ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬಗೆ SIR ನೋಟೀಸ್ ಕೊಟ್ಟ ಚುನಾವಣಾ ಆಯೋಗ!

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ ಹೆಸರು ವ್ಯತ್ಯಾಸವಾಗಿದೆ ಎಂಬ ಕಾರಣಕ್ಕೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ನೋಟಿಸ್ ಜಾರಿಯಾಗಿದ್ದ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಚುನಾವಣಾ ಮತ್ತು ಕಂದಾಯ ಅಧಿಕಾರಿಗಳು ನೇರವಾಗಿ ಅವರ ಮನೆಗೆ ತೆರಳಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಸಂಗ್ರಹ ಚಿತ್ರ

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ ಹೆಸರು ವ್ಯತ್ಯಾಸವಾಗಿದೆ ಎಂಬ ಕಾರಣಕ್ಕೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ನೋಟಿಸ್ ಜಾರಿಯಾಗಿದ್ದ ವಿಚಾರ ವಿವಾದಕ್ಕೆ ಕಾರಣವಾಗಿತ್ತು. (Padma Shri Awardee Harekala Hajabba) ಇದೀಗ ಚುನಾವಣಾ ಮತ್ತು ಕಂದಾಯ ಅಧಿಕಾರಿಗಳು ನೇರವಾಗಿ ಅವರ ಮನೆಗೆ ತೆರಳಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಮೂಲಗಳ ಪ್ರಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಹೆಸರನ್ನು 2002 ರ ಹಳೆಯ ಮತದಾರರ ಪಟ್ಟಿಯಲ್ಲಿ 'ಹಾಜಬ್ಬ' ಎಂದು ಮಾತ್ರ ದಾಖಲಿಸಲಾಗಿತ್ತು, ಆದರೆ ನಂತರದ ಅಧಿಕೃತ ದಾಖಲೆಗಳಲ್ಲಿ ಅವರ ಹೆಸರು 'ಹರೇಕಳ ಹಾಜಬ್ಬ' ಆಗಿದೆ.

ಹಾಜಬ್ಬರ ಎಲ್ಲಾ ದಾಖಲೆಗಳಲ್ಲಿ ಅದರಲ್ಲೂ ರೇಶನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಮತದಾರರ ಗುರುತಿನ ಚೀಟಿಯಲ್ಲಿ ಹರೇಕಳ ಹಾಜಬ್ಬ ಎಂದು ನಮೂದಾಗಿದೆ. ಚುನಾವಣಾ ಆಯೋಗವು ಹರೇಕಲಾ ಹಾಜಬ್ಬ ಅವರಿಗೆ ನೋಟಿಸ್ ಕಳುಹಿಸಿದ್ದು, ಸೆಪ್ಟೆಂಬರ್ 11 ರಂದು ಗ್ರಾಮ ಪಂಚಾಯಿತಿ ಮುಂದೆ ಹಾಜರಾಗಲು ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಬರುವಂತೆ ಹೇಳಿದ್ದರು. ಇದೀಗ ನೋಟಿಸ್ ಜಾರಿಯಾದ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಅಂಗನವಾಡಿ ಮೇಲ್ವಿಚಾರಕರು ಹರೇಕಳ ಹಾಜಬ್ಬರ ಮನೆಗೆ ಭೇಟಿ ನೀಡಿದರು.

ಹಾಜಬ್ಬ ಅವರ ಬಳಿಯಿದ್ದ ಪದ್ಮಶ್ರೀ ಪುರಸ್ಕಾರ ಪತ್ರಗಳು, ರಾಜ್ಯೋತ್ಸವ ಪ್ರಶಸ್ತಿ ಪತ್ರಗಳು, ಚುನಾವಣಾ ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಅಧಿಕಾರಿಗಳು ಸ್ಥಳದಲ್ಲೇ ಪರಿಶೀಲಿಸಿದರು. ಯಾವುದೇ ಮೂಲ ದಾಖಲೆಗಳನ್ನು ಕೊಂಡೊಯ್ಯದ ಅಧಿಕಾರಿಗಳು, ಅವುಗಳ ನಿಖರತೆಯನ್ನು ಖಚಿತಪಡಿಸಿಕೊಂಡಿದ್ದಾರೆ.

ನೋಟಿಸ್‌ ನೀಡಿದ್ದೇಕೆ?

2002ರ ಹಳೆಯ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಕೇವಲ 'ಹಾಜಬ್ಬ' ಎಂದಷ್ಟೇ ನಮೂದಾಗಿತ್ತು. ಆದರೆ, 2004ರ ಬಳಿಕ ಅವರಿಗೆ ಸಂದ ಪ್ರಶಸ್ತಿಗಳು, ಕನ್ನಡ ಪತ್ರಿಕೆಗಳ ವರದಿಗಳು, ಪದ್ಮಶ್ರೀ ಪುರಸ್ಕಾರ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪತ್ರಗಳು, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ಹೊಸ ಮತದಾರರ ಗುರುತಿನ ಚೀಟಿಯಂತಹ ಎಲ್ಲಾ ಅಧಿಕೃತ ದಾಖಲೆಗಳಲ್ಲೂ ಅವರ ಹೆಸರು 'ಹರೇಕಳ ಹಾಜಬ್ಬ' ಎಂದೇ ಅಧಿಕೃತವಾಗಿ ದಾಖಲಾಗಿದೆ. ಪ್ರಸ್ತುತ ಚುನಾವಣಾ ಆಯೋಗವು ನಡೆಸುತ್ತಿರುವ ಎಸ್‌ಐಆರ್ ಪರಿಶೀಲನಾ ಪ್ರಕ್ರಿಯೆಯ ವೇಳೆ ಹಳೆಯ ಪಟ್ಟಿಯಲ್ಲಿದ್ದ ಹೆಸರು ಮತ್ತು ಪ್ರಸ್ತುತ ದಾಖಲೆಗಳ ಹೆಸರಿನ ನಡುವೆ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ಸಹಜ ಪ್ರಕ್ರಿಯೆಯಾಗಿ ಈ ನೋಟಿಸ್ ನೀಡಲಾಗಿತ್ತು.

Vishakha Bhat Heggar

View all posts by this author