ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala case: ಧರ್ಮಸ್ಥಳ ಪ್ರಕರಣ; ಮಾಸ್ಕ್‌ ಮ್ಯಾನ್‌ ಮತ್ತೆ 3 ದಿನ ಎಸ್‌ಐಟಿ ಕಸ್ಟಡಿಗೆ

Mask Man Chinnayya: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಳ್ತಂಗಡಿಯ ನ್ಯಾಯಾಲಯ, ದೂರುದಾರ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿತ್ತು. ಬುಧವಾರ ಎಸ್​ಐಟಿ ಕಸ್ಟಡಿ ಮುಕ್ತಾಯ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಮತ್ತೆ ಮೂರು ದಿನ ಎಸ್ಐಟಿ ಪೊಲೀಸರು ಕಸ್ಟಡಿಗೆ ಕೋರ್ಟ್‌ ನೀಡಿದೆ.

ಧರ್ಮಸ್ಥಳ ಪ್ರಕರಣ; ಮಾಸ್ಕ್‌ ಮ್ಯಾನ್‌ ಮತ್ತೆ 3 ದಿನ ಎಸ್‌ಐಟಿ ಕಸ್ಟಡಿಗೆ

-

Prabhakara R Prabhakara R Sep 3, 2025 6:38 PM

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಮಾಸ್ಕ್ ಮ್ಯಾನ್‌ ಚಿನ್ನಯ್ಯನನ್ನು ಮತ್ತೆ 3 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸುದೀರ್ಘ ವಿಚಾರಣೆ ನಡೆಸಿದ ಎಸ್‌ಐಟಿ ಪೊಲೀಸರು ಮಾಸ್ಕ್ ಮ್ಯಾನ್‌ನನ್ನು ಕೋರ್ಟ್‌ಗೆ ಹಾಜರುಪಡಿಸಿ, ತಮ್ಮ ವಶಕ್ಕೆ ನೀಡುವಂತೆ ಕೇಳಿಕೊಂಡಿದ್ದರು. ಪೊಲೀಸರ ಮನವಿ ಸ್ವೀಕರಿಸಿದ ಕೋರ್ಟ್, ಮಾಸ್ಕ್ ಚಿನ್ನಯ್ಯನನ್ನು ಮತ್ತೆ 3 ದಿನ ಎಸ್‌ಐಟಿ ವಶಕ್ಕೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೆ.6ರಂದು ಚಿನ್ನಯ್ಯನನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಸೂಚನೆ ನೀಡಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಳ್ತಂಗಡಿಯ ನ್ಯಾಯಾಲಯ ದೂರುದಾರ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿತ್ತು. ಇಂದು ಎಸ್​ಐಟಿ ಕಸ್ಟಡಿ ಮುಕ್ತಾಯ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಎಸ್ಐಟಿ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು.

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ

ಮಂಗಳೂರು: ಧರ್ಮಸ್ಥಳ ಪ್ರಕರಣದ (Dharmasthala Case) ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ವಿದೇಶದಿಂದ ಹಣ ಬಂದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಫೆಮಾ ಮತ್ತು ಫೆರಾ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಮುಂದಾಗಿದೆ.

ತೇಜಸ್ ಎ ಗೌಡ ಹಾಗೂ ಮತ್ತೊಬ್ಬರ ದೂರು ಆಧರಿಸಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಈಗಾಗಲೇ ಧರ್ಮಸ್ಥಳ ಪ್ರಕರಣವನ್ನು ಎಸ್​ಐಟಿ ತನಿಖೆ ಮಾಡುತ್ತಿದೆ. ಇದರ ನಡುವೆಯೇ ಈಗ ಧರ್ಮಸ್ಥಳ ಪ್ರಕರಣಕ್ಕೆ ಇಡಿ ಕೂಡ ಎಂಟ್ರಿಯಾಗಿದೆ.

ಕೆಲ ಎನ್​ಜಿಒಗಳಿಗೆ ವಿದೇಶದಿಂದ ಫಂಡಿಂಗ್ ಆಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಒಡನಾಡಿ ಹಾಗೂ ಸಂವಾದ ಸಂಸ್ಥೆಯ ಹಣಕಾಸಿನ ವಹಿವಾಟು ಬಗ್ಗೆ ಪರಿಶೀಲಿಸಲು ಇಡಿ ಮುಂದಾಗಿದೆ. ಈ ಬಗ್ಗೆ ಮಾಹಿತಿ ಕೋರಿ ಎಸ್​​ಬಿಐ ಸೇರಿ ಇತರೆ ಬ್ಯಾಂಕ್‌ಗಳಿಗೆ ಪ್ಯಾನ್ ಹಾಗೂ ಅಕೌಂಟ್​ಗಳ ಕುರಿತು ಪತ್ರ ಬರೆಯಲಾಗಿದೆ. ಕಳೆದ 5 ವರ್ಷಗಳ ಟ್ರಾನ್ಸಾಕ್ಷನ್ ಬಗ್ಗೆ ನೀಡುವಂತೆ ಮನವಿ ಮಾಡಲಾಗಿದೆ.

ವಿದೇಶದಿಂದ ಹಣ ಬಂದಿರುವ ಕುರಿತು ಮಾಹಿತಿ ಹಾಗೂ ಅದಕ್ಕೆ ಸಂಬಂಧಿಸಿದ ದಾಖಲೆ ನೀಡುವಂತೆ ಬ್ಯಾಂಕ್​ಗಳಿಗೆ ಪತ್ರದ ಮೂಲಕ ಮನವಿ ಮಾಡಲಾಗಿದೆ. ಮಾಹಿತಿ ಸಂಗ್ರಹವಾದ ಮೇಲೆ ಮುಂದಿನ ಕ್ರಮವನ್ನು ಇಡಿ ಅಧಿಕಾರಿಗಳು ಕೈಗೊಳ್ಳಲಿದ್ದಾರೆ.