ಬ್ರಿಡ್ಜ್ ಮ್ಯಾನ್ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ
Girish Bharadwaj: ದೇಶದ ಬ್ರಿಡ್ಜ್ ಮ್ಯಾನ್’ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜು 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಂಗ್ರಹ ಚಿತ್ರ -
ಸುಳ್ಯ: ದೇಶದ ಬ್ರಿಡ್ಜ್ ಮ್ಯಾನ್’ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (Girish Bharadwaj) (76) ಅವರು ಮಂಗಳವಾರ (ಜು 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಿರೀಶ್ ಭಾರದ್ವಾಜ್ ಅವರು ದೇಶದಾದ್ಯಂತ 140 ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸುವ ತೂಗು ಸೇತುವೆಗಳ ಸರದಾರ ಎಂದು ಹೆಸರು ಪಡೆದಿದ್ದರು.
2017ರಲ್ಲಿ ಅವರ ಸಾಧನೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇಂಜಿನಿಯರ್ ಪದವಿ ಪಡೆದ ಬಳಿಕ ಇಂಜಿನಿಯರಿಂಗ್ ವರ್ಕ್ಸ್ ಆರಂಭಿಸಿದ್ದ ಭಾರದ್ವಾಜ್ ಅವರು ಬಳಿಕ ತೂಗುಸೇತುವೆ ನಿರ್ಮಾಣ ಆರಂಭಿಸಿ ದೇಶ ವಿದೇಶಗಳಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಪ್ರಸಿದ್ಧರಾಗಿದ್ದರು. ಪತ್ನಿ ಉಷಾ. ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶ ಸೇರಿದಂತೆ ಮೂರು ರಾಜ್ಯಗಳಲ್ಲಿ ಇವರು ತೂಗುಸೇತುವೆಯನ್ನು ನಿರ್ಮಿಸಿದ್ದಾರೆ. 1950 ರ ಮೇ 2 ರಂದು ಸುಳ್ಯದಲ್ಲಿ ಜನಿಸಿದ ಗಿರೀಶ್ ಭಾರದ್ವಾಜ್ ಅವರು 1973ರಲ್ಲಿ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದ ಇವರು ತಮ್ಮ ಹುಟ್ಟೂರಾದ ಸುಳ್ಯದ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಮೊದಲ ಕಡಿಮೆ ವೆಚ್ಚದ ತೂಗು ಸೇತುವೆಯನ್ನು ನಿರ್ಮಿಸುವ ಮೂಲಕ ತಮ್ಮ ಪಯಣವನ್ನು ಪ್ರಾರಂಭಿಸಿದರು.
ʻಪ್ಯಾಟೆ ಮಂದಿ ಕಾಡಿಗ್ ಬಂದ್ರುʼ ಸೀಸನ್ 2ರ ಖ್ಯಾತಿಯ ಪದ್ದು ಗೌಡ ನಿಧನ
ಇವರು ನಿರ್ಮಿಸುವ ಸೇತುವೆಗಳು ಸಾಂಪ್ರದಾಯಿಕ ಸೇತುವೆಗಳ ವೆಚ್ಚದ ಕೇವಲ 10ನೇ ಒಂದು ಭಾಗದಲ್ಲಿ ಸಿದ್ಧಪಡಿಸುತ್ತಿದ್ದರು. ಅಲ್ಲದೆ, ಸಾಮಾನ್ಯ ಸೇತುವೆ ಕಟ್ಟಲು ಮೂರು ವರ್ಷ ಬೇಕಾದರೆ, ಇವರ ತೂಗುಸೇತುವೆಗಳು ಕೇವಲ ಮೂರೇ ತಿಂಗಳಲ್ಲಿ ಸಿದ್ಧವಾಗುತ್ತಿದ್ದವು. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.