ಉಜಿರೆ: ಧರ್ಮಸ್ಥಳದ (Dharmasthala) ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ(Mahesh Shetty Thimarodi) ಎಂಬಾತನ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಅವರ ನಿವಾಸಕ್ಕೆ ತಲುಪಿರುವ ಪೊಲೀಸರು ಕೆಲವ ಕ್ಷಣದಲ್ಲಿ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆಯಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL santosh) ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿರುವ ಕುರಿತು ದೂರು ಸಲ್ಲಿಸಲಾಗಿದೆ. ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಆತನನ್ನು ವಶಕ್ಕೆ ಪಡೆಯಲು ಪೊಲೀಸರು ಉಜಿರೆಯ ನಿವಾಸಕ್ಕೆ ಆಗಮಿಸಿದ್ದು, ಮನೆಯಿಂದ ಹೊರಗೆ ಬರಲು ಕಾಯುತ್ತಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಆಗಸ್ಟ್ 16ರಂದು ಫೇಸ್‌ಬುಕ್ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ: Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧವೇ ಶವ ಹೂತ ಆರೋಪ, ಎಸ್‌ಐಟಿಗೆ ದೂರು!