ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಾಂಬರ್ಸ್‌ನ ʼಬ್ರದರ್ಸ್ʼ ಅನ್ನೋ ಪಕ್ಷವನ್ನು ಭಾರತ ಸ್ವೀಕರಿಸದು: ಜೋಶಿ

Pralhad Joshi: ಭಯೋತ್ಪಾದನೆಯಲ್ಲಿ ತೊಡಗಿದವರನ್ನು ʼಬ್ರದರ್ಸ್ʼ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ನ್ಯಾಯಾಲಯದ ತೀರ್ಪಿನಿಂದ ಮುಖಭಂಗವಾಗಿದೆ. ಕಾಂಗ್ರೆಸ್ ಪಕ್ಷದ 'ಬ್ರದರ್ʼ ಒಬ್ಬ ಭಯೋತ್ಪಾದಕ' ಎಂದರೆ ಕಾಂಗ್ರೆಸ್‌ನ ಓಲೈಕೆ ರಾಜಕಾರಣ ಅದೆಷ್ಟು ಅಪಾಯಕಾರಿ ಮಾತು ಆತಂಕಕಾರಿ ಎಂಬುದು ಬಹಿರಂಗಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ)

ನವದೆಹಲಿ, ಏ.28: ಕಾಂಗ್ರೆಸ್‌ನ 'ಬ್ರದರ್ಸ್' ಕುಕ್ಕರ್ ಬಾಂಬ್ ಬ್ಲಾಸ್ಟರ್ ಎಂಬುದು ಸ್ಪಷ್ಟವಾಗಿದೆ. ಇಂಥವರನ್ನೆಲ್ಲ ಕುಟುಂಬದವರಂತೆ ಪರಿಗಣಿಸುವ ಪಕ್ಷವನ್ನು ಭಾರತ ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದ್ದಾರೆ. 'ಮಂಗಳೂರು ಕುಕ್ಕರ್ ಬ್ಲಾಸ್ಟ್' ಆರೋಪಿಗೆ ವಿಶೇಷ ನ್ಯಾಯಾಲಯ ವಿಧಿಸಿರುವ ತೀರ್ಪು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಸಚಿವರು, 'ಇಂದು ನ್ಯಾಯ ಗೆದ್ದಿದೆ ಮತ್ತು ಕಾಂಗ್ರೆಸ್ ಪಕ್ಷದ ಕೆಟ್ಟ ಮನಸ್ಥಿತಿ ಸೋತಿದೆ' ಎಂದಿದ್ದಾರೆ.

ಭಯೋತ್ಪಾದನೆಯಲ್ಲಿ ತೊಡಗಿದವರನ್ನು ʼಬ್ರದರ್ಸ್ʼ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ನ್ಯಾಯಾಲಯದ ತೀರ್ಪಿನಿಂದ ಮುಖಭಂಗವಾಗಿದೆ. ಕಾಂಗ್ರೆಸ್ ಪಕ್ಷದ 'ಬ್ರದರ್ʼ ಒಬ್ಬ ಭಯೋತ್ಪಾದಕ' ಎಂದರೆ ಕಾಂಗ್ರೆಸ್‌ನ ಓಲೈಕೆ ರಾಜಕಾರಣ ಅದೆಷ್ಟು ಅಪಾಯಕಾರಿ ಮಾತು ಆತಂಕಕಾರಿ ಎಂಬುದು ಬಹಿರಂಗಗೊಂಡಿದೆ ಎಂದು ಜೋಶಿ ಆರೋಪಿಸಿದ್ದಾರೆ.

ಬ್ರದರ್ಸ್ ಎನ್ನುವುದು ನಾಚಿಕೆಗೇಡು

ಐಸಿಸ್ ಸಂಬಂಧಿತ ಭಯೋತ್ಪಾದನೆ ಪ್ರಕರಣದಲ್ಲಿ ತೊಡಗಿದ ವ್ಯಕ್ತಿಗಳನ್ನು ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರು ʼಬ್ರದರ್ಸ್ʼ ಎನ್ನುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

ಗಲಭೆಕೋರರ ಪರ ಇದೆಯೇ ಈ ಸರ್ಕಾರ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗಲಭೆಕೋರರ ಪರ ಇದ್ದಂತಿದೆ. 2020ರ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರ ಅನುಮತಿ ನೀಡಿರುವುದು ತೀವ್ರ ಖಂಡನೀಯ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹರಿಹಾಯ್ದಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಲಘು ಹೇಳಿಕೆ; ಖರ್ಗೆ ಕ್ಷಮೆಯಾಚಿಸಲಿ ಎಂದು ಜೋಶಿ ಆಗ್ರಹ

ಭಯೋತ್ಪಾದನೆ ಹಿನ್ನೆಲೆ ಇರುವಂತಹ ವ್ಯಕ್ತಿಗಳಿಗೆ ವೇದಿಕೆ ಕಲ್ಪಿಸುವುದು ಸೂಕ್ತವಲ್ಲ. ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ರಾಜ್ಯ ಸರ್ಕಾರ ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನುಗಳ ನಿಯಮಕ್ಕೆ ಆದ್ಯತೆ ನೀಡಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.