ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Soujanya Case: ಸೌಜನ್ಯ ಪ್ರಕರಣದ ತನಿಖೆ ಆರಂಭ ಮಾಡ್ತಾ SIT? ಉದಯ್‌ ಜೈನ್‌ ಸೇರಿದಂತೆ ಹಲವರಿಗೆ ನೋಟೀಸ್‌

ಕರ್ನಾಟಕ ಪೊಲೀಸ್‌, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ ಕ್ಲೀನ್‌ಚಿಟ್‌ ಪಡೆದುಕೊಂಡಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ನೋಟೀಸ್‌ ನೀಡಿದೆ. ಉದಯ್ ಕುಮಾರ್ ಜೈನ್ ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

ಸೌಜನ್ಯ ಪ್ರಕರಣದ ತನಿಖೆ? ಉದಯ್‌ ಜೈನ್‌ಗೆ ನೋಟೀಸ್‌

-

Vishakha Bhat Vishakha Bhat Sep 3, 2025 12:48 PM

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಚಿನ್ನಯ್ಯ ಹೇಳಿಕೆ (Soujanya Case) ನೀಡಿದ ಬಳಿಕ ಎಸ್ಐಟಿ ತನಿಖೆ ಆರಂಭಿಸಿತು. ಬಳಿಕ ಯಾವುದೇ ಕುರುಹು ಪತ್ತೆ ಆಗದ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಅಧಿಕಾರಿಗಳು ವಶಕ್ಕೆ ಪಡದು ವಿಚಾರಣೆ ನಡೆಸಿದಾಗ ಹಲವು ಸ್ಫೋಟಕ ಅಂಶಗಳು ಬಯಲಾಗಿದೆ. ಇದೀಗ ಅಧಿಕಾರಿಗಳು ಸೌಜನ್ಯ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಉದಯ್ ಕುಮಾರ್ ಜೈನ್ ಸೇರಿದಂತೆ ಹಲವರಿಗೆ ಎಸ್ಐಟಿ ನೋಟೀಸ್‌ ನೀಡಿದೆ.

ಕರ್ನಾಟಕ ಪೊಲೀಸ್‌, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ ಕ್ಲೀನ್‌ಚಿಟ್‌ ಪಡೆದುಕೊಂಡಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ನೋಟೀಸ್‌ ನೀಡಿದೆ. ಸದ್ಯ ಉದಯ್ ಕುಮಾರ್ ಜೈನ್ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಉದಯ್ ಕುಮಾರ್ ಜೈನ್ ನಾನು ಯಾವುದೇ ತನಿಖೆಗೆ ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ ಸೌಜನ್ಯ ತಾಯಿ ಅವರು ಎಸ್ಐಟಿಗೆ ಕೊಟ್ಟ ದೂರಿಗೆ ಕರೆದಿರಬಹುದು. ಚಿನ್ನಯ್ಯ ನೀಡಿರುವ ಹೇಳಿಕೆಯ ಕಾರಣಕ್ಕು ನಮ್ಮನ್ನು ಕರೆದಿರಬಹುದು ಬುರುಡೆ ಪ್ರಕರಣದ ದಿಕ್ಕು ಬದಲಿಸುವ ಹುನ್ನಾರ ಇದು ಈಗ ವಿಷಯ ಅಂತರ ಮಾಡುವುದಕ್ಕೆ ಈ ರೀತಿ ಮಾತಾಡುತ್ತಿದ್ದಾರೆ. ಬುರುಡೆ ಪ್ರಕರಣ ಮುಚ್ಚಿ ಹಾಕಲು ಈ ಪ್ರಕರಣ ಒಂದಲೇ ತರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Dharmasthala Chalo: ಜೆಡಿಎಸ್‌, ಬಿಜೆಪಿ ಬಳಿಕ ಕಾಂಗ್ರೆಸ್‌ನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ; ಸಾವಿರಾರು ಜನರ ನಿರೀಕ್ಷೆ

ಈಗ ಬಂದಿರುವ ವ್ಯಕ್ತಿ ಒಂದು ವಿಡಿಯೋನಲ್ಲಿ ಸೌಜನ್ಯ ಕೊಲೆಯಾದ ಸಂದರ್ಭದಲ್ಲಿ ನಾನು ಇರಲಿಲ್ಲ ಅಂತ ಒಂದು ವಿಡಿಯೋನಲ್ಲಿ ಹೇಳಿದ್ದಾನೆ. ಮತ್ತೊಂದು ವಿಡಿಯೋನಲ್ಲಿ ನಾನೇ ಆಕೆಯನ್ನ ಹೊತ್ಕೊಂಡು ಹೋಗೋದು ನೋಡಿದ್ದೇನೆ ಅಂತ ಹೇಳಿದ್ದಾನೆ. ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿದ್ದಾನೆ. ಈಗ ಸೌಜನ್ಯ ಪ್ರಕರಣದಲ್ಲಿ ನನ್ನ ಬಗ್ಗೆ ಆರೋಪ ಮಾಡಿದ್ದಾರೆ. ಯಾವುದೇ ತನಿಖೆಯನ್ನು ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ. ಸಿಐಡಿ, ಸಿಬಿಐ ನನ್ನನೂ ತನಿಖೆ ನಡೆಸಿದ್ದಾರೆ. ಬ್ರೈನ್ ಮ್ಯಾಪಿಂಗ್ ಕೂಡ ಮಾಡಿದ್ದಾರೆ, ಇವತ್ತು ಮತ್ತೆ ಎಸ್‌ಐಟಿ ಕರೆದಿದ್ದಾರೆ. ನಾನು ಬಂದಿದ್ದೇನೆ ಎಂದು ಜೈನ್‌ ಹೇಳಿದ್ದಾರೆ.

ಸೌಜನ್ಯ ಮನೆ ಮೇಲೆ ಇಡಿ ದಾಳಿ ಮಾಡಲಿ

ಸೌಜನ್ಯ ಸತ್ತು ಒಂದು ವರ್ಷದ ನಂತರ ನಮ್ಮ ಹೆಸರು ಸೇರಿಸುವ ಕುತಂತ್ರ ನಡೆಯಿತು. ಆದರೆ ಎಫ್‌ಐಆರ್‌ ಕಾಪಿಯಲ್ಲಿ ನನ್ನ ಹೆಸರೇ ಇಲ್ಲ. ಈಗ ನಮ್ಮನ್ನೆಲ್ಲಾ ದಿಕ್ಕಾಪಾಲು ಮಾಡಿ ಸೌಜ್ಯ ತಾಯಿ ದೊಡ್ಡ ಮನೆಯಲ್ಲಿ ಆರಾಮಾಗಿದ್ದಾರೆ. ಅವರ ಮನೆ ಮೇಲೂ ಇಡಿ ರೇಡ್‌ ಆಗಬೇಕು ಎಂದು ಉದಯ್‌ ಜೈನ್‌ ಒತ್ತಾಯಿಸಿದರು.