ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನನ್ನ, ಡಿಕೆಶಿ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ, ಆತ್ಮೀಯತೆಯೂ ಇಲ್ಲ: ಬಿ.ವೈ. ವಿಜಯೇಂದ್ರ

BY Vijayendra: ನನ್ನ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ. ಯಾವುದೇ ಆತ್ಮೀಯತೆಯೂ ನಮ್ಮ ಮಧ್ಯೆ ಇಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಕೊಡಬೇಕಾದ ಗೌರವವನ್ನು ಕೊಟ್ಟಿದ್ದೇನೆ. ಒಬ್ಬ ಶಾಸಕನಾಗಿ ರಾಜ್ಯದ ಮುಖ್ಯಮಂತ್ರಿಗೆ ಕೊಡಬೇಕಾದ ಗೌರವವನ್ನು ಕೊಡಬೇಕಾಗುತ್ತದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.

ಮಂಗಳೂರು, ಜೂ.26: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಇಬ್ಬರೂ ಜಯಶಾಲಿಯಾಗಿದ್ದಾರೆ. ಚುನಾವಣೆ ವೇಳೆ ಅಡ್ಡ ಮತದಾನ ನಡೆದಿದೆ. ಇದರಿಂದ ನಾನು ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಬಹಳ ನೋವನ್ನು ಅನುಭವಿಸುವಂತಾಗಿದೆ. ಬಿಜೆಪಿ ಶಾಸಕರಿಂದ ಅಡ್ಡ ಮತದಾನವು ಬೇರೆ ಬೇರೆ ಚರ್ಚೆಗೆ ಕಾರಣವಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಆಗಬೇಕೆಂದು ಹೇಳಿದ್ದು ನಿಜ ಎಂದ ಅವರು, ಪಕ್ಷದ ಹಿರಿಯ ನಾಯಕರ ಅಭಿಪ್ರಾಯ- ಕಿವಿಮಾತಿನನ್ವಯ ಅವರೆಲ್ಲರ ಮಾತಿಗೆ ಗೌರವ ಕೊಟ್ಟು ಕ್ಷೇತ್ರದ ಭಕ್ತನಾಗಿ ಪ್ರಾರ್ಥನೆ ಸಲ್ಲಿಸಲು ಬಂದಿರುವುದಾಗಿ ತಿಳಿಸಿದರು.

ಸಾಕಷ್ಟು ಅಪಪ್ರಚಾರ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಡಿ.ಕೆ.ಶಿವಕುಮಾರ್- ನನ್ನ ನಡುವಿನ ಆತ್ಮೀಯತೆ, ಎಲ್ಲೋ ಒಂದು ಕಡೆ ನಾನೇ ಅಡ್ಡ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದೇನೆ ಎಂಬ ಆರೋಪಗಳೂ ಸಾಮಾಜಿಕ ಜಾಲತಾಣ, ಪತ್ರಿಕಾ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾದುದು ನಮ್ಮವರೇ ಎಂಬ ಅರಿವು ನನಗಿದೆ ಎಂದರು.

ನಮ್ಮ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಹಿಂದಿನ ಅಧ್ಯಕ್ಷ ಅಮಿತ್ ಶಾ ಮತ್ತು ಪಕ್ಷದ ಹಿರಿಯರ ಆಶೀರ್ವಾದದಿಂದ ಕೆಲಸ ಮಾಡುತ್ತಿದ್ದೇನೆ. ರಾಜ್ಯಾಧ್ಯಕ್ಷನಾಗಿ ಇಂಥ ಕೀಳು ಮಟ್ಟದ ಕೆಲಸ ಮಾಡುವ ಪ್ರಶ್ನೆಯೇ ಉದ್ಭವವಾಗದು ಎಂದು ತಿಳಿಸಿದರು. ವಿಜಯೇಂದ್ರ- ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಯಾವುದೇ ಆತ್ಮೀಯತೆಯೂ ನಮ್ಮ ಮಧ್ಯೆ ಇಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಕೊಡಬೇಕಾದ ಗೌರವವನ್ನು ಕೊಟ್ಟಿದ್ದೇನೆ. ಒಬ್ಬ ಶಾಸಕನಾಗಿ ರಾಜ್ಯದ ಮುಖ್ಯಮಂತ್ರಿಗೆ ಕೊಡಬೇಕಾದ ಗೌರವವನ್ನು ಕೊಡಬೇಕಾಗುತ್ತದೆ ಎಂದು ತಿಳಿಸಿದರು.

ದೆಹಲಿಯಲ್ಲಿ ಇದ್ದು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ ಕುರಿತು ಅವರು ವಿವರಿಸಿದರು. ನಮ್ಮೆಲ್ಲ ಶಾಸಕರು, ಸಂಸದರು, ಪಕ್ಷದ ಜಿಲ್ಲಾ ಅಧ್ಯಕ್ಷರ ಜತೆ ಶ್ರೀದೇವರ (ಶ್ರೀ ಮಂಜುನಾಥೇಶ್ವರ) ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾದ ರಾಜ್ಯ ಚುನಾವಣಾ ಆಯೋಗ: ಛಲವಾದಿ ನಾರಾಯಣಸ್ವಾಮಿ ಆರೋಪ

ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಕಾಣುತ್ತಿದೆ. ಉತ್ತಮ ಮಳೆಯಾಗಿ ನಾಡಿನ ರೈತನ ಬದುಕು ಹಸನಾಗಬೇಕು; ರೈತರ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕು. ಅವರಿಗೆ ಒಳಿತಾಗಲು ಪ್ರಾರ್ಥನೆ ಸಲ್ಲಿಸಿದ್ದಾಗಿ ತಿಳಿಸಿದರು. ಜತೆಗೆ ಮುಂದೆ ಮತ್ತೊಮ್ಮೆ ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಕರ್ನಾಟಕ ರಾಜ್ಯದಲ್ಲಿ ನಮ್ಮೆಲ್ಲರ ನೇತೃತ್ವದಲ್ಲಿ ಒಂದು ಜನಪರ ಸರ್ಕಾರ ಅಧಿಕಾರಕ್ಕೆ ಬರಲಿ; ಹಿಂದುಗಳ ರಕ್ಷಣೆ ಮಾಡುವ, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮಾಡುವ ಒಳ್ಳೆಯ ಸರ್ಕಾರ ಬರಲೆಂದು ಪ್ರಾರ್ಥಿಸಿದ್ದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.