ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನ. 28-29: ಮಂಗಳೂರಿನ ಮಂಗಳಜ್ಯೋತಿ ರಜತ ಮಹೋತ್ಸವ

ಪ್ರಸ್ತುತ ಶ್ರವಣದೋಷ, ದೈಹಿಕ ನ್ಯೂನತೆ, ಪಾರ್ಶ್ವ ದೃಷ್ಟಿ ದೋಷ, ಸಾಧಾರಣ ಬುದ್ಧಿ ಮಾಂದ್ಯತೆ, ಕಲಿಕಾ ನ್ಯೂನತೆ ಹಾಗೂ ಆಟಿಸಂನಿಂದ ಬಳಲುತ್ತಿರುವ ಭಿನ್ನ ಸಾಮರ್ಥ್ಯದ ಮಕ್ಕಳನ್ನು ಸಾಮಾನ್ಯ ವಿದ್ಯಾರ್ಥಿಗಳೊಂದಿಗೆ ಸಮನ್ವಯಗೊಳಿಸಿ, ರಾಜ್ಯ ಪಠ್ಯಕ್ರಮ ದೊಂದಿಗೆ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದೆ.

ನ. 28-29: ಮಂಗಳೂರಿನ ಮಂಗಳಜ್ಯೋತಿ ರಜತ ಮಹೋತ್ಸವ

-

Ashok Nayak
Ashok Nayak Nov 26, 2025 5:07 PM

ಮಂಗಳೂರು: ಎಸ್.ಡಿ.ಎಮ್ ಮಂಗಳಜ್ಯೋತಿ ಸಮಗ್ರ ಶಾಲೆಯು ವಿಶೇಷ ಸಾಮರ್ಥ್ಯದ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಸದುದ್ದೇಶದಿಂದ ಸಮನ್ವಯ ಶಿಕ್ಷಣದ ಮೂಲ ಕಲ್ಪನೆಯೊಂದಿಗೆ ಏಷ್ಯಾ ಖಂಡದಲ್ಲೇ ಮೊದಲ ಶಾಲೆಯಾಗಿದೆ.

ಈ ಶಾಲೆಯನ್ನು ೧೯೮೧ರಲ್ಲಿ ಮಂಗಳೂರಿನ ವಾಮಂಜೂರಿನಲ್ಲಿ ಸ್ಥಾಪನೆ ಮಾಡಲಾ ಯಿತು. ಈ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಮಹಾದಾಸೆಯಿಂದ, ಸಾಮಾನ್ಯ ಮಕ್ಕಳಂತೆ ಉತ್ತಮ ಜೀವನ ನಡೆಸಬೇಕೆಂಬ ಪರಿಕಲ್ಪನೆಯಿಂದ, ಪ್ರಾರಂಭ ವಾದ ಈ ಸಂಸ್ಥೆಯು ಪರಿಣಾಮಕಾರಿ ಸಾಧನೆಯನ್ನು ಮಾಡುತ್ತಾ ಬಂದಿದೆ.

ಪ್ರಸ್ತುತ ಶ್ರವಣದೋಷ, ದೈಹಿಕ ನ್ಯೂನತೆ, ಪಾರ್ಶ್ವ ದೃಷ್ಟಿ ದೋಷ, ಸಾಧಾರಣ ಬುದ್ಧಿ ಮಾಂದ್ಯತೆ, ಕಲಿಕಾ ನ್ಯೂನತೆ ಹಾಗೂ ಆಟಿಸಂನಿಂದ ಬಳಲುತ್ತಿರುವ ಭಿನ್ನ ಸಾಮರ್ಥ್ಯದ ಮಕ್ಕಳನ್ನು ಸಾಮಾನ್ಯ ವಿದ್ಯಾರ್ಥಿಗಳೊಂದಿಗೆ ಸಮನ್ವಯಗೊಳಿಸಿ, ರಾಜ್ಯ ಪಠ್ಯಕ್ರಮ ದೊಂದಿಗೆ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: Mangalore News: ರಹೀಂ ಶವಯಾತ್ರೆ ವೇಳೆ ಶೋರೂಮ್‌ಗೆ ಕಲ್ಲು ತೂರಾಟ; ಬಲವಂತವಾಗಿ ಬಂದ್‌ ಮಾಡಿಸಿದ ಕಿಡಿಗೇಡಿಗಳು

ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದ ಸಾಧನೆ ಮಾಡಿದ್ದು, ಶಿಕ್ಷಣ ಇಲಾಖೆ ಮತ್ತು ಸಂಸ್ಥೆಯ ವತಿಯಿಂದ ಜಿಲ್ಲಾ, ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ವಿವಿಧ ಕಾರ್ಯ ಕ್ರಮಗಳನ್ನು ನಡೆಸುತ್ತಾ ಬಂದಿದೆ. ಪ್ರಸ್ತುತ ೩೫೮ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶದೊಂದಿಗೆ ದಾಖಲೆ ಯನ್ನು ಮಾಡುತ್ತಾ ಬರುತ್ತಿದ್ದಾರೆ.

ವಿದ್ಯಾರ್ಥಿಗಳ ನ್ಯೂನತೆಯನ್ನು ನಿವಾರಿಸುವ ದೃಷ್ಟಿಯಿಂದ ವಾಕ್ ಶ್ರವಣ, ಫಿಸಿಯೋ ಥೆರಪಿ, ಆಟಿಸಂ, ಚಿತ್ರಕಲೆ ಮತ್ತು ವೃತ್ತಿ ತರಬೇತಿ ತರಗತಿಗಳ ಮೂಲಕ ಆಧುನಿಕ ತಂತ್ರ ಜ್ಞಾನದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧೀನಕ್ಕೆ ಒಳಪಟ್ಟು ೨೫ ಸಂವತ್ಸರಗಳನ್ನು ಪೂರೈಸು ತ್ತಿರುವ ಕಾರಣ ಈ ಸಂದರ್ಭದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ರಜತ ಮಹೋತ್ಸವವನ್ನು ನವೆಂಬರ್ ೨೮ ಮತ್ತು ೨೯ ರಂದು ಆಚರಿಸಲಾಗುತ್ತಿದೆ ಎಂದು ಶಾಲೆಯ ಆಡಳಿತಾಧಿಕಾರಿ ನರೇಶ್ ಮಲ್ಲಿಗೆ ಮಾಡು ತಿಳಿಸಿದರು.