ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mahesh Shetty Timarodi: ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ

Mahesh Shetty Timarodi: ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಿಂದ ಮಹೇಶ್‌ ಶೆಟ್ಟಿ ಅವರನ್ನು ಬಂಧಿಸಲಾಗಿತ್ತು. ಇವರ ಜಾಮೀನು ಅರ್ಜಿ ವಿಚಾರಣೆ ನಾಳೆ (ಆ.23) ಬ್ರಹ್ಮಾವರ ಕೋರ್ಟ್‌ನಲ್ಲಿ ನಡೆಯಲಿದೆ.

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ

Prabhakara R Prabhakara R Aug 22, 2025 10:23 AM

ಉಡುಪಿ: ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಂಧನವಾಗಿರುವ ಸಾಮಾಜಿಕ ಕಾರ್ಯಕರ್ತ ಮಹೇಶ್‌ ಶೆಟ್ಟಿ ತಿಮರೋಡಿಗೆ (Mahesh Shetty Timarodi) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಿಂದ ಅವರನ್ನು ಬಂಧಿಸಲಾಗಿತ್ತು. ಇವರ ಜಾಮೀನು ಅರ್ಜಿ ವಿಚಾರಣೆ ನಾಳೆ(ಆ.23) ಕೋರ್ಟ್‌ನಲ್ಲಿ ನಡೆಯಲಿದೆ.

ಬ್ರಹ್ಮಾವರದಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ನ್ಯಾಯಾಧೀಶ ನಾಗೇಶ್ ಎನ್.ಎ. ಅವರು ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದರು. ತಿಮರೋಡಿಯನ್ನು ಬಂಧಿಸಿದ ತಕ್ಷಣವೇ ಅವರ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಪ್ರಸ್ತುತ ಆರೋಪಗಳು ನಾನ್-ಬೇಲೇಬಲ್ ಸೆಕ್ಷನ್ ಒಳಗೊಂಡಿರುವುದರಿಂದ, ಕೋರ್ಟ್ ಜಾಮೀನನ್ನು ನೀಡಲು ನಿರಾಕರಿಸಿತ್ತು. ಹೀಗಾಗಿ ಆಗಸ್ಟ್ 23ರಂದು ಮತ್ತೆ ವಿಚಾರಣೆ ನಡೆಯಲಿದ್ದು, ಅಂದು ವಾದ ಪ್ರತಿವಾದಗಳ ಆಧಾರದ ಮೇಲೆ ಜಾಮೀನು ಭವಿಷ್ಯ ನಿರ್ಣಯವಾಗಲಿದೆ.

ಈ ಸುದ್ದಿಯನ್ನೂ ಓದಿ | Mahesh Shetty Thimarodi: ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌; ವಶಕ್ಕೆ ಪಡೆಯುವಾಗ ಬೆಂಬಲಿಗರಿಂದ ಭಾರೀ ಹೈಡ್ರಾಮಾ

ಏನಿದು ಪ್ರಕರಣ?

ಆಗಸ್ಟ್‌ 16ರಂದು ಫೇಸ್‌ಬುಕ್‌ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.