ಧರ್ಮಸ್ಥಳ ʼಬುರುಡೆʼ ನಾಟಕ: ಪ್ರಕಾಶ್ ರಾಜ್ ಪಾತ್ರಧಾರಿ?
ಸಂಚಿನ ಕುರಿತು ಸಮಗ್ರ ತನಿಖಾ ವರದಿ ಸಲ್ಲಿಕೆ ಕೋರಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನ ಅಲಿಯಾಸ್ ಚಿನ್ನಯ್ಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ. ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಪ್ರಭಾವಿ ವ್ಯಕ್ತಿಗಳು ಹಾಗೂ ಯೂ ಟ್ಯೂಬರ್ʼಗಳ ಹೆಸರುಗಳು ಉಖವಾಗಿರು ವುದು ತೀವ್ರ ಸಂಚಲನ ಮೂಡಿಸಿದೆ.
-
ಧರ್ಮಸ್ಥಳ ʼಬುರುಡೆʼ ನಾಟಕ: ಪ್ರಕಾಶ್ ರಾಜ್ ಪಾತ್ರಧಾರಿ?
200 ಕೋಟಿ ರು.ಗಳ ಷಡ್ಯಂತ್ರ, ಪ್ರಭಾವಿಗಳ ಕೈವಾಡ: ಹೈಕೋರ್ಟ್‌ನಲ್ಲಿ ಚಿನ್ನಯ್ಯ ರಿಟ್
ಧರ್ಮಸ್ಥಳ ಗ್ರಾಮದ ‘ಬುರುಡೆ ಪ್ರಕರಣ’ದ ತನಿಖೆಗೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆಗೆ ಕುಂದು ತರಲು ಬರೋಬ್ಬರಿ 200 ಕೋಟಿ ರು. ಬಜೆಟ್ ಇಟ್ಟುಕೊಂಡು ಬೃಹತ್ ಷಡ್ಯಂತ್ರ ರೂಪಿಸ ಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಹೆಸರು ಪ್ರಸ್ತಾಪ ವಾಗಿದೆ.
ಸಂಚಿನ ಕುರಿತು ಸಮಗ್ರ ತನಿಖಾ ವರದಿ ಸಲ್ಲಿಕೆ ಕೋರಿ ಪ್ರಕರಣದ ಪ್ರಮುಖ ಆರೋಪಿ ಯಾಗಿದ್ದ ಚಿನ್ನ ಅಲಿಯಾಸ್ ಚಿನ್ನಯ್ಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ. ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಪ್ರಭಾವಿ ವ್ಯಕ್ತಿಗಳು ಹಾಗೂ ಯೂ ಟ್ಯೂಬರ್ʼಗಳ ಹೆಸರುಗಳು ಉಖವಾಗಿರು ವುದು ತೀವ್ರ ಸಂಚಲನ ಮೂಡಿಸಿದೆ.
‘ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ನೀನು ಹೇಳಿಕೆ ಕೊಡು, 29ನೇ ತಾರೀಕು ಬಂದು ನಿನ್ನನ್ನು ಅಪ್ಪಿಕೊಳ್ಳುತ್ತೇನೆ’ ಎಂದು ನಟ ಪ್ರಕಾಶ್ ರಾಜ್ ಅವರು ತಮಿಳಿನಲ್ಲಿ ತಮಗೆ ಹೇಳಿದ್ದರು ಎಂಬುದಾಗಿ ಚಿನ್ನಯ್ಯ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ. ಜತೆಗೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್, ವಿಠಲಗೌಡ, ಮತ್ತು ಜಯಂತ್ ಷಡ್ಯಂತ್ರದ ಮುಖ್ಯ ರೂವಾರಿಗಳು.
ಇದನ್ನೂ ಓದಿ: Burude Gang: ನೋಟಿಸ್ʼಗೆ ಮುನ್ನವೇ ʼಆರೋಪʼ ಹೊತ್ತುಕೊಂಡ ಬುರುಡೆ ಗ್ಯಾಂಗ್
ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ ಹಾಗೂ ಅಜಯ್ ಅಂಚನ್ ಎಂಬುವವರು ತಮ್ಮ ಸ್ವಾರ್ಥಕ್ಕೆ ಬೇಕಾದ ರೀತಿಯಲ್ಲಿ 30 ರಿಂದ 35 ವೀಡಿಯೋಗಳನ್ನು ಮೊದಲೇ ಮಾಡಿಕೊಂಡಿದ್ದರು. ಅವರು ತೋರಿಸಿದ ಸ್ಥಳಗಳನ್ನೇ ನಾನು ನಂತರ ಎಸ್ಐಟಿ ಅಧಿಕಾರಿಗಳಿಗೆ ತೋರಿಸಬೇಕಾಯಿತು ಎಂದು ಚಿನ್ನಯ್ಯ ದೂರಿದ್ದಾನೆ.
ಎಸ್‌ಐಟಿ ವಿಳಂಬ ನೀತಿ: ಎಫ್ಐಆರ್ ಸಂಖ್ಯೆ 39/2025ರ ತನಿಖೆ ಆರಂಭವಾಗಿ ಇಷ್ಟು ದಿನಗಳಾದರೂ ಎಸ್‌ಐಟಿ ಅಂತಿಮ ವರದಿ ಸಲ್ಲಿಸದೆ ವಿಳಂಬ ಮಾಡುತ್ತಿದೆ. ಪ್ರಾಥಮಿಕ ವರದಿಯಲ್ಲಿ ಅಸಲಿ ಆರೋಪಿಗಳ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದರೂ, ಅವರ ವಿರುದ್ಧ ಎಸ್‌ಐಟಿ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾನೆ.
ಕೇರಳದ ಹಣದ ಲಿಂಕ್: ಈ ಷಡ್ಯಂತ್ರದ ಹಿಂದೆ ಅಂತಾರಾಜ್ಯ ಮಟ್ಟದ ಆರ್ಥಿಕ ವಹಿವಾಟು ನಡೆದಿರುವ ಬಗ್ಗೆ ಚಿನ್ನಯ್ಯ ಕೋರ್ಟ್‌ಗೆ ಮಾಹಿತಿ ನೀಡಿದ್ದಾನೆ. ಧರ್ಮಸ್ಥಳದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಲು ಒಟ್ಟು 200 ಕೋಟಿ ರು.ಬಜೆಟ್ ಸಿದ್ಧವಾಗಿತ್ತು.
ಈ ಸಂಚಿನ ಭಾಗವಾಗಿ ನನಗೆ 50 ಲಕ್ಷ ರು. ಕೊಡುವ ಆಮಿಷವನ್ನು ಮಹೇಶ್ ಶೆಟ್ಟಿ ತಿಮರೋಡಿ ಒಡ್ಡಿದ್ದರು. ಈ ಷಡ್ಯಂತ್ರಕ್ಕಾಗಿ ಕೇರಳದಿಂದ ಹಣ ಸಂದಾಯವಾಗಿದೆ. ಇದ ರೊಂದಿಗೆ ಚಿತ್ರದುರ್ಗದ ರಮಾ ನಾಗರಾಜ್ ಎಂಬುವವರೂ ಕೂಡ ಹಣ ನೀಡಿzರೆ. ತಮ್ಮ ಪತ್ನಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವ ಮಾಹಿತಿ ಹಾಗೂ ನಗದು ಹಣದ ವಹಿವಾಟಿನ ಸಂಪೂರ್ಣ ವಿವರಗಳನ್ನು ಚಿನ್ನಯ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದಾನೆ.
ನಾನೊಬ್ಬನೇ ಏಕೆ ಈ ಪ್ರಕರಣದಲ್ಲಿ ಬಲಿಪಶು?
ಅರ್ಜಿಯಲ್ಲಿ ಇಡೀ ಜಾಲವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿರುವ ಚಿನ್ನಯ್ಯ, ಎಸ್‌ಐಟಿ ತನಿಖೆಯ ಕರ್ತವ್ಯಲೋಪವನ್ನು ಪ್ರಶ್ನಿಸಿದ್ದಾನೆ. ‘ನನ್ನ ಪಾಡಿಗೆ ನಾನಿದ್ದೆ. ಇವರೇ ನನ್ನನ್ನು ಒತ್ತಾಯಪೂರ್ವಕವಾಗಿ ಕರೆ ತಂದು ಇದರಲ್ಲಿ ಸಿಲುಕಿಸಿದ್ದಾರೆ. ಇಷ್ಟೇ ದೊಡ್ಡ ಮಟ್ಟದ ಪ್ರಭಾವಿಗಳು ಸೇರಿ ಷಡ್ಯಂತ್ರ ಹೆಣೆದಿದ್ದರೂ, ಜೈಲಿಗೆ ಹೋಗಿದ್ದು ಪರಿಶಿಷ್ಠ ಜಾತಿಗೆ ಸೇರಿದ ನಾನೊಬ್ಬನೇ. ಅಸಲಿ ಸೂತ್ರಧಾರರು ಈಗಲೂ ಆರಾಮಾಗಿದ್ದಾರೆ ಎಂದು ಚಿನ್ನಯ್ಯ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.
ಒತ್ತೆಯಾಳಾಗಿಟ್ಟಿದ್ದ ಆರೋಪ: ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಹೇಳಲು ನನ್ನ ಆತ್ಮಸಾಕ್ಷಿ ಒಪ್ಪಲಿಲ್ಲ. ಆಗ ಮಹೇಶ್ ಶೆಟ್ಟಿ ತಿಮರೋಡಿ ಚಾಕುವಿನಿಂದ ನನ್ನನ್ನು ಕೊಲ್ಲಲು ಬಂದಿದ್ದರು. ಹೇಳಿಕೊಟ್ಟಂತೆ ಕೇಳದಿದ್ದರೆ ನಿನ್ನ ಹೆಂಡತಿಯನ್ನು ಕೊಲ್ಲುತ್ತೇವೆ ಎಂದು ಹೆದರಿಸಿದ್ದರು.
ಒಂದು ವೇಳೆ ತಪ್ಪು ಹೇಳಿಕೆ ನೀಡಿದರೆ, ಅದೇ ಜಾಗದಲ್ಲಿ ಹೂತು ಹಾಕುವುದಾಗಿ ಗ್ಯಾಂಗ್ ಬೆದರಿಕೆ ಹಾಕಿತ್ತು. ನನ್ನ ಕೈಗೆ ಬುರುಡೆ ಕೊಟ್ಟು ಫೋಟೋ ತೆಗೆಸಿಕೊಂಡಿದ್ದರು. ಸುಜಾತಾ ಭಟ್ ಎಂಬುವವರ ಜತೆ ದೆಹಲಿಗೆ ಕರೆದೊಯ್ದು ಕಂಡ ಕಂಡಲ್ಲಿ ಸಹಿ ಹಾಕಿಸಿಕೊಂಡರು. ವಕೀಲರ ಕಚೇರಿಯಲ್ಲಿ ಕೂರಿಸಿ ಹೇಗೆ ಹೇಳಿಕೆ ನೀಡಬೇಕೆಂದು ತರಬೇತಿ ನೀಡಲಾಗಿತ್ತು.
ನನ್ನನ್ನು ಸಂಪೂರ್ಣ ವಾಗಿ ಒತ್ತೆಯಾಳುವಿನಂತೆ ಇರಿಸಿಕೊಳ್ಳಲಾಗಿತ್ತು. ನನಗೆ ಹಾಕಲಾ ಗಿದ್ದ ಮಾಸ್ಕ್‌ನ ಹಿಂದೆ ಹೆಡ್‌ಪೋನ್ ಇರಿಸಲಾಗಿತ್ತು. ಅದರಲ್ಲಿ ಕ್ಷಣಕ್ಷಣಕ್ಕೂ ನಾನು ಏನು ಮಾತನಾಡಬೇಕು ಎಂಬ ಸೂಚನೆಗಳು ಬರುತ್ತಿದ್ದವು. ಈ ಮಾನಸಿಕ ಕಿರುಕುಳ ತಾಳಲಾರದೆ ನಾನು ಒಮ್ಮೆ ಆತ್ಮಹತ್ಯೆಗೂ ಯತ್ನಿಸಿದ್ದೆ ಎಂದು ಚಿನ್ನಯ್ಯ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.