ ಹಾಗೂ ಆಕ್ಷೇಪಾರ್ಹ ವಿಡಿಯೊಗಳನ್ನು 3 ದಿನಗಳೊಳಗೆ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶಿಸಿದೆ.

ಸಮೀರ್, ಮಟ್ಟಣ್ಣವರ್‌ಗೆ ಎದುರಾಯ್ತು ಸಂಕಷ್ಟ

ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ -

Profile Sushmitha Jain Oct 14, 2025 10:23 PM

ಬೆಂಗಳೂರು: ಧರ್ಮಸ್ಥಳ (Dharmasthala) ಬುರುಡೆ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾ ಸೇರಿದಂತೆ ಹಲವು ವೇದಿಕೆಗಳ ಮೂಲಕ ಹಲವು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದವರಿಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ (Bengaluru Civil Cour) ಬಿಗ್ ಶಾಕ್ ನೀಡಿದೆ. ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ವೀರೇಂದ್ರ ಹೆಗ್ಗಡೆ (Veerendra heggade) ಹಾಗೂ ಡಿ. ಹರ್ಷೇಂದ್ರ ಕುಮಾ‌ರ್ ಸಹಿತ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿ ವಿಡಿಯೊ ಪ್ರಸಾರ ಮಾಡಿದವರಿಗೆ ಕೋರ್ಟ್ ಚಾಟಿ ಬೀಸಿದೆ.

ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ, ಅದರ ಮುಖ್ಯಸ್ಥರು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸುಳ್ಳು ಆರೋಪ ಹೊರಿಸಿ ವಿಡಿಯೊ ಮಾಡಿ ಪೋಸ್ಟ್‌ ಮಾಡಿದವರ ವಿರುದ್ಧ ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ. ಹರ್ಷೇಂದ್ರ ಕುಮಾರ್ (D. Harshendra Kumar) 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಸುದ್ದಿಯನ್ನು ಓದಿ: Dharmasthala Case: ಧರ್ಮಸ್ಥಳ ಪ್ರಕರಣ: ಗೃಹ ಇಲಾಖೆ, ಎಸ್‌ಐಟಿ, ಇಡಿ, ಐಟಿ ಇಲಾಖೆಗೆ ಹೈಕೋರ್ಟ್ ನೋಟಿಸ್

ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಪರವಾಗಿ ಸಲ್ಲಿಸಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ಬೆಂಗಳೂರಿನ ಕೋರ್ಟ್ ಈ ಮಹತ್ತರವಾದ ಆದೇಶ ಹೊರಡಿಸಿದ್ದು, ಸುಳ್ಳು ಸುದ್ದಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ ವಿಡಿಯೊ ಹರಿಯಬಿಟ್ಟವರಿಗೆ ಬಿಗ್ ಶಾಕ್ ನೀಡಿದೆ.

ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬದ ಬಗ್ಗೆ ಪ್ರಸಾರ ಮಾಡಿದ ಆಕ್ಷೇಪಾರ್ಹ ವಿಡಿಯೊಗಳನ್ನು ಡಿಲೀಟ್ ಮಾಡುವಂತೆ ಮತ್ತು ಇನ್ನು ಮುಂದೆ ಧರ್ಮಸ್ಥಳದ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ನಿರ್ಬಂಧಕಾಜ್ಞೆ ವಿಧಿಸಿ ಆದೇಶ ಹೊರಡಿಸಿದೆ. ಅಲ್ಲದೇ ಆ ಎಲ್ಲ ವಿಡಿಯೊಗಳನ್ನು ಅಳಿಸಿ ಹಾಕಲು 3 ದಿನ ಗಡುವು ನೀಡಲಾಗಿದ್ದು, ಈ ಆದೇಶವನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಯೂಟ್ಯೂಬರ್ ಸಮೀರ್ ಎಂ.ಡಿ. (Youtuber Sameer MD), ಗಿರೀಶ್‌ ಮಟ್ಟಣ್ಣವರ್‌ (Girish Mattannavar), ಅಜಯ್‌ ಅಂಚನ್ (Ajay Anchan) ಕುಡ್ಲ‌ ರಾಂಪ್ ಪೇಜ್, ಅಣ್ಣಾಬಾಂಡ್ ಶ್ರೀನಾಥ್ (Annabond Srinath) ಎಂಬವವರಿಗೆ ಧರ್ಮಸ್ಥಳ ಹಾಗೂ ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾನಹಾನಿಕರವಾಗಿ ಮಾತನಾಡಿದ ವಿಡಿಯೊಗಳನ್ನು ತಕ್ಷಣ ಡಿಲೀಟ್ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಜತೆಗೆ ನೀವು ಏಕೆ 10 ಕೋಟಿ ರೂಪಾಯಿ ಮಾನನಷ್ಟ ನೀಡಬಾರದು ‌ಎಂಬುದಕ್ಕೆ ಕಾರಣ‌ ಕೇಳಿ ನೋಟಿಸ್ ಜಾರಿ ಮಾಡಿದೆ. ಇನ್ನೂ ಅರ್ಜಿದಾರರ ಪರ ಖ್ಯಾತ ನ್ಯಾಯವಾದಿಗಳಾದ ರಾಜಶೇಖರ ಹಿಲ್ಯಾರ್ ವಾದ ಮಂಡಿಸಿದರು.