ಮಂಗಳೂರು: ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಭೀಕರ ಅಪಘಾತ (Road accident) ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಬಸ್ ಹಾಗೂ (Bus accident) ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಂದು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಕೆಸಿ ರೋಡ್‌ನಿಂದ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು, ಹಾಗೂ ಒಂದು ಮಗು ಕೂಡ ಸೇರಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ಸುಇದ್ದಕಿದ್ದಂತೆ ಹಿಂದೆ ಚಲಿಸಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿಯಲ್ಲಿ ಅಪಘಾತ, ಇಬ್ಬರು ಸಾವು
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ (road accident) ಸಂಭವಿಸಿದ್ದು, ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ಒಂದು ಪಲ್ಟಿಯಾದ (bus accident) ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಪುಣೆಗೆ ತೆರಳುತ್ತಿದ್ದ ಗೋಗಟೆ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ.
9 ಜನರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್‌ನಲ್ಲಿ ಒಟ್ಟು 12 ಜನ ಪ್ರಯಾಣಿಕರು ಇದ್ದರು. ಈ ದುರ್ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸಾವನ್ನಪ್ಪಿದ್ದಾರೆ. ಉಳಿದ ಒಂಬತ್ತು ಜನರನ್ನು ಹಿರೇಬಾಗೇವಾಡಿ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲಾಗಿದೆ. ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಕೂಡಲೇ ರಕ್ಷಿಸಿ, ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: Road Accident: ಭೀಕರ ಅಪಘಾತ, ಬಸ್ ಪಲ್ಟಿಯಾಗಿ ಇಬ್ಬರು ಸಾವು