ಮಂಗಳೂರು, ಡಿ. 3: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (KC Venugopal) ಅವರೊಂದಿಗೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಮಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ ಎಂದರು. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದು ತಿಳಿಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಗುಪ್ತಚರ ಇಲಾಖೆ ಹೈಅಲರ್ಟ್
ರಾಜಕೀಯ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ; ಹೆಚ್ಚಿನ ವಿಶ್ಲೇಷಣೆ ಅನಗತ್ಯ ಎಂದ ಡಿ.ಕೆ. ಸುರೇಶ್
ರಾಜಕೀಯ ಯಾರಿಗೂ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ ವಿಚಾರದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಮುಖ್ಯಮಂತ್ರಿ ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಕೆ.ಸಿ. ವೇಣುಗೋಪಾಲ್ ಆಗಮಿಸಿರುವ ಬಗ್ಗೆ ಕೇಳಿದಾಗ, ಮಂಗಳೂರಿನಲ್ಲಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಅವರು ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಕಾರಣ ಅಲ್ಲಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ಮೊಬೈಲ್‌ನಲ್ಲಿ ಸುರಕ್ಷತಾ ಎಚ್ಚರಿಕೆ ವ್ಯವಸ್ಥೆ; ರಿಲಯನ್ಸ್ ಜಿಯೋ ಜತೆ ಎನ್ಎಚ್ಎಐ ಒಪ್ಪಂದ
ಮಂಗಳೂರಿನಲ್ಲಿ ವೇಣುಗೋಪಾಲ್ ಅವರಿಗೆ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಡಿ.ಕೆ., ಡಿ.ಕೆ. ಎಂದು ಕೂಗಿರುವ ಬಗ್ಗೆ ಕೇಳಿದಾಗ, ಅಭಿಮಾನದಿಂದ ಕೆಲವರು ಕೂಗಿರುತ್ತಾರೆ. ಆದರೆ ಅವರು ಯಾರಿಗೂ ಮುತ್ತಿಗೆ ಹಾಕಿಲ್ಲ ಎಂದು ಡಿ.ಕೆ. ಸುರೇಶ್ ಹೇಳಿದರು.