ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala: ನವೆಂಬರ್‌ 15ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಮಂಜುನಾಥನ ಸನ್ನಿಧಿಯಲ್ಲಿ ಮೇಳೈಸಲಿದೆ ಸುಜ್ಞಾನ ಬೆಳಕಿನ ವೈಭವ

Dharmasthala Lakshdeepotsava: ಪ್ರತಿ ವರ್ಷದಿಂತೆ ಈ ಬಾರಿಯೂ ಕಾರ್ತಿಕ ಮಾಸದಲ್ಲಿ ಧರ್ಮಸ್ಥಳದಲ್ಲಿ ಲಕ್ಷ್ಮ ದೀಪೋತ್ಸವವನ್ನು ಆಯೋಜಿಸಲಾಗಿದೆ. ಇದು ಸುಮಾರು ಐದು ದಿನಗಳ ಕಾಲ ನಡೆಯಲಿದ್ದು, ಕಾರ್ತಿಕ ಮಾಸದಲ್ಲಿ ನಡೆಯುವ ಈ ಲಕ್ಷದೀಪೋತ್ಸವ ಸಂಭ್ರಮದಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸೇರಿದಂತೆ ಹತ್ತು ಹಲವು ಕಾರ್ಯಕ್ರಮ ನಡೆಯಲಿದೆ.

ನ.18 ಸರ್ವಧರ್ಮ ಸಮ್ಮೇಳನ, ನ.19: ಸಾಹಿತ್ಯ ಸಮ್ಮೇಳನ

ಧರ್ಮಸ್ಥಳ -

Profile
Sushmitha Jain Nov 10, 2025 10:25 PM

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ(Dharmasthala) ನ. 15ರಿಂದ ನ. 19ರವರೆಗೆ ಒಟ್ಟು 5 ದಿನಗಳ ಕಾಲ ಲಕ್ಷದೀಪೋತ್ಸವ (Lakshadeepotsava) ಸಂಭ್ರಮ ಮೈದಳೆಯಲಿದೆ. ಕಾರ್ತಿಕ ಮಾಸದಲ್ಲಿ ನಡೆಯುವ ಈ ಲಕ್ಷದೀಪೋತ್ಸವ ಸಂಭ್ರಮದಲ್ಲಿ ಭಕ್ತರು ಶ್ರೀ ಕ್ಷೇತ್ರದಲ್ಲಿ ನಡೆಯುವ ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳಲಿದ್ದಾರೆ.

ನ. 18ರಂದು ಸಾಯಂಕಾಲ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದೆ. ಸಚಿವ ಡಾ. ಎಂ.ಬಿ. ಪಾಟೀಲ್ ಈ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಹರಿಹರಪುರದ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಪ್ರಜಾವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕ ಎ. ಸೂರ್ಯಪ್ರಕಾಶ್ ಪಂಡಿತ್ ಮತ್ತು ಖ್ಯಾತ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 8.30ರಿಂದ ಚೆನ್ನೈನ ಶ್ರೀದೇವಿ ನೃತ್ಯಾಲಯದ ಕಲಾವಿದರಿಂದ ವಿದುಷಿ ಡಾ. ಶೀಲಾ ಉಣ್ಣಿಕೃಷ್ಣನ್ ನಿರ್ದೇಶನದಲ್ಲಿ ಭರತನಾಟ್ಯ ಪ್ರದರ್ಶನ ನಡೆಯಲಿದೆದೆ. ಅಂದು ರಾತ್ರಿ ಕಂಚಿಮಾರು ಕಟ್ಟೆ ಉತ್ಸವ ನಡೆಯಲಿದೆ.

ಈ ಸುದ್ದಿಯನ್ನು ಓದಿ: ‌Dharmasthala Case: ಅ.31ರ ಒಳಗೆ ಧರ್ಮಸ್ಥಳ ಪ್ರಕರಣದ ತನಿಖೆ ಸಂಪೂರ್ಣ: ಜಿ. ಪರಮೇಶ್ವರ್

ನ. 19ರಂದು ಸಾಯಂಕಾಲ 5 ಗಂಟೆಗೆ ಸಾಹಿತ್ಯ ಸಮ್ಮೇಳನದ 93ನೇ ಅಧೀವೇಶನವನ್ನು ಹಿರಿಯ ಸಾಹಿತಿ ಮತ್ತು ಅಂಕಣಕಾರ ಪ್ರೊ. ಪ್ರೇಮಶೇಖರ ಉದ್ಘಾಟಿಸಲಿದ್ದಾರೆ. ವಿಶ್ವವಾಣಿ ಪತ್ರಿಕೆಯ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಖ್ಯಾತ ಲೇಖಕಿ ಶಾಂತಾ ನಾಗಮಂಗಲ, ವಿವೇಕಹಂಸ ಮಾಸಪತ್ರಿಕೆಯ ಸಂಪಾದಕ ಡಾ. ರಘು ವಿ. ಮತ್ತು ಧಾರವಾಡದ ಖ್ಯಾತ ಸಾಹಿತಿ ಡಾ. ಬಿ.ಎಂ. ಶರಭೇಂದ್ರ ಸ್ವಾಮಿ ಉಪನ್ಯಾಸ ನೀಡಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 8.30ರಿಂದ ಬೆಂಗಳೂರಿನ ರಾಹುಲ್ ವೆಲ್ಲಾಲ್ ಮತ್ತು ಬಳಗದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಬಳಿಕ ರಾತ್ರಿ 9.45ರಿಂದ ‘ದಕ್ಷ ಯಜ್ಞ’ ಯಕ್ಷಗಾನ ಪ್ರದರ್ಶನ ನಡೆಲಿದೆ. ರಾತ್ರಿ 12 ಗಂಟೆ ಬಳಿಕ ಗೌರಿಮಾರುಕಟ್ಟೆ ಉತ್ಸವ ನಡೆಯಲಿದೆ.

ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಆಗಮಿಸುತ್ತಾರೆ. ನ. 20ರಂದು ಬೆಳಗ್ಗಿನ ಜಾವ ಲಕ್ಷದೀಪೋತ್ಸವ ಸಮಾಪನಗೊಳ್ಳಲಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಚೆಂಡೆ, ಕೊಂಬು, ಕಹಳೆ, ವಾಲಗ, ನಾಗಸ್ವರ ಸೇರಿದಂತೆ ಸಾವಿರಾರು ಕಲಾವಿದರು ದೀಪೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಲಿದ್ದಾರೆ. ಲಕ್ಷದೀಪೋತ್ಸವದಲ್ಲಿ ಭಕ್ತrige ಪಾಲ್ಗೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಕಡೆಗಳಿಂದ ವಿಶೇಷ ಬಸ್ ವ್ಯವಸ್ಥೆಯನ್ನು ಕೆ.ಎಸ್.ಆರ್.ಟಿ.ಸಿ. ಮಾಡಿದೆ.