Mangalore Doctor Controversy: ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ, ನಾನು ಭಾರತವನ್ನು ದ್ವೇಷಿಸುತ್ತೇನೆ; ಮಂಗಳೂರು ವೈದ್ಯೆಯಿಂದ ದೇಶ ವಿರೋಧಿ ಪೋಸ್ಟ್
ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ. ಆಸ್ಪತ್ರೆಯ ಹೆಚ್ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಕೆ ಭಾರತವನ್ನು ನಾನು ದ್ವೇಷಿಸುತ್ತೇನೆ ಎಂದು ಪೋಸ್ಟ್ ಹಾಕಿದ್ದಾಳೆ.


ದಕ್ಷಿಣ ಕನ್ನಡ: ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ. ಆಸ್ಪತ್ರೆಯ ಹೆಚ್ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನ ವೈದ್ಯೆಯೊಬ್ಬಳು ದೇಶ ವಿರೋಧಿ ಪೋಸ್ಟ್ ಹಾಕಿದ್ದು, (Mangalore Doctor Controversy) ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಆಕೆ ತನ್ನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾಳೆ.
ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದು, ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್ಆರ್ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್ಎಸ್ ಕಲಂ 196(1)(a), 353(2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಆಡಳಿತ ಪಕ್ಷ ಹಾಗೂ ಗುಪ್ತಚರ ಇಲಾಖೆ ಮತ್ತು ಭದ್ರತಾಪಡೆಗಳ ವೈಫಲ್ಯ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ದೇಶದ್ರೋಹ ಕೇಸ್ ಹಾಕಲಾಗಿದೆ . ಗಾಯಕಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ 40 ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ ನಂತರ, ಪ್ರಧಾನಿ ಮೋದಿ ಈಗ ಬಿಹಾರದಲ್ಲಿ ಪಹಲ್ಗಾಮ್ ದಾಳಿಯ ಹೆಸರಿನಲ್ಲಿ ಮತ ಯಾಚಿಸುತ್ತಾರೆ ಎಂಬ ಪೋಸ್ಟ್‌ನನ್ನು ಹಂಚಿಕೊಂಡಿದ್ದರು.
ಈ ಸುದ್ದಿಯನ್ನೂ ಓದಿ: Taliban foreign minister: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಆದ ಕೆಲವೇ ದಿನಗಳಲ್ಲಿ ತಾಲಿಬಾನ್ ವಿದೇಶಾಂಗ ಸಚಿವರನ್ನು ಭೇಟಿಯಾದ ಭಾರತೀಯ ರಾಯಭಾರಿ!
ಪಾಕಿಸ್ತಾನಿ ಪತ್ರಕರ್ತರ ಗುಂಪಿನಿಂದ ನಡೆಸಲ್ಪಡುವ ಎಕ್ಸ್ ಹ್ಯಾಂಡಲ್‌ನಿಂದ ಈ ವಿಡಿಯೋವನ್ನು ಮೊದಲು ಪೋಸ್ಟ್ ಮಾಡಲಾಗಿತ್ತು. ಇದೀಗ ನೇಹಾ ಅದನ್ನು ಮರುಪೋಸ್ಟ್ ಮಾಡಿದ್ದರು. ದೇಶದ್ರೋಹದ ಆರೋಪದ ಮೇಲೆ ಲಕ್ನೋದ ಹಜರತ್‌ಗಂಜ್‌ನಲ್ಲಿ ನೇಹಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಾಯಕಿ ಈ ಹಿಂದೆ ಇದೇ ರೀತಿಯ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ವಿವಾದಗಳಿಗೆ ಸಿಲುಕಿದ್ದರು. ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡಿದ್ದ ಅಸ್ಸಾಂ ಶಾಸಕರೊಬ್ಬರನ್ನು ಬಂಧಿಸಲಾಗಿದೆ.