ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬಂಟ್ವಾಳದಲ್ಲಿ ಅಪಘಾತ, ಉಡುಪಿ ಶ್ರೀಕೃಷ್ಣ ಮಠಕ್ಕೆ ಹೊರಟಿದ್ದ ಮೂವರು ಸಾವು

Dakshina Kannada: ಬಿಸಿ ರೋಡಿನ ಸರ್ಕಲ್‌ನಲ್ಲಿ ಇನ್ನೋವಾ ಕಾರು ಬಂದು ಎನ್.ಜಿ ಸರ್ಕಲ್‌ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ರಮ್ಯ (23), ರವಿ ‌(64), ನಂಜಮ್ಮ (75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಬಂಟ್ವಾಳದಲ್ಲಿ ಅಪಘಾತ, ಉಡುಪಿ ಶ್ರೀಕೃಷ್ಣ ಮಠಕ್ಕೆ ಹೊರಟಿದ್ದ ಮೂವರು ಸಾವು

ಬಿಸಿ ರೋಡ್‌ನಲ್ಲಿ ಕಾರು ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Nov 15, 2025 12:22 PM

ಮಂಗಳೂರು, ನ.15: ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡಿನ (BC Road) ಸರ್ಕಲ್‌ನಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು, ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕಾಗಿ ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬಿಸಿ ರೋಡಿನ ಸರ್ಕಲ್‌ನಲ್ಲಿ ಇನ್ನೋವಾ ಕಾರು ಬಂದು ಎನ್.ಜಿ ಸರ್ಕಲ್‌ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ರಮ್ಯ (23), ರವಿ ‌(64), ನಂಜಮ್ಮ (75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಎಂಬ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿ ರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ‌ ಸರ್ಕಲ್ ಅವೈಜ್ಞಾನಿಕವಾಗಿರುವುದರಿಂದಲೇ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಕಾಲುವೆಗೆ ಉರುಳಿ ಇಬ್ಬರು ಸಾವು

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಭದ್ರಾ ಕಾಲುವೆಗೆ (Bhadra canal) ಕಾರು ಬಿದ್ದು (Road Accident) ಇಬ್ಬರು ಸಾವಿಗೆ (Death) ಈಡಾಗಿದ್ದಾರೆ. ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದುರ್ಘಟನೆ ದಾವಣಗೆರೆ (Davanagere news) ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಹೊಸೂರು ಬಳಿಯ ಭದ್ರಾ ಮುಖ್ಯ ಕಾಲುವೆಯಲ್ಲಿ ಕಾರು ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಲ್ಲಿಕಾರ್ಜುನ (29) ಹಾಗೂ ಸಿದ್ದೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದಾವಣಗೆರೆ ಮೂಲದ 6 ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಚಾಲಕ ನಿದ್ರೆ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಈಜಿ ದಡ ಸೇರಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Kashmir Blast: ಜಮ್ಮು ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ, 7 ಜನ ಸಾವು