ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್‌

Shivam Associates Scam: ಶಿವಂ ಅಸೋಸಿಯೇಟ್ಸ್ ಸಂಸ್ಥೆಯು ಕರ್ನಾಟಕ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ, ಗೋವಾ ಹಾಗೂ ಛತ್ತೀಸ್‌ಗಢ ರಾಜ್ಯಗಳಾದ್ಯಂತ ಪೋಂಜಿ ಶೈಲಿಯ ಸ್ಕೀಮ್‌ಗಳ ಮೂಲಕ ಸಾರ್ವಜನಿಕರಿಂದ ಅಕ್ರಮವಾಗಿ ಹೂಡಿಕೆ ಸಂಗ್ರಹಿಸಿರುವುದು ಪತ್ತೆಯಾಗಿದೆ. ಹೀಗಾಗಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಮಂಗಳೂರು: ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಹಗರಣಕ್ಕೆ ಸಂಬಂಧಿಸಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ನನ್ನು ಮಂಗಳೂರು ವಲಯ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸಂಸ್ಥೆಯು ಒಟ್ಟು 2,110.97 ಕೋಟಿ ರೂ. ಅಕ್ರಮವಾಗಿ ಸಂಗ್ರಹಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಸದ್ಯ ಮಂಗಳೂರಿನ ವಿಶೇಷ ಇಡಿ ನ್ಯಾಯಾಲಯವು ಆರೋಪಿಯನ್ನು 12 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಇತ್ತೀಚೆಗೆ ಮಂಗಳೂರು ವಲಯ ಇಡಿ ಅಧಿಕಾರಿಗಳು ಶಿವಾನಂದಗೆ ಸೇರಿದ ವಿವಿಧ ಸ್ಥಳಗಳ ಮೇಳೆ ದಾಳಿ ಮಾಡಿದ್ದರು. ಇಡಿ ನಡೆಸಿದ ತನಿಖೆಯಲ್ಲಿ ಶಿವಾನಂದ ಕಂಪನಿಯ ಹಣಕಾಸು ವ್ಯವಹಾರಗಳ ಪ್ರಮುಖ ವ್ಯಕ್ತಿಯಾಗಿದ್ದು, ಕರ್ನಾಟಕ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ, ಗೋವಾ ಹಾಗೂ ಛತ್ತೀಸ್‌ಗಢ ರಾಜ್ಯಗಳಾದ್ಯಂತ ಪೋಂಜಿ ಶೈಲಿಯ ಸ್ಕೀಮ್‌ಗಳ ಮೂಲಕ ಸಾರ್ವಜನಿಕರಿಂದ ಅಕ್ರಮವಾಗಿ ಹೂಡಿಕೆ ಸಂಗ್ರಹಿಸಿರುವುದು ಪತ್ತೆಯಾಗಿದೆ.

2019ರಿಂದಲೇ ಷೇರು ಮಾರುಕಟ್ಟೆಯಲ್ಲಿ ಸಂಸ್ಥೆಯು ತೀವ್ರ ನಷ್ಟ ಅನುಭವಿಸುತ್ತಿದ್ದರೂ, ಆ ನ್ಯೂನತೆಯನ್ನು ಮರೆಮಾಚಿ ಮಾರುಕಟ್ಟೆಯಲ್ಲಿ ತನ್ನ ಆಕರ್ಷಣೆಯನ್ನು ಉಳಿಸಿಕೊಳ್ಳಲು ಹೊಸ ಹೂಡಿಕೆದಾರರಿಂದ ಸಂಗ್ರಹಿಸಿದ ಠೇವಣಿ ಹಣವನ್ನು ಹಳೆಯ ಹೂಡಿಕೆದಾರರಿಗೆ ಬಡ್ಡಿ ನೀಡಲು ಬಳಸಿಕೊಂಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಸ್ಯಾಂಡಲ್‌ವುಡ್‌ ನಟಿಯ ಸಹೋದರಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಹೂಡಿಕೆದಾರರ ಹಣದಿಂದ ಆರೋಪಿ ಐಷಾರಾಮಿ ವಾಹನಗಳ ಖರೀದಿ, ಭವ್ಯ ಬಂಗಲೆಗಳ ನಿರ್ಮಾಣ, ಪಾಲುದಾರರ ಹೆಸರಿನಲ್ಲಿ ಸ್ಥಿರಾಸ್ತಿ ಖರೀದಿ ಹಾಗೂ ಚಲನಚಿತ್ರ ನಿರ್ಮಾಣಗಳಿಗೆ ಅಕ್ರಮವಾಗಿ ವರ್ಗಾಯಿಸಿ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಎಲ್ಲಾ ದುರುಪಯೋಗದ ಹಣವನ್ನು ಅಪರಾಧದ ಆದಾಯ ಎಂದು ಪರಿಗಣಿಸಿರುವ ಇಡಿ, ಪ್ರಕರಣದ ಕುರಿತು ತೀವ್ರ ತನಿಖೆ ಮುಂದುವರಿಸಿದೆ.