Self Harming: ಸುಳ್ಯದಲ್ಲಿ ಘೋರ ಘಟನೆ; ಗುಂಡಿಕ್ಕಿ ಪತ್ನಿಯ ಕೊಂದು, ಆ್ಯಸಿಡ್ ಸೇವಿಸಿ ಪತಿಯೂ ಆತ್ಮಹತ್ಯೆ
Self Harming: ಪತ್ನಿಯ ಸಾವಿನಿಂದ ಮನನೊಂದ ರಾಮಚಂದ್ರ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಂದು, ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಪತ್ನಿಯನ್ನು ಕೊಲೆ ಮಾಡಿದ ಬಳಿಕ ಮನನೊಂದು ಪತಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರನ್ನು ರಾಮಚಂದ್ರಗೌಡ ಮತ್ತು ಅವರ ಪತ್ನಿ ವಿನೋದಾ ಕುಮಾರಿ ಎಂದು ಗುರುತಿಸಲಾಗಿದೆ.
ರಾಮಚಂದ್ರ ನಿತ್ಯ ಕುಡಿದು ಬಂದು ಪತ್ನಿ ಜತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ ಶುಕ್ರವಾರ ರಾತ್ರಿ ಕೂಡ ಪತ್ನಿ ವಿನೋದಾ, ಪತಿ ರಾಮಚಂದ್ರ ನಡುವೆ ಜಗಳ ಆಗಿದೆ. ಗಲಾಟೆ ಬಿಡಿಸಲು ಬಂದ ಮಗ ಪ್ರಶಾಂತ್ನಿಗೆ ಫೈರಿಂಗ್ ಮಾಡಲು ರಾಮಚಂದ್ರ ಯತ್ನಿಸಿದ್ದಾನೆ. ಮಗನ ಬದಲು ಪತ್ನಿ ವಿನೋದಾ ಅಡ್ಡ ಬಂದಿದ್ದಾರೆ. ಈ ವೇಳೆ ಗುಂಡು ತಗುಲಿ ವಿನೋದಾ ಕುಮಾರಿ ಮೃತಪಟ್ಟಿದ್ದಾರೆ.
ಘಟನೆ ನಂತರ ಪತ್ನಿಯ ಸಾವಿನಿಂದ ಮನನೊಂದ ರಾಮಚಂದ್ರ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Road Rage: ರೋಡ್ ರೇಜ್ ನಡೆಸಿದ ಇಬ್ಬರು ದುಷ್ಕರ್ಮಿಗಳ ಬಂಧನ
Student Death: ಪರೀಕ್ಷೆ ಮುಗಿಸಿ ಬರುತ್ತಿದ್ದ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ತುಮಕೂರು: ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿ ಬರುವಾಗ ಹೃದಯಾಘಾತದಿಂದ ಕಾಲೇಜಿನ ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಶಮಂತ್ (17) ಸಾವನ್ನಪ್ಪಿದ್ದಾನೆ.
ಗುರುವಾರ ಘಟನೆ ನಡೆದಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ನಡೆಸಿ ವಾಪಸ್ ಬರುವಾಗ ಎದೆ ನೋವಿನಿಂದ ಕುಸಿದು ಬಿದ್ದ ಶಮಂತ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿದ್ದು, ತುಮಕೂರಿನಲ್ಲಿಯೇ ವಿದ್ಯಾರ್ಥಿನಿಯೊಬ್ಬಳು ಹೀಗೆ ಮೃತಪಟ್ಟಿದ್ದಳು. ರಾಜ್ಯದ ಇತರ ಕಡೆಗಳಲ್ಲೂ ಇಂಥ ಘಟನೆಗಳು ವರದಿಯಾಗಿವೆ.
ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಪ್ರಕರಣದ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣ (POCSO case) ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ (Karnataka High Court) ಆದೇಶವನ್ನು ಕಾಯ್ದಿರಿಸಿದೆ.
ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಆದೇಶ ಕಾಯ್ದಿರಿಸಿತು. ಇದೇ ವೇಳೆ ಯಡಿಯೂರಪ್ಪ ಖುದ್ದು ಹಾಜರಿಗೆ ನೀಡಿದ್ದ ವಿನಾಯತಿಯನ್ನು ವಿಸ್ತರಿಸಿದೆ. ಆ ಮೂಲಕ ಬಿಜೆಪಿ ನಾಯಕರೂ ಆಗಿರುವ ಮಾಜಿ ಸಿಎಂಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಈ ಸುದ್ದಿಯನ್ನೂ ಓದಿ | Naxal Surrender: ಶರಣಾದ ನಕ್ಸಲರಿಗೆ 6 ದಿನ ಪೊಲೀಸ್ ಕಸ್ಟಡಿ