ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಸರಾ ಹಬ್ಬಕ್ಕೆ ರಜೆ ನೀಡದೆ ಪರೀಕ್ಷೆ ನಿಗದಿ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜ್‌ ಮುಂಭಾಗ ಎಬಿವಿಪಿ ಪ್ರತಿಭಟನೆ

ABVP Protest: ದಸರಾ ಹಬ್ಬದ ರಜೆ ನೀಡದೆ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಮಂಗಳೂರಿನ ಪ್ರತಿಷ್ಠಿತ ಸೈಂಟ್ ಆಗ್ನೆಸ್ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದಸರಾ ಸಮಯದಲ್ಲೇ ಪರೀಕ್ಷಾ ನಿಗದಿಪಡಿಸಿರುವ ಆಡಳಿತ ಮಂಡಳಿ ಕ್ರಮ ಸರಿಯಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

ಮಂಗಳೂರು, ಅ. 12: ದಸರಾ ಹಬ್ಬದ ರಜೆ ನೀಡದೆ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಮಂಗಳೂರಿನ ಪ್ರತಿಷ್ಠಿತ ಸೈಂಟ್ ಆಗ್ನೆಸ್ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳು ಹಾಗೂ ಎಬಿವಿಪಿ (ABVP) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರಿನ ಬೆಂದೂರ್‌ವೆಲ್ ಬಳಿ ಇರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಮಂಗಳವಾರದಿಂದ (ಅಕ್ಟೋಬರ್‌ 12) ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಿಗದಿಪಡಿಸಲಾಗಿದೆ. ದಸರಾ ಸಮಯದಲ್ಲೇ ಪರೀಕ್ಷಾ ನಿಗದಿಪಡಿಸಿರುವ ಆಡಳಿತ ಮಂಡಳಿ ಕ್ರಮ ಸರಿಯಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಈ ಹಿಂದೆಯೇ ಆಕ್ಷೇಪ ವ್ಯಕ್ತಪಡಿಸಿದ್ದರೂ ಆಡಳಿತ ಮಂಡಳಿ ಸ್ಪಂದಿಸಿಲ್ಲ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿದರ. ಈ ವೇಳೆ ಕಾಲೇಜಿನ ಪ್ರಾಂಶುಪಾಲರು ಸ್ಥಳಕ್ಕೆ ಬಂದು ಸ್ಪಷ್ಟನೆ ನೀಡಬೇಕು ಎಂದೂ ಆಗ್ರಹಿಸಿದರು.

ಮಂಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ:



ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ಅಲ್ಲಿಂದ ಕರೆದೊಯ್ಯಲು ಮುಂದಾದರು. ಈ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿನಿಯರನ್ನು ಪೊಲೀಸರು ಎಳೆದಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇನ್ನು ಕೆಲ ವಿದ್ಯಾರ್ಥಿನಿಯರು ಪೊಲೀಸ್ ವಾಹನವನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪುರುಷ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿನಿಯರನ್ನು ಎಳೆದಾಡಿದ್ದಾರೆ ಎನ್ನಲಾಗಿದೆ. ಕೊನೆಗೆ ಮಹಿಳಾ ಪೊಲೀಸ್‌ ಸಿಬ್ಬಂದಿ ಆಗಮಿಸಿ ವಿದ್ಯಾರ್ಥಿನಿಯರ ಜತೆ ಮಾತುಕತೆ ನಡೆಸಿದರು.

ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್‌ ಪ್ರಾಯೋಗಿಕ ಸಂಚಾರ

ಈ ವೇಳೆ ಕಾಲೇಜಿನ ಮುಂಭಾಗ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ದಸರಾ ಆಚರಣೆ ಹಾಗೂ ಸಂಭ್ರಮದಲ್ಲಿ ಭಾಗವಹಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೂ ದೂರು ನೀಡಿವೆ. ದಸರಾ ರಜೆ ವೇಳೆ ಪರೀಕ್ಷೆ ನಿಗದಿಪಡಿಸಿದ ಕಾಲೇಜಿನ ಕ್ರಮ ಮತ್ತು ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ವರ್ತನೆ ಚರ್ಚೆಗೆ ಕಾರಣವಾಗಿದೆ.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author