Dharmasthala: ಧರ್ಮಸ್ಥಳದ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್
Dharmasthala, ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ(Dharmasthala)ದಲ್ಲಿ ನಿರ್ಮಾಣಗೊಂಡಿರುವ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಅನ್ನು ಇಂದು(ಜ.7) ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್(Vice president Jagdeep Dhankhar) ಉದ್ಘಾಟಿಸಿದರು.
Sushmitha Jain
January 7, 2025
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ(Dharmasthala)ದಲ್ಲಿ ನಿರ್ಮಾಣಗೊಂಡಿರುವ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಅನ್ನು ಇಂದು(ಜ.7) ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್(Vice president Jagdeep Dhankhar) ಉದ್ಘಾಟಿಸಿದರು.
ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಗದೀಪ್ ಧನ್‌ಕರ್ ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ನೂತನ ಕ್ಯೂ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. ಭಕ್ತಾದಿಗಳ ಅನುಕೂಲಕ್ಕಾಗಿ ಸರ್ವ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ‘ಶ್ರೀ ಸಾನ್ನಿಧ್ಯ’ವನ್ನು ನಿರ್ಮಿಸಿದ್ದು, ಇಲ್ಲಿ ವಿಶ್ರಾಂತಿ ಕೊಠಡಿ, ಶಿಶು ಪಾಲನಾ ಕೇಂದ್ರ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡಿದೆ. ಎಲ್ಲರಿಗೂ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ ಎಂದರು.
https://youtu.be/un-Su84iGvQ
ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಹೇಮಾವತಿ ವಿ. ಹೆಗ್ಗಡೆ, ಹರ್ಷೇಂದ್ರ ಹೆಗ್ಗಡೆ, ಸುರೇಂದ್ರ ಹೆಗ್ಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನೂತನ ಸಂಕೀರ್ಣದ ವಿಶೇಷಗಳು
2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 16 ವಿಶಾಲ ಸಭಾಭವನಗಳಲ್ಲಿ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಪ್ರತಿ ಸಭಾಭವನದಲ್ಲಿ 600-800 ಮಂದಿ ವಿಶ್ರಾಂತಿ ಪಡೆದುಕೊಳ್ಳಲು ಅವಕಾಶವಿದೆ. ಇದರರ್ಥ, ಸರದಿಯಲ್ಲಿ ಜನರು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ವಿಶಾಲವಾದ ಭವನದಲ್ಲಿ ಕುರ್ಚಿಗಳ ಮೇಲೆ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು.ಭವನಗಳಲ್ಲಿ ಮಕ್ಕಳ ಆರೈಕೆ ಕೊಠಡಿ, ಶೌಚಗೃಹ, ಕ್ಯಾಂಟೀನ್ ಸೌಲಭ್ಯವೂ ಇದೆ. ಅಲ್ಲಲ್ಲಿ ಸೂಚನಾ ಫಲಕ ಹಾಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.
ಪ್ರವೇಶದ್ವಾರದ ಎದುರು ಧರ್ಮಸ್ಥಳದ ಇತಿಹಾಸ ಮತ್ತು ಪರಂಪರೆ ಬಿಂಬಿಸುವ ಆಕರ್ಷಕ ಕಲಾಕೃತಿಗಳನ್ನು ಅಳವಡಿಸಲಾಗಿದೆ. ತುರ್ತು ಪ್ರಕಟಣೆಗಳು ಮತ್ತು ಸುರಕ್ಷತಾ ಸೂಚನೆಗಳನ್ನು ತಿಳಿಸಲು ಭವನದಲ್ಲಿ 263 ಸ್ಪೀಕರ್‌ಗಳು ಮತ್ತು 54 ಆಂಪ್ಲಿಫೈಯರ್‌ಗಳನ್ನು ಅಳವಡಿಸಲಾಗಿದೆ. ಇದಲ್ಲದೆ, 650 ಕಿಲೋವ್ಯಾಟ್‌ಗಳ ಸೌರ ಫಲಕಗಳನ್ನು ಅಳವಡಿಸಲಾಗಿದ್ದು, ಇದು ವಿದ್ಯುತ್ ಉತ್ಪಾದಿಸುತ್ತದೆ. ಅಲ್ಲದೆ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುತ್ತದೆ
ಈ ಸುದ್ದಿಯನ್ನೂ ಓದಿ: Dharmasthala: ಧರ್ಮಸ್ಥಳ ಯೋಜನೆಗೆ ಎಸ್‌ಬಿಐ 4,500 ಕೋಟಿ ಸಾಲ