ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಭಾರತೀಯ ರೆಡ್ ಕ್ರಾಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ. ಮುರಲೀ ಮೋಹನ್ ಚೂಂತಾರು ನೇಮಕ

ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿಯ ರಾಷ್ಪ್ರೀಯ ಕಾರ್ಯಕಾರಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಡಾ ಮುರಲೀ ಮೋಹನ್ ಚೂಂತಾರು ನೇಮಕಗೊಂಡಿದ್ದಾರೆ. ಗೃಹರಕ್ಷಕ ದಳದ ದಕ್ಷಿಣ ಕನ್ನಡ ಜಿಲ್ಲಾ ಕಮಾಂಡೆಂಟ್ ಆಗಿ ಮತ್ತು ರೆಡ್ ಕ್ರಾಸ್ ಸಂಸ್ಥೆಯ ವಿವಿಧ ಸ್ತರಗಳಲ್ಲಿ ಅವರು ನೀಡಿದ ಸುದೀರ್ಘ ಹಾಗೂ ನಿಸ್ವಾರ್ಥ ಸಮಾಜ ಸೇವೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿಯ ರಾಷ್ಪ್ರೀಯ ಕಾರ್ಯಕಾರಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಡಾ ಮುರಲೀ ಮೋಹನ್ ಚೂಂತಾರು (Dr. Murali Mohan Choontharu) ನೇಮಕಗೊಂಡಿದ್ದಾರೆ. ಗೃಹರಕ್ಷಕ ದಳದ ದಕ್ಷಿಣ ಕನ್ನಡ ಜಿಲ್ಲಾ ಕಮಾಂಡೆಂಟ್ ಆಗಿ ಮತ್ತು ರೆಡ್ ಕ್ರಾಸ್ ಸಂಸ್ಥೆಯ ವಿವಿಧ ಸ್ತರಗಳಲ್ಲಿ ಅವರು ನೀಡಿದ ಸುದೀರ್ಘ ಹಾಗೂ ನಿಸ್ವಾರ್ಥ ಸಮಾಜ ಸೇವೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ಭಾರತದ ರಾಷ್ಟ್ರಪತಿಯವರ ಪರವಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈ ಮಹತ್ವದ ನೇಮಕಾತಿಯನ್ನು ಮಾಡಿದೆ.

ಡಾ ಚೂಂತಾರು ಅವರು ರೆಡ್ ಕ್ರಾಸ್ ಸೊಸೈಟಿಯ ಸದಸ್ಯರಾಗಿದ್ದು ಹಲವಾರು ವರುಷಗಳಿಂದ ರೆಡ್ ಕ್ರಾಸ್ ಸೊಸೈಟಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಯೂತ್ ರೆಡ್ ಕ್ರಾಸ್ ಅಧಿಕಾರಿಯಾಗಿ ನಿಟ್ಟೆ ವಿಶ್ವ ವಿದ್ಯಾಲಯದಲ್ಲಿ ಐದು ವರ್ಷ ಕೆಲಸ ಮಾಡಿದ್ದಾರೆ. ನಂತರ ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ಇದರ ಸಭಾಪತಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇವರ ಅಧಿಕಾರದ ಅವಧಿಯಲ್ಲಿಯೇ 2012 ರಲ್ಲಿ ರೆಡ್ ಕ್ರಾಸ್ ರಕ್ತ ನಿಧಿ ಸರ್ಕಾರಿ ಲೇಡಿ ಗೋಷನ್ ಆಸ್ಪತ್ರೆಗೆ ಸ್ಥಳಾಂತರಗೊಂಡಿದೆ.

ರಕ್ತ ನಿಧಿ ಸಮಿತಿಯ ಅಧ್ಯಕ್ಷರಾಗಿ ಭದ್ರ ಬುನಾದಿ ಹಾಕಿದ ಹೆಗ್ಗಳಿಕೆ ಇವರದ್ದು. ನೂರಕ್ಕಿಂತಲೂ ಹೆಚ್ಚು ರಕ್ತದಾನ ಶಿಬಿರ ಆಯೋಜಿಸಿದ್ದಾರೆ. ಸ್ವತ ರಕ್ತದಾನಿಯಾಗಿರುವ ಇವರು ನೂರಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದಾರೆ. ಸದ್ಯ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ರಾಜ್ಯ ಶಾಖೆ ಇದರ ಕಾರ್ಯ ಕಾರಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಡಾ. ಚೂಂತಾರು ಅವರು ಮಾನವೀಯತೆಯಿಂದಲೇ ವಿಶ್ವಶಾಂತಿ ಎಂಬ ತತ್ವದಡಿಯಲ್ಲಿ ನಿಸ್ವಾರ್ಥ ಕೆಲಸ ಮಾಡುವ ರೆಡ್ ಕ್ರಾಸ್ ಸೊಸೈಟಿಗೆ ನೇಮಕವಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ.

Vishakha Bhat Heggar

View all posts by this author