ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Fraud Case: ಯುವತಿಗೆ ಮಗು ನೀಡಿ ಮೋಸ; ಪುತ್ತೂರು ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಮಹತ್ವದ ಆದೇಶ

ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಆಕೆಯನ್ನು ಆರೋಪಿ ಮದುವೆಯಾಗುವುದೇ ಉತ್ತಮ. ಯುವತಿ ಮತ್ತು ಮಗುವನ್ನು ಅನಾಥ ಆಗಿಸುವುದು ಸರಿಯಲ್ಲ. ತಂದೆ ಆಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿಯ ಕರ್ತವ್ಯ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.ಇದೀಗ ಜೀವನಾಂಶ ಆದೇಶ ಕೂಡ ನೀಡಿದೆ.

ಆರೋಪಿ ಕೃಷ್ಣ ರಾವ್

ಬೆಂಗಳೂರು, ಏ.​ 24: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ (Fraud Case) ಪುತ್ತೂರಿನ (Puttur) ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್​ (Karnataka high court)​ ಮಹತ್ವದ ಆದೇಶ ನೀಡಿದೆ. ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತಿನ ಮೇರೆಗೆ ಕೃಷ್ಣ ಜೆ.ರಾವ್ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

ಆರೋಪಿಯ ದೈಹಿಕ ಸಂಪರ್ಕದಿಂದ ಯುವತಿಗೆ ಮಗುವಾಗಿದೆ. 10 ತಿಂಗಳ ಮಗು, ತಾಯಿಯನ್ನು ಅನಾಥವನ್ನಾಗಿಸುವುದು ಬೇಡ. ಹೀಗಾಗಿ ಮುಂದಿನ ಆದೇಶದವರೆಗೂ ಮಗು ಹಾಗೂ ತಾಯಿಗೆ ಮಾಸಿಕ 75 ಸಾವಿರ ರೂಪಾಯಿ ಪಾವತಿಸುವಂತೆ ಅರ್ಜಿದಾರ ಕೃಷ್ಣ ಜೆ. ರಾವ್​ಗೆ ಹೈಕೋರ್ಟ್ ಸೂಚನೆ ನೀಡಿದೆ. ಜೊತೆಗೆ ಸಂತ್ರಸ್ತೆ ಹಾಗೂ ಸಂಬಂಧಿಕರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ತಿಳಿಸಿದೆ.

ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ ಕೃಷ್ಣ ಜೆ.ರಾವ್ ಪರ ವಾದ ಮಂಡಿಸಿದ್ದ ವಕೀಲ ಪಿ.ಪಿ.ಹೆಗ್ಡೆ, 7 ವರ್ಷಗಳ ಪ್ರೀತಿ ಇತ್ತು, ಕ್ರಿಮಿನಲ್ ಕೇಸ್‌ನಿಂದಾಗಿ ರಾಜಿಯಾಗಿಲ್ಲ. ರಾಜಕೀಯ ವಿರೋಧಿಗಳು ಆರೋಪಿ ತಂದೆಯ ತೇಜೋವಧೆ ಮಾಡಿದ್ದಾರೆ. ಕ್ರಿಮಿನಲ್ ಕೇಸ್​​ನಲ್ಲೂ ಆರೋಪಿಗಳನ್ನಾಗಿಸಿದ್ದಾರೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದಿತ್ತು.

Puttur Love dokha: ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಪ್ರೇಮ ವಂಚನೆ ಪ್ರಕರಣ: ಸಾಯಲು ಯತ್ನಿಸಿದ ಮಗುವಿನ ತಾಯಿ

ಯುವತಿ ಮತ್ತು ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ ಎಂದು ಅಭಿಪ್ರಾಯಪಟ್ಟಿತ್ತು. ಅಲ್ಲದೇ ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ಆರೋಪಿ ಪರ ವಕೀಲರಿಗೆ ಪ್ರಶ್ನಿಸಿದ್ದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ, ಇದಕ್ಕೆ ಅಭಿಪ್ರಾಯ ತಿಳಿಸುವಂತೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಅಂದರೆ ಇಂದಿಗೆ ಮುಂದೂಡಿತ್ತು.

ಹರೀಶ್‌ ಕೇರ

View all posts by this author