SDM: ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಸೇವೆ ಆರಂಭ

SDM: ಉಜಿರೆಯ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಸೇವೆ ಆರಂಭಿಸಲಾಗಿದೆ.

image-de6e5e5b-9856-4e37-a2e1-ac80b2f28344.jpg
Profile Ramesh B January 1, 2025
ಧರ್ಮಸ್ಥಳ: ʼʼಉಜಿರೆಯ ಎಸ್‌ಡಿಎಂ (SDM) ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2022ರ ಜನವರಿಯಲ್ಲಿ ಡಯಾಲಿಸಿಸ್ ಸೇವೆ ಆರಂಭವಾಗಿದ್ದು, ಒಟ್ಟು 11 ಡಯಾಲಿಸಿಸ್ ಯಂತ್ರಗಳಿವೆ‌. ಈ ಹವಾನಿಯಂತ್ರಿತ ಕೇಂದ್ರದಲ್ಲಿ ಇದುವರೆಗೂ ಪ್ರತಿದಿನ‌ 30ಕ್ಕೂ ಅಧಿಕ ಡಯಾಲಿಸಿಸ್ ಸೇವೆ ನೀಡಲಾಗಿದೆ. ಆ ಮೂಲಕ ಒಟ್ಟು 10 ಸಾವಿರಕ್ಕೂ ಅಧಿಕ ಡಯಾಲಿಸಿಸ್ ಸೇವೆ ನೀಡಲಾಗಿದೆ. ಬೆಳ್ತಂಗಡಿ ತಾಲೂಕಿನ ಆಸುಪಾಸಿನಲ್ಲಿರುವ ರೋಗಿಗಳಿಗೆ ಈ ಡಯಾಲಿಸಿಸ್ ಸೆಂಟರ್ ವರದಾನವಾಗಿದೆ. ಇದರ ಜತೆಗೆ ಇದೀಗ (ಜ. 1) ಉಚಿತ ಡಯಾಲಿಸಿಸ್ ಸೇವೆ ಪ್ರಾರಂಭಿಸಿರುವುದು ಬಹಳಷ್ಟು ರೋಗಿಗಳಿಗೆ ಅನುಕೂಲವಾಗಲಿದೆʼʼ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಹೇಳಿದರು. ʼʼಪ್ರತಿ ರೋಗಿಗೆ ಒಂದು ಬಾರಿಯ ಡಯಾಲಿಸಿಸ್‌ಗೆ 1,500 ರೂ. ವೆಚ್ಚವಾಗುತ್ತದೆ. ಒಬ್ಬ ರೋಗಿಗೆ ವಾರಕ್ಕೆ 3ರಿಂದ 4 ಡಯಾಲಿಸಿಸ್ ಅಗತ್ಯವಿರುತ್ತದೆ. ಇದೀಗ ಉಚಿತ ಡಯಾಲಿಸಿಸ್ ಸೇವೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಒಬ್ಬ ರೋಗಿಗೆ ತಿಂಗಳಿಗೆ 12 ಸಾವಿರ ರೂ.ಯಿಂದ 24 ಸಾವಿರ ರೂ.ವರೆಗೂ ಉಳಿತಾಯವಾಗುತ್ತದೆ. ಉಚಿತ ಡಯಾಲಿಸಿಸ್ ಯೋಜನೆಯಲ್ಲಿ ಒಬ್ಬ ರೋಗಿ ಮಾಸಿಕ 12 ಡಯಾಲಿಸಿಸ್  ಮಾಡಿಸಿಕೊಳ್ಳಬಹುದುʼʼ ಎಂದು ತಿಳಿಸಿದರು. ʼʼಇದರ ಜತೆಗೆ ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2024ನೇ ಸಾಲಿನಲ್ಲಿ 4.98 ಕೋಟಿ ರೂ. ಮೊತ್ತದ ಉಚಿತ ವೈದ್ಯಕೀಯ ಸೇವೆಯನ್ನು ರೋಗಿಗಳಿಗೆ ನೀಡಲಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ವರ್ಷವೂ 40ಕ್ಕೂ ಅಧಿಕ ಉಚಿತ ವೈದ್ಯಕೀಯ ಶಿಬಿರಗಳನ್ನೂ ಆಯೋಜಿಸಲಾಗಿದೆʼʼ ಎಂದು ವಿವರಿಸಿದರು. ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಜಿಶಿಯನ್ ಡಾ. ಸಾತ್ವಿಕ್ ಜೈನ್, ಜೆನರಲ್ ಫಿಜಿಶಿಯನ್ ಡಾ. ಬಾಲಕೃಷ್ಣ ಭಟ್, ಮೆಡಿಕಲ್ ಸುಪರಿಡೆಂಟ್ ಡಾ. ದೇವೇಂದ್ರ ಮತ್ತಿತರರು ಉಪಸ್ಥಿತರಿದ್ದರು. ವೈದ್ಯೆ ಅನುಷಾ ನಿರೂಪಿಸಿದರು. ಸಂಪರ್ಕಾಧಿಕಾರಿ ಚಿದಾನಂದ್ ಧನ್ಯವಾದ ಸಮರ್ಪಿಸಿದರು. ಈ ಸುದ್ದಿಯನ್ನೂ ಓದಿ: Dharmasthala Laksha Deepotsava 2024: ಸರ್ಕಾರ ಮಾಡದ ಕೆಲಸವನ್ನು ಡಾ. ಹೆಗ್ಗಡೆಯವರು ಮಾಡುತ್ತಿದ್ದಾರೆ: ಸಚಿವ ಡಾ.ಜಿ. ಪರಮೇಶ್ವರ್
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ