Massage Parlor Attack: ಮಂಗಳೂರಿನಲ್ಲಿ ಮಸಾಜ್ ಪಾರ್ಲರ್ ಮೇಲೆ ರಾಮಸೇನೆ ದಾಳಿ, 9 ಮಂದಿ ಕಾರ್ಯಕರ್ತರ ಬಂಧನ
ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮ ಸೇನೆಯ 9ಕ್ಕೂ ಹೆಚ್ಚು ಕಾರ್ಯಕರ್ತರು ಅರೆಸ್ಟ್ ಆಗಿದ್ದಾರೆ. ಪ್ರಸಾದ್ ಅತ್ತಾವರ್ ಸೇರಿದಂತೆ ರಾಮ ಸೇನೆ ಸಂಘಟನೆಯ 9 ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.
ಮಂಗಳೂರು: ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರು (Mangaluru news) ನಗರದಲ್ಲಿರುವ ಮಸಾಜ್ ಪಾರ್ಲರ್ (Massage Parlor) ಮೇಲೆ ರಾಮಸೇನೆ (Rama Sene) ಸಂಘಟನೆ ದಾಳಿ ನಡೆಸಿದೆ. ಬಿಜೈ ಕೆಎಸ್ಆರ್‌ಟಿಸಿ ನಿಲ್ದಾಣದ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್‌ಗೆ ದಾಳಿ ನಡೆದಿದ್ದು, ಇದಕ್ಕೆ ಸಂಬಂಧಿಸಿ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಮಸೇನೆಯ ಪ್ರಸಾದ್ ಅತ್ತಾವರ ಎಂಬಾತನ ನೇತೃತ್ವದಲ್ಲಿ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಲಾಗಿದೆ. ಮಸಾಜ್ ಸೆಂಟರ್ನ ಗಾಜುಗಳನ್ನು ಪುಡಿಗೈಯಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮ ಸೇನೆಯ 9ಕ್ಕೂ ಹೆಚ್ಚು ಕಾರ್ಯಕರ್ತರು ಅರೆಸ್ಟ್ ಆಗಿದ್ದಾರೆ. ಪ್ರಸಾದ್ ಅತ್ತಾವರ್ ಸೇರಿದಂತೆ ರಾಮ ಸೇನೆ ಸಂಘಟನೆಯ 9 ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.
‘ಮಸಾಜ್ ಸೆಂಟರ್ನಲ್ಲಿ ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. 16, 17 ವರ್ಷದ ಹೆಣ್ಣುಮಕ್ಕಳನ್ನು ಬಳಸಿಕೊಳ್ಳುತ್ತಿದ್ದರು ಎಂದು ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ದೂರಿದ್ದರು. ವಿಷಯ ತಿಳಿದು ನಮ್ಮ ರಾಮಸೇನೆ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ಸಂಬಂಧಿ ಯುವತಿ ಇದರಲ್ಲಿ ಸಿಲುಕಿದ್ದಾಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದೇವೆ ಎಂದಿದ್ದರು.
ಮಸಾಜ್ ಸೆಂಟರ್ ಮಾಲೀಕ ಸುಧೀರ್ ಪ್ರತಿಕ್ರಿಯೆ ನೀಡಿದ್ದು, ದಾಳಿ ಮಾಡಿದವರೇ ಕೆಲವು ವಸ್ತುಗಳನ್ನು ತಂದು ಬಿಸಾಡಿದ್ದಾರೆ. ವಾರಕ್ಕೊಮ್ಮೆ ಅಧಿಕಾರಿಗಳು ಮಸಾಜ್ ಸೆಂಟರ್ ಪರಿಶೀಲಿಸುತ್ತಿದ್ದಾರೆ. ಕಾನೂನು ಪ್ರಕಾರ ಅನುಮತಿ ಪಡೆದು ಕಳೆದ 2 ವರ್ಷದಿಂದ ನಾವು ಮಸಾಜ್ ಸೆಂಟರ್ ನಡೆಸುತ್ತಿದ್ದೇವೆ. ಸುಮಾರು 12 ಜನರ ತಂಡ ಏಕಾಏಕಿ ದಾಳಿ ನಡೆಸಿ ಎಲ್ಲಾ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: Physical Abuse: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪಾತಕಿಗಳ ಬಂಧನ