ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala: ಧರ್ಮಸ್ಥಳದಲ್ಲಿ ‘ನೀರು ಉಳಿಸಿ’ ಕಾರ್ಯಕ್ರಮದ ವಾರ್ಷಿಕ ವರದಿ ಬಿಡುಗಡೆ

ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆಯು ರಾಜ್ಯಾದ್ಯಂತ ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕ ಹಲವಾರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಇದೀಗ ಯುನಿಸೆಫ್ ಸಹಯೋಗದೊಂದಿಗೆ ನೀರು ಉಳಿಸಿ ಎಂಬ ಮಹತ್ವದ ಯೋಜನೆ ಕಾರ್ಯಗತಗೊಂಡಿದೆ.

ಯುನಿಸೆಫ್‌ನ ನೀರು ಉಳಿಸಿ ಕಾರ್ಯಕ್ರಮದ ವಾರ್ಷಿಕ ವರದಿ ಬಿಡುಗಡೆ

‘ನೀರು ಉಳಿಸಿ’ ಕಾರ್ಯಕ್ರಮದ ವಾರ್ಷಿಕ ವರದಿಯನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.

Profile Sushmitha Jain Feb 17, 2025 12:29 PM

ಉಜಿರೆ: ಯುನಿಸೆಫ್ ಹಮ್ಮಿಕೊಂಡಿರುವ ‘ನೀರು ಉಳಿಸಿ’ ಅಭಿಯಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೀರು ಉಳಿಸಿ ಕಾರ್ಯಕ್ರಮದ ವಾರ್ಷಿಕ ವರದಿಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಜಲಸಂರಕ್ಷಣೆ ಬಗ್ಯೆ ಯುನಿಸೆಫ್‌ನ ಕಾಳಜಿ ಹಾಗೂ ಪ್ರಯತ್ನ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೇಳಿ ಅವರನ್ನು ಅಭಿನಂದಿಸಿದರು.

ಈ ಸುದ್ದಿಯನ್ನು ಓದಿ: Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ; ಅರ್ಜಿ ಸಲ್ಲಿಕೆಗೆ ಏ. 25 ಕಡೇ ದಿನ

ಈ ಸಂದರ್ಭದಲ್ಲಿ ಹೇಮಾವತಿ ವಿ. ಹೆಗ್ಗಡೆ ಉಪಸ್ಥಿತರಿದ್ದರು. ಹೈದ್ರಾಬಾದ್ನ ಯುನಿಸೆಫ್ನ ಹಿರಿಯ ಅಧಿಕಾರಿಗಳಾದ ವೆಂಕಟೇಶ್ ಅರಳಿಕಟ್ಟೆ ಮತ್ತು ಡಾ. ಪ್ರಭಾತ್ ಮಟ್ಟಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ ಪೈ ಹಾಗೂ ನಿಖಿಲೇಶ್ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯದಲ್ಲಿ 12 ಬರಪೀಡಿತ ಜಿಲ್ಲೆಗಳು ಹಾಗೂ ಎರಡು ನಗರ ಪ್ರದೇಶದ ವ್ಯಾಪ್ತಿಯಲ್ಲಿ 14,80,519 ಯುವ ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳುವ ಮೂಲಕ 3,86,432 ಘನ ಮೀಟರ್ ನೀರನ್ನು ಈಗಾಗಲೆ ಸಂರಕ್ಷಿಸಲಾಗಿದೆ ಎಂದು ಯುನಿಸೆಫ್‌ನ ಹಿರಿಯ ಅಧಿಕಾರಿ ವೆಂಕಟೇಶ್ ಅರಳಿಕಟ್ಟೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸೇವಾಸಂಸ್ಥೆಗಳ ಸಹಯೋಗದಲ್ಲಿ ರಾಜ್ಯದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಹೈದ್ರಾಬಾದ್‌ನ ಯುನಿಸೆಫ್‌ನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ, ‘ನೀರು ಉಳಿಸಿ’ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಮಾತನಾಡಿದರು.

ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದ್ದು ಇದರ ಯಶಸ್ಸಿಗಾಗಿ ಅವರು ಸರ್ವರ ಸಹಕಾರವನ್ನು ಕೋರಿದರು. ಯುನಿಸೆಫ್‌ನ ಡಾ. ಪ್ರಭಾತ್ ಮಟ್ಟಾಡಿ ಶುಭ ಹಾರೈಸಿದರು.