ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Puttur News: ಪುತ್ತೂರಿನಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ನೂಕುನುಗ್ಗುಲು; 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

CM Siddaramaiah: ದೀಪಾವಳಿ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರಿನಲ್ಲಿ ಅಶೋಕ ಜನಮನ 2025-ವಸ್ತ್ರವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ, 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.

ಪುತ್ತೂರು: ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ನೂಕುನುಗ್ಗುಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur News) ನಡೆದಿದೆ. ಶಾಸಕ ಅಶೋಕ್‌ ರೈ ಅವರ ಟ್ರಸ್ಟ್‌ನಿಂದ ಆಯೋಜಿಸಿದ್ದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ನೂಕು ನುಗ್ಗುಲು ಉಂಟಾಗಿ, ಮಹಿಳೆಯರು, ಮಕ್ಕಳು ಸೇರಿ 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.

ಯೋಗಿತ (20), ಸಭಾ ಮಾಡಾವು (20), ಆಮೀನಾ ಪಾಟ್ರಕೋಡಿ (56), ನೇತ್ರಾವತಿ ಇರ್ದೆ (37), ಲೀಲಾವತಿ ಕಡಬ (50), ವಸಂತಿ ಬಲ್ನಾಡ್ (53), ಕುಸುಮ (62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಹಾಗೂ ಜಸೀಲಾ(30) ಅಸ್ವಸ್ಥರಾದವರು.

ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನೂಕು ನುಗ್ಗಲು ಉಂಟಾಗಿದ್ದರಿಂದ ಅಸ್ವಸ್ಥರಾದವರು ಕುಡಿಯಲು ನೀರು ಸಿಗದೆ ಪರದಾಡಿದ್ದಾರೆ. ಪುತ್ತೂರು ತಾಲೂಕು ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನೂ ಓದಿ | CM Siddaramaiah: ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ