ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SDM College: ಯುನಿಸೆಫ್ ಸಹಯೋಗದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

ನೀರಿನ ಮಿತ ಬಳಕೆ ಮತ್ತು ಸರಿಯಾದ ಬಳಕೆಯ ಬಗ್ಗೆ ವಿದ್ಯಾರ್ಥಿ ಸಮೂಹದಲ್ಲಿ ಜಾಗೃತಿ ಮೂಡಿಸಲು ಯುನಿಸೆಫ್ ಮುಂದಾಗಿದ್ದು, ಅದರ ಅಂಗವಾಗಿ ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ನೀರು ಉಳಿಸಿ ಎಂಬ ಟ್ಯಾಗ್ ಲೈನ್ ನಡಿಯಲ್ಲಿ ವಿದ್ಯಾರ್ಥಿಗಳಿಂದ ಜಾಥಾ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು...

ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಹೈದ್ರಾಬಾದ್ನ ಯುನಿಸೆಫ್ನ ಹಿರಿಯ ಅಧಿಕಾರಿ ವೆಂಕಟೇಶ್ ಅರಳಿಕಟ್ಟೆ ಮಾಹಿತಿ ನೀಡಿದರು.

ಉಜಿರೆ: ಕರ್ನಾಟಕ ರಾಜ್ಯದಲ್ಲಿ 12 ಬರಪೀಡಿತ ಜಿಲ್ಲೆಗಳು ಹಾಗೂ ಎರಡು ನಗರ ಪ್ರದೇಶದ ವ್ಯಾಪ್ತಿಯಲ್ಲಿ 14,80,519 ಯುವ ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳುವ ಮೂಲಕ 3,86,432 ಘನ ಮೀಟರ್ ನೀರನ್ನು ಈಗಾಗಲೆ ಸಂರಕ್ಷಿಸಲಾಗಿದೆ ಎಂದು ಯುನಿಸೆಫ್‌ನ ಹಿರಿಯ ಅಧಿಕಾರಿ ವೆಂಕಟೇಶ್ ಅರಳಿಕಟ್ಟೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸೇವಾಸಂಸ್ಥೆಗಳ ಸಹಯೋಗದಲ್ಲಿ ರಾಜ್ಯದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಹೈದ್ರಾಬಾದ್‌ನ ಯುನಿಸೆಫ್‌ನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ, ‘ನೀರು ಉಳಿಸಿ’ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು.

ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿಗಳು ಜಾಥಾ ಮೂಲಕ ನೀರು ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.

ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದ್ದು ಇದರ ಯಶಸ್ಸಿಗಾಗಿ ಅವರು ಸರ್ವರ ಸಹಕಾರವನ್ನು ಕೋರಿದರು. ಯುನಿಸೆಫ್‌ನ ಡಾ. ಪ್ರಭಾತ್ ಮಟ್ಟಾಡಿ ಶುಭ ಹಾರೈಸಿದರು.