ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಂಗಳೂರಿನಲ್ಲಿ ಅದ್ಧೂರಿ ʼಪಿಲಿನಲಿಕೆʼ: ಹುಲಿ ನೃತ್ಯಕ್ಕೆ ಮನಸೋತು 2 ಲಕ್ಷ ರೂ. ಬಹುಮಾನ ಘೋಷಿಸಿದ ನಟ ಝೈದ್ ಖಾನ್

ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಮಿಥುನ್ ರೈ ಆಯೋಜಿಸಿದ್ದ ʼಪಿಲಿನಲಿಕೆʼ (ಹುಲಿ ನೃತ್ಯ) ಸ್ಪರ್ಧೆ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ʼಪಿಲಿನಲಿಕೆʼಯ ಒಂದು ತಂಡದ ನೃತ್ಯವನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ನಟ ಝೈದ್ ಖಾನ್ ಸ್ಥಳದಲ್ಲೇ ಆ ತಂಡಕ್ಕೆ ಎರಡು ಲಕ್ಷ ರೂ. ಬಹುಮಾನ ಘೋಷಿಸಿದರು.

ಹುಲಿ ನೃತ್ಯಕ್ಕೆ ಮನಸೋತು 2 ಲಕ್ಷ ರೂ. ಘೋಷಿಸಿದ ನಟ ಝೈದ್ ಖಾನ್

-

Profile
Siddalinga Swamy Oct 2, 2025 7:50 PM

ಮಂಗಳೂರು: ಮಂಗಳೂರಿನಲ್ಲಿ ದಸರಾ (Mangaluru Dasara) ಸಂದರ್ಭದಲ್ಲಿ ಮಿಥುನ್ ರೈ (Mithun Rai) ಆಯೋಜಿಸಿದ್ದ ʼಪಿಲಿನಲಿಕೆʼ (Pilinalike) ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಖ್ಯಾತ ಕಲಾವಿದರಾದ ಕಿಚ್ಚ ಸುದೀಪ್, ಸುನೀಲ್ ಶೆಟ್ಟಿ, ಝೈದ್ ಖಾನ್ ಹಾಗೂ ನಟಿ ಪೂಜಾ ಹೆಗ್ಡೆ, ಕ್ರೀಡಾಪಟುಗಳಾದ ಅಜಿಂಕ್ಯ ರಹಾನೆ, ಜಿತೇಶ್ ಶರ್ಮ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ʼಪಿಲಿನಲಿಕೆʼ (ಹುಲಿ ನೃತ್ಯ)ಯ ಒಂದು ತಂಡದ ನೃತ್ಯವನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ನಟ ಝೈದ್ ಖಾನ್ ಸ್ಥಳದಲ್ಲೇ ಆ ತಂಡಕ್ಕೆ 2 ಲಕ್ಷ ರೂಪಾಯಿಗಳ ಬಹುಮಾನ ಘೋಷಣೆ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು ಹಾಗೂ ತುಂಬಾ ಸೊಗಸಾಗಿ ಹುಲಿನೃತ್ಯ ಮಾಡಿದ ಹುಡುಗನ ಪ್ರತಿಭೆಗೆ ಮನಸೋತ ಝೈದ್ ಖಾನ್ ಆತನಿಗೆ 50 ಸಾವಿರ ರೂ. ನೀಡುವುದಾಗಿ ತಿಳಿಸಿದರು.

ಪ್ರಸ್ತುತ ಝೈದ್ ಖಾನ್ ನಾಯಕನಾಗಿ ನಟಿಸುತ್ತಿರುವ ʼಕಲ್ಟ್ʼ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಪ್ರೇಕ್ಷಕರ ಮನ ಗೆದ್ದಿದೆ.

ಈ ಸುದ್ದಿಯನ್ನೂ ಓದಿ | Pushpa Arunkumar: ವಿಜಯ ದಶಮಿಯಂದು ಹೊಸ ಚಿತ್ರದ ಬಗ್ಗೆ ಮಾಹಿತಿ ನೀಡಿದ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್