Street Dog Attack: ಬೀದಿ ನಾಯಿಗೆ ಮತ್ತೊಬ್ಬ ಬಲಿ, ಕಚ್ಚಿ ಕೊಂದು ಶವದ ರಕ್ತ ನೆಕ್ಕುತ್ತಾ ಕುಳಿತಿದ್ದ ನಾಯಿ!
Dakshina Kannada: ದಕ್ಷಿಣ ಕನ್ನಡದ ಉಳ್ಳಾಲದಲ್ಲಿ ಬರ್ಬರ ಘಟನೆಯೊಂದು ನಡೆದಿದೆ. ರಾತ್ರಿ ಅಂಗಡಿಯೊಂದರ ಎದುರು ಮಲಗಿದ್ದ ವ್ಯಕ್ತಿಯ ಮೇಲೆ ಬೆಳಗ್ಗೆ 3ರಿಂದ 4 ಗಂಟೆ ಹೊತ್ತಿಗೆ ಬೀದಿ ನಾಯಿಗಳು ದಾಳಿ ನಡೆಸಿವೆ. ತಪ್ಪಿಸಿಕೊಂಡು ಓಡಿದರೂ ಬಿಡದೇ ಬಂದು ದಾಳಿ ನಡೆಸಿ ಕೊಂದು ಹಾಕಿವೆ.
ಬೀದಿ ನಾಯಿ ದಾಳಿಗೆ ಉಳ್ಳಾಲದ ದಯಾನಂದ ಬಲಿ -
ಉಳ್ಳಾಲ : ರಾಜ್ಯದಲ್ಲಿ ಬೀದಿ ನಾಯಿ ದಾಳಿಗೆ (Street Dog Attack) ಮತ್ತೊಬ್ಬ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಕುಂಪಲ ಬೈಪಾಸ್‌ನಲ್ಲಿರುವ ಮನೆಯೊಂದರ ಅಂಗಳದಲ್ಲಿ ನಡೆದಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ (54) ಎಂಬವರು ಮೃತಪಟ್ಟವರು. ಅಂಗಡಿಯೊಂದರ ಎದುರು ಮಲಗಿದ್ದ ಅವರ ಮೇಲೆ ಬೆಳಗ್ಗೆ 3ರಿಂದ 4 ಗಂಟೆ ಹೊತ್ತಿಗೆ ಬೀದಿ ನಾಯಿಗಳು ದಾಳಿ ನಡೆಸಿವೆ.
ಅವರು ರಸ್ತೆ ಬದಿಯಿಂದ ತಪ್ಪಿಸಿಕೊಂಡು ಪಕ್ಕದ ಮನೆಯೊಂದರ ಬಳಿಗೆ ಹೋದರೂ ಅಟ್ಟಿಸಿಕೊಂಡು ಬಂದು ದಾಳಿ ಮಾಡಿವೆ. ಬೆಳಗ್ಗೆ ಮನೆ ಅಂಗಳದಲ್ಲಿ ದಯಾನಂದ ಮೃತದೇಹ ಪತ್ತೆಯಾಗಿದೆ. ನಾಯಿ ಕೂಡಾ ಮೃತದೇಹದ ಮೇಲೆ ಕುಳಿತು ರಕ್ತ ನೆಕ್ಕುತ್ತಲೇ ಇತ್ತು. ಓಡಿಸಿದರೂ ನಾಯಿ ತೆರಳಿರಲಿಲ್ಲ. ಪೊಲೀಸರು ನಾಯಿಯನ್ನು ವಶಕ್ಕೆ ಪಡೆದು ಅದರ ಮುಖದಲ್ಲಿ ಮೆತ್ತಿಕೊಂಡಿದ್ದ ರಕ್ತ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಸ್ಕ್ಯಾನಿಂಗ್‌ಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ
ಆನೇಕಲ್, ನ.12: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಲ್ಯಾಬ್ ಸಿಬ್ಬಂದಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ (Anekal News) ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ರೇಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಜಯಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Kashmir Blast: ಜಮ್ಮು ಕಾಶ್ಮೀರದ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ, 7 ಜನ ಸಾವು
ಇತ್ತೀಚಿಗೆ ಮಹಿಳೆಯೊಬ್ಬರು ಹೊಟ್ಟೆ ನೋವು ಎಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್‌ಗೆ ತೆರಳಿದ್ದರು. ಆರೋಪಿ ಜಯಕುಮಾರ್ ಸ್ಕ್ಯಾನಿಂಗ್ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ.
ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಆರೋಪಿ ಜಯಕುಮಾರ್‌ನನ್ನು ಈವರೆಗೆ ಬಂಧಿಸಿಲ್ಲ. ಬದಲಾಗಿ ಠಾಣೆಗೆ ಕರೆಸಿ, ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಿಡ್ನಾಪ್ ಮಾಡಿ, ಗನ್ ತೋರಿಸಿ ದೈಹಿಕ ಹಲ್ಲೆ... ಭಾರೀ ಸುದ್ದಿಯಾಗುತ್ತಿದೆ ಈ IAS ದಂಪತಿಯ ಡಿವೋರ್ಸ್ ಕಥೆ!