ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Body Found: ಮನೆಯಲ್ಲಿ ಮಲಗಿದ್ದ ತಾಯಿ- ಮಗು ಕೆರೆಯಲ್ಲಿ ಶವವಾಗಿ ಪತ್ತೆ

ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ, ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ವೇಳೆ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಮನೆ ಸಮೀಪದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ

ಮೃತ ಮಧುಶ್ರೀ

ಮಂಗಳೂರು, ಜ.05: ತಾಯಿ (Mother) ಮತ್ತು ಮೂರು ವರ್ಷದ ಮಗುವಿನ (Child) ಮೃತದೇಹ ಮನೆ ಸಮೀಪದ ಕೆರೆಯಲ್ಲಿ (Bodies found) ಪತ್ತೆಯಾಗಿರುವುದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ (Sullia) ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನ್ವಿ (3) ಮೃತರು ಎಂದು ಗುರುತಿಸಲಾಗಿದೆ.

ಹರೀಶ್ ಅವರು ತನ್ನ ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದರು. ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ, ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ವೇಳೆ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಮನೆ ಸಮೀಪದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ.

ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದವರಾದ ಮಧುಶ್ರೀ ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಧುಶ್ರೀ ಅವರು ಕೆರೆಗೆ ಹಾರುವ ಮೊದಲು ಮಗುವಿನೊಂದಿಗೆ ಸಾಯಲು ನಿರ್ಧರಿಸಿ ತನ್ನ ಸೊಂಟಕ್ಕೆ ಮಗುವನ್ನು ಬಟ್ಟೆಯಿಂದ ಕಟ್ಟಿಕೊಂಡು ಕೆರೆಗೆ ಹಾರಿದ್ದಾರೆ. ಕೆರೆಯಲ್ಲಿ ಮೃತದೇಹ ಪತ್ತೆಯಾದಾಗ ಮಗು ತಾಯಿಯನ್ನು ಅಪ್ಪಿಕೊಂಡ ರೀತಿಯಲ್ಲೇ ಪತ್ತೆಯಾಗಿದೆ. ಮಗಳ ಸಾವಿನಲ್ಲಿ ಅನುಮಾನ ಇದೆ ಎಂದು ಮಧುಶ್ರೀ ತಾಯಿ ರತ್ನಾವತಿ ದೂರು ನೀಡಿದ್ದಾರೆ. ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಆತ್ಮಹತ್ಯೆ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹರೀಶ್‌ ಕೇರ

View all posts by this author