SKDRDP: ದ್ವೀಪ ರಾಷ್ಟ್ರ ಶ್ರಿಲಂಕಾದಲ್ಲೂ ಅನುಷ್ಠಾನಗೊಳ್ಳಲಿದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ!

ಕಳೆದ ನಾಲ್ಕು ದಶಕಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆ ಹಲವರ ಬಾಳಿನಲ್ಲಿ ಬೆಳಕಾಗಿದೆ. ಇದೀಗ ಈ ಯಶಸ್ವಿ ಯೊಜನೆಯನ್ನು ನಮ್ಮ ನೆರೆ ರಾಷ್ಟ್ರ ಶ್ರೀಲಂಕಾದಲ್ಲೂ ಅನುಷ್ಠಾನಗೊಳಿಸಲು ಅಲ್ಲಿನ ನಿಯೊಗವೊಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ...

ದ್ವೀಪ ರಾಷ್ಟ್ರ ಶ್ರಿಲಂಕಾದಲ್ಲೂ ಅನುಷ್ಠಾನಗೊಳ್ಳಲಿದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
Profile Sushmitha Jain Jan 23, 2025 10:05 PM

ಉಜಿರೆ: ಗ್ರಾಮೀಣ ಭಾರತವೇ (Rural India) ನೈಜ ಭಾರತದ ಪ್ರತಿಬಿಂಬವಾಗಿದೆ. ಆದುದರಿಂದಲೇ ರಾಷ್ಟ್ರಪಿತ ಮಹಾತ್ಮಾಗಾಂಧೀಜಿ (Mahatma Gandhi) ಗ್ರಾಮರಾಜ್ಯದ ಪ್ರಗತಿ ಮೂಲಕ ರಾಮರಾಜ್ಯದ ಕನಸು ಕಂಡಿದ್ದರು. ಅವರು ಸಹಕಾರಿ ಚಳವಳಿ ಮೂಲಕ ದೇಶದ ಪ್ರಗತಿಗೆ ಆದ್ಯತೆ ನೀಡಿದರು. ಮಾನವ ಸಂಪನ್ಮೂಲ ಹಾಗೂ ನೆಲ, ಜಲ ಮತ್ತು ಪ್ರಾಕೃತಿಕ ಸಂಪನ್ಮೂಲಗಳ ಸದ್ಬಳಕೆಯೊಂದಿಗೆ ಗ್ರಾಮೀಣ ಪ್ರದೇಶದ ಪ್ರಗತಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು 1982ರಲ್ಲಿ ಪ್ರಾಯೋಗಿಕವಾಗಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಪ್ರಾರಂಭಿಸಿದ್ದು ಇದು ಯಶಸ್ವಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ (Dr. D Veerendra Heggade) ಹೇಳಿದರು.

ಅವರು, ಗುರುವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ (SKDRDP) ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ ಆಗಮಿಸಿದ 38 ಮಂದಿ “ಲಂಕಾ ಮೈಕ್ರೋ ಪೈನಾನ್ಸ್ ಪ್ರಾಕ್ಟೀಶನರ್ಸ್ ಅಸೋಸಿಯೇಶನ್’ನ ಸದಸ್ಯರಿಗೆ ಮಾಹಿತಿ ನೀಡಿದರು.

ಅಭಿವೃದ್ಧಿ ಮತ್ತು ಪ್ರಗತಿ ಸಾಧಿಸಲು ಎಲ್ಲರಿಗೂ ಸಮಾನ ಅವಕಾಶವಿದೆ. ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳು ಪ್ರಗತಿಯ ಪಾಲುದಾರರು. ಜನರ ಸಕ್ರಿಯ ಸಹಕಾರ ಮತ್ತು ಸಹಭಾಗಿತ್ವದಿಂದ ಯೋಜನೆ ಯಶಸ್ವಿಯಾಗಿದೆ. ಜನಸಾಮಾನ್ಯರ ಬೇಡಿಕೆಗಳಿಗೆ ಅನುಗುಣವಾಗಿ ಕಿರು ಆರ್ಥಿಕ ಯೋಜನೆಯನ್ನು ಸ್ವ-ಸಹಾಯ ಸಂಘಗಳ ಮೂಲಕ ಬಿ.ಸಿ. ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಪ್ರಗತಿಗೆ ಕೊನೆಯಿಲ್ಲ. ಇಂದು ಗ್ರಾಮೀಣ ಜನರ ಜೀವನಶೈಲಿ ಸುಧಾರಣೆಯಾಗಿದೆ. ಅವರ ಮಕ್ಕಳೆಲ್ಲ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದರು.

ಯೋಜನೆಯ ಎಲ್ಲಾ ವ್ಯವಹಾರಗಳು. ಕಾರ್ಯಕ್ರಮಗಳು ಪಾರದರ್ಶಕವಾಗಿದ್ದು ಯಾರು ಬೇಕಾದರೂ ಇದನ್ನು ಅನುಸರಿಸಬಹುದು ಎಂದು ಹೇಳಿದರು.

ಶ್ರೀಲಂಕಾದ ಪ್ರತಿನಿಧಿಗಳು ಹೆಗ್ಗಡೆಯವರಿಗೆ ಮನವಿ ಅರ್ಪಿಸಿದರು

ಶ್ರೀಲಂಕಾದಲ್ಲಿ ಯೋಜನೆಯ ಮಾದರಿ ಅನುಷ್ಠಾನಗೊಳಿಸಲು ತಮ್ಮ ಪೂರ್ಣ ಒಪ್ಪಿಗೆ ಇದೆ. ಬೇಕಾದ ಎಲ್ಲಾ ಮಾಹಿತಿ, ಅನುಭವ, ಮಾರ್ಗದರ್ಶನ ನೀಡಲಾಗುವುದು. ಶ್ರೀಲಂಕಾ ಸಣ್ಣ ದೇಶವಾದುದರಿಂದ ಅಲ್ಲಿ ಯೋಜನೆ ಯಶಸ್ವಿಯಾಗುತ್ತದೆ ಎಂದು ಹೇಳಿ ಶುಭ ಹಾರೈಸಿದರು.

ಹೇಮಾವತಿ ವೀ. ಹೆಗ್ಗಡೆಯವರ ನೇತೃತ್ವದಲ್ಲಿ ಜ್ಞಾನದೀಪ ಮತ್ತು ಜ್ಞಾನವಿಕಾಸ ಕಾರ್ಯಕ್ರಮಗಳ ಮೂಲಕ ಮಹಿಳಾ ಸಬಲೀಕರವಾಗಿದೆ ಎಂದರು. ಅವರು ಕೂಡಾ ವ್ಯವಹಾರ ಪರಿಣತರಾಗಿ, ಜನಪ್ರತಿನಿಧಿಗಳಾಗಿ ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Saif Ali Khan: ಸೈಫ್‌ ಆಲಿ ಖಾನ್‌ ಶೀಘ್ರ ಚೇತರಿಕೆಗೆ ಕಾರಣವೇನು? ಡಾ.ದೀಪಕ್‌ ಕೃಷ್ಣಮೂರ್ತಿ ಬಿಚ್ಚಿಟ್ಟ ಮಾಹಿತಿ!

“ಲಂಕಾ ಮೈಕ್ರೋ ಪೈನಾನ್ಸ್ ಪ್ರಾಕ್ಟೀಶನರ್ಸ್ ಅಸೋಸಿಯೇಶನ್” ಅಧ್ಯಕ್ಷ ವಾಸಂತ ಗುಣವರ್ಧನ ಮಾತನಾಡಿ, ಧರ್ಮಸ್ಥಳದ ಯೋಜನೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿ ಶ್ರೀಲಂಕಾದಲ್ಲಿ ಇದೇ ಮಾದರಿ ಅನುಷ್ಠಾನಗೊಳಿಸಲು ಹೆಗ್ಗಡೆಯವರ ಅನುಮತಿ ಕೋರಿದರು. ಹೆಗ್ಗಡೆಯವರು ಸಂತೋಷದಿಂದ ಒಪ್ಪಿಗೆ ನೀಡಿ ಎಲ್ಲಾ ರೀತಿಯ ಸಹಕಾರ, ಮಾರ್ಗದರ್ಶನ ನೀಡುವುದಾಗಿ ಭರವಸೆ ನೀಡಿದರು.

ಶ್ರೀಲಂಕಾದ ಪ್ರತಿನಿಧಿಗಳು ಧರ್ಮಸ್ಥಳದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು

ಶ್ರೀಲಂಕಾದ ಡೆಗಿರಿ ದುಲಾಂಗ ಚಮೀರ, ಮಿಥಿರಾಮ್ ಚಾಮಿಕ ಮಲ್‌ಕಾಂತಿ ರಾಣಸಿಂಘ, ಕನಗರತ್ನಂ ಲಕ್ಷ್ಮಣ್ ಈರಜ್, ಎಸ್.ಪಿ. ಬೆನಿತಾಸ್, ರಾಮಸಾಮಿ ರಾಜೇಶ್‌ಖನ್ನಾ ಮಾತನಾಡಿ ಧರ್ಮಸ್ಥಳದ ಶಿಸ್ತು, ಆಡಳಿತ ವ್ಯವಸ್ಥೆ, ಆತಿಥ್ಯ, ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಪ್ರಾಸ್ತಾವಿಕ ಮಾತುಗಳೊಂದಿಗೆ ಯೋಜನೆಯ ಕಾರ್ಯವೈಖರಿಯ ಪಕ್ಷಿನೋಟ ನೀಡಿದರು.

ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ್ ಪೈ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶೀಕ ನಿರ್ದೇಶಕ ಆನಂದ ಸುವರ್ಣ ಧನ್ಯವಾದವಿತ್ತರು. ನಿರ್ದೇಶಕ ರಾಜೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?