Jana Jagruthi Vedike: ವ್ಯಸನಮುಕ್ತ ಸಮಾಜ ರೂಪಿಸುವುದು ಶ್ರೇಷ್ಠ ಹಾಗೂ ಪವಿತ್ರ ಸೇವಾಕಾರ್ಯವಾಗಿದೆ: ಡಿ. ವೀರೇಂದ್ರ ಹೆಗ್ಗಡೆ

Jana Jagruthi Vedike: ವ್ಯಸನಮುಕ್ತ ಸಮಾಜ ರೂಪಿಸುವುದು ಶ್ರೇಷ್ಠ ಹಾಗೂ ಪವಿತ್ರ ಸೇವಾಕಾರ್ಯವಾಗಿದೆ: ಡಿ. ವೀರೇಂದ್ರ ಹೆಗ್ಗಡೆ

image-2b2e5207-658f-4bbd-ab14-e2e2aeedcf0e.jpg
Profile Sushmitha Jain January 10, 2025
ಉಜಿರೆ: ಧರ್ಮಸ್ಥಳದ (Dharmasthala) ಆಶ್ರಯದಲ್ಲಿ ನಡೆಯುತ್ತಿರುವ ಅನೇಕ ಪವಿತ್ರ ಸೇವಾಕಾರ್ಯಗಳಲ್ಲಿ  ಮದ್ಯವ್ಯಸನಿಗಳನ್ನು  ಮನಪರಿವರ್ತನೆ  ಮೂಲಕ ವ್ಯಸನಮುಕ್ತರನ್ನಾಗಿ ಮಾಡಿ ಆರೋಗ್ಯಪೂರ್ಣ ಸಮಾಜ ರೂಪಿಸುವ ಕಾಯಕ ಅತ್ಯಂತ ಶ್ರೇಷ್ಠ, ಪವಿತ್ರ ಹಾಗೂ ಉತ್ತಮ ಸೇವೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ (D Veerendra Heggade) ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ (Amruthavarshini Sabhabhavana) ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (Akhila Karnataka Jana Jagruthi Vedike Trust) ಆಶ್ರಯದಲ್ಲಿ ಆಯೋಜಿಸಿದ ಜನಜಾಗೃತಿ ವೇದಿಕೆಯ (Jana Jagruthi Vedike) ಸರ್ವಸದಸ್ಯರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಧರ್ಮಸ್ಥಳದ ಮೇಲಿನ ಭಕ್ತಿ, ಪ್ರೀತಿ, ವಿಶ್ವಾಸ ಮತ್ತು ಗೌರವದಿಂದ ಜನಜಾಗೃತಿವೇದಿಕೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತನು, ಮನ, ಧನದ ಮೂಲದ ತ್ರಿಕರಣಪೂರ್ವಕವಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದರಿಂದ ಎಲ್ಲರಿಗೂ ಸಮಾಜದಲ್ಲಿ ವಿಶೇಷ ಗೌರವ, ಮಾನ್ಯತೆ ದೊರಕುತ್ತಿದೆ. ವೇದಿಕೆಯ ಕೀರ್ತಿಯೂ ಹೆಚ್ಚಾಗಿದೆ. ವ್ಯಸನಮುಕ್ತರು ಪವಿತ್ರಾತ್ಮರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿದಾಗ ಅವರಿಗೆ ವಿಶೇಷ ಅನುಗ್ರಹವಾಗುತ್ತದೆ.  ಮುಂದೆ ಅವರು ನವಜೀವನ ಸಮಿತಿ ಸದಸ್ಯರಾಗಿ ದೃಢಸಂಕಲ್ಪದಿಂದ ಸುಖ- ಶಾಂತಿ ನೆಮ್ಮದಿಯ ಕೌಟುಂಬಿಕ ಜೀವನ ನಡೆಸುವುದು ತಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿ ನೀಡುತ್ತದೆ ಎಂದು  ಹೆಗ್ಗಡೆಯವರು ಹೇಳಿದರು. ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶವನ್ನು ಉದ್ಘಾಟಿಸಿದ ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ದೇಶದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು, ಯುವಜನತೆ ತಮ್ಮ ಬುದ್ಧಿ ಮತ್ತು ವಿವೇಕವನ್ನು ಕಳೆದುಕೊಂಡು  ಮದ್ಯ ವ್ಯಸನಕ್ಕೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು. image-720fabd5-6cee-404d-91ca-db9f082bd6e3.jpg ಇಡೀ ರಾಜ್ಯದಲ್ಲಿ ವಟವೃಕ್ಷದಂತೆ  ಹಲವು ಶಾಖೆಗಳೊಂದಿಗೆ ಬೆಳೆದಿರುವ ಜನಜಾಗೃತಿ ವೇದಿಕೆಯ ನೇತೃತ್ವದಲ್ಲಿ ಕಾರ್ಯಕರ್ತರ ಜನಹಿತ ಹಾಗೂ ಜನಪರ  ಸೇವೆಯಿಂದಾಗಿ ಅನೇಕ ಮಂದಿ ಇಂದು ವ್ಯಸನಮುಕ್ತರಾಗಿ ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.  ಎಲ್ಲರ ಮನೆಗಳಲ್ಲಿ ಹಾಗೂ ಮನಗಳಲ್ಲಿ  ಶಾಂತಿ, ನೆಮ್ಮದಿ ನೆಲೆಸಿದೆ ಎಂದು ಅವರು ಮೆಚ್ಚುಗೆ  ವ್ಯಕ್ತಪಡಿಸಿದರು.  ಮದಿರೆಯ ಕಬಂಧಬಾಹುಗಳಲ್ಲಿ  ಬಂಧಿತರಾದವರು ಯಾವುದೇ ಸಂಶಯ, ಸಮಸ್ಯೆಗಳಿದ್ದರೂ ಜನಜಾಗೃತಿ ವೇದಿಕೆಯ ಕಾರ್ಯಕರ್ತರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ವಿಶೇಷ ಸೇವೆ, ಸಾಧನೆ ಮಾಡಿ ಪ್ರಶಸ್ತಿ, ಪುರಸ್ಕಾರ ಪಡೆದ ಕಾರ್ಯಕರ್ತರನ್ನು ಅಭಿನಂದಿಸಲಾಯಿತು. ಸತೀಶ್ ಬಳೆಗಾರ  ಬರೆದ ‘ಕತ್ತಲ ಕುಡುಕರ  ಬೆಳಕಿನ ಮಕ್ಕಳು’ ಎಂಬ ಕೃತಿಯನ್ನು  ಶ್ರದ್ಧಾ ಅಮಿತ್  ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸುದ್ದಿಯನ್ನೂ ಓದಿ: PM Narendra Modi: ಚಂದ್ರಯಾನ-2 ಸೋಲಿನಿಂದ ಹೊರ ಬಂದಿದ್ದು ಹೇಗೆ? ಪ್ರಧಾನಿ ಮೋದಿ ವಿವರಿಸಿದ್ದು ಹೀಗೆ ಮಧ್ಯಪಾನ ಆಧುನಿಕ ಜೀವನಶೈಲಿಯಾಗಿದೆ ಎಂಬ ಭ್ರಮೆಯ ಆತಂಕವಿದೆ.  ಮದ್ಯವ್ಯಸನಿಗಳ ಮಕ್ಕಳ ಬಾಳಿನ ಗೋಳು ವರ್ಣಿಸಲಸದಳವಾಗಿದ್ದು,  ಮಕ್ಕಳು ಪೋಷಕರ ಪ್ರೀತಿ, ಭದ್ರತೆ,  ರಕ್ಷಣೆಯಿಂದ, ವಂಚಿತರಾಗುತ್ತಾರೆ. ಹಾಗಾಗಿ ಶಾಲಾ-ಕಾಲೇಜುಗಳಲ್ಲಿ “ಸ್ವಾಸ್ಥಸಂಕಲ್ಪ”ಕಾರ್ಯಕ್ರಮದ ಮೂಲಕ ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ  ವಿದ್ಯಾರ್ಥಿಗಳಿಗೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ  ಎಂದರು. ಕೊಪ್ಪಳ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ನಟರಾಜ ಬಾದಾಮಿ ಅವರನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ  ಟ್ರಸ್ಟ್‌ನ ನೂತನ ರಾಜ್ಯ ಸಂಘಟನೆಯ  ನೂತನ ರಾಜ್ಯ ಸಂಘಟನಾ  ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ರಾಜ್ಯ ಸಂಘಟನಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರಾಜಣ್ಣ ಕೊರವಿ ಅವರನ್ನು ಗೌರವಿಸಲಾಯಿತು. ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್‌ಕುಮಾರ್ ಆಶಯ  ನುಡಿಗಳೊಂದಿಗೆ ಯೋಜನೆಯ ಸೇವೆ, ಸಾಧನೆಯ ಪಕ್ಷಿನೋಟ ವಿವರಿಸಿದರು. ಜನಜಾಗೃತಿ ವೇದಿಕೆ  ಟ್ರಸ್ಟ್‌ನನ್ನು ಕಾರ್ಯದರ್ಶಿ ವಿವೇಕ್ ವಿ. ಪಾಯ್ಸ್   ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.  ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ರಾಮಸ್ವಾಮಿ ಧನ್ಯವಾದವಿತ್ತರು. ಜನಜಾಗೃತಿ  ವೇದಿಕೆಯ ಯೋಜನಾಧಿಕಾರಿಗಳಾದ ಗಣೇಶ ಆಚಾರ್ಯ ಮತ್ತು ನಾಗರಾಜ ಕಾರ್ಯಕ್ರಮ ನಿರ್ವಹಿಸಿದರು.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ