ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Mangaluru News: ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಕೆಳಗೆ ಜಿಗಿದು ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಿದ್ದಾಳೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಪಾರ್ಟ್‌ಮೆಂಟ್‌ನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

-

Prabhakara R
Prabhakara R Jul 14, 2026 11:21 PM

ಮಂಗಳೂರು: ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಸುರತ್ಕಲ್‌ನ ಮುಕ್ಕದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು.

ಮಹಾಲಕ್ಷ್ಮೀ ಮುಕ್ಕದ ಖಾಸಗಿ ಅಪಾರ್ಟ್‌ಮೆಂಟ್ ಒಂದರಲ್ಲಿ ತನ್ನ ಸ್ನೇಹಿತೆಯ ಜೊತೆ ವಾಸವಾಗಿದ್ದಳು. ಇಂದು ಮುಂಜಾನೆ ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಕೆಳಗೆ ಜಿಗಿದು ಆಕೆ ಪ್ರಾಣ ಕಳೆದುಕೊಂಡಿದ್ದಾಳೆ. ಮಹಡಿಯಿಂದ ಹಾರಿದ ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ವಿದ್ಯಾರ್ಥಿನಿ ಮಹಾಲಕ್ಷ್ಮೀ ಕಳೆದ ಕೆಲವು ದಿನಗಳಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಡಿವೈಡರ್‌ಗೆ ಖಾಸಗಿ ಬಸ್ ಡಿಕ್ಕಿ; ಚಾಲಕ, ಓರ್ವ ಪ್ರಯಾಣಿಕ ಸಾವು

ಚಿತ್ರದುರ್ಗ: ಡಿವೈಡರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಖಾಸಗಿ ಬಸ್ ಚಾಲಕ ಮಹ್ಮದ್ ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.